AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಪ್ರದೇಶ: ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಬಾಲಕಿ ಆತ್ಮಹತ್ಯೆ

ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಸಂತ್ರಸ್ತೆಯ ತಂದೆ ದಾಖಲಿಸಿದ ಎಫ್‌ಐಆರ್ ಪ್ರಕಾರ, ಸೋಮವಾರ ಉತ್ತರ ಪ್ರದೇಶದ ಭೋಜಿಪುರ ಪ್ರದೇಶದ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಉತ್ತರಪ್ರದೇಶ: ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಬಾಲಕಿ ಆತ್ಮಹತ್ಯೆ
ಸಾವು
ನಯನಾ ರಾಜೀವ್
|

Updated on: Aug 29, 2024 | 8:22 AM

Share

ಕಬ್ಬಿನ ಗದ್ದೆಯಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾದ ಒಂದು ದಿನದ ನಂತರ 13 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸಂತ್ರಸ್ತೆಯ ತಂದೆ ದಾಖಲಿಸಿದ ಎಫ್‌ಐಆರ್ ಪ್ರಕಾರ, ಸೋಮವಾರ ಉತ್ತರ ಪ್ರದೇಶದ ಭೋಜಿಪುರ ಪ್ರದೇಶದ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಅಂಕಿತ್ ಮತ್ತು ಪಂಕಜ್ ಎಂಬ ಇಬ್ಬರು ವ್ಯಕ್ತಿಗಳು ಅವಳನ್ನು ಹಿಡಿದು ಕಬ್ಬಿನ ಗದ್ದೆಗೆ ಎಳೆದೊಯ್ದು ಸಾಮೂಹಿಕ ಅತ್ಯಾಚಾರವೆಸಗಿದಾಗ ತನ್ನ ಮಗಳು ಬಟ್ಟೆ ಒಣಗಿಸಲು ಹೊಲಕ್ಕೆ ಹೋಗಿದ್ದಳು ಎಂದು ಅವರು ಪೊಲೀಸರಿಗೆ ತಿಳಿಸಿದರು.

ಬಾಲಕಿಯ ಕಿರುಚಾಟವನ್ನು ಕೇಳಿದ ಬಾಲಕಿಯ ಸಹೋದರಿ ಅಲ್ಲಿಗೆ ತಲುಪಿದ ನಂತರ ಆರೋಪಿ ಪರಾರಿಯಾಗಿದ್ದಾನೆ ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ. ಮಂಗಳವಾರ ಮಗಳು ಆತ್ಮಹತ್ಯೆಗೆ ಯತ್ನಿಸಿದ್ದು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆಕೆಯನ್ನು ಉಳಿಸಲಾಗಲಿಲ್ಲ ಎಂದು ತಂದೆ ಪೊಲೀಸರಿಗೆ ತಿಳಿಸಿದ್ದಾರೆ.

ಮತ್ತಷ್ಟು ಓದಿ: Crime News: ತನ್ನ ಮೇಲೆ ಅತ್ಯಾಚಾರವೆಸಗಿದವನನ್ನು ಬಂಧಿಸಲು ಬಟ್ಟೆ ಬಿಚ್ಚಿ ಪ್ರತಿಭಟಿಸಿದ ಯುವತಿ

ಈ ಪ್ರಕರಣದಲ್ಲಿ ಎಫ್‌ಐಆರ್ ದಾಖಲಾಗಿದ್ದು, ಒಬ್ಬ ಆರೋಪಿಯನ್ನು ಬಂಧಿಸಲಾಗಿದ್ದು, ಮತ್ತೊಬ್ಬನನ್ನು ಬಂಧಿಸಲು ಶೋಧ ನಡೆಸಲಾಗುತ್ತಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಗ್ರಾಮೀಣ) ಮುಖೇಶ್ ಚಂದ್ರ ಮಿಶ್ರಾ ತಿಳಿಸಿದ್ದಾರೆ.

ಬಾಲಕಿಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಬಾಲಕಿ 8ನೇ ತರಗತಿ ವಿದ್ಯಾರ್ಥಿನಿಯಾಗಿದ್ದಳು. ವಿವರವಾದ ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ಮಿಶ್ರಾ ಸೇರಿಸಲಾಗಿದೆ.

ಇತ್ತೀಚೆಗೆ ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿವೆ, ಕೋಲ್ಕತ್ತಾದ ಆರ್​ಜಿ ಕರ್ ವೈದ್ಯಕೀಯ ಕಾಲೇಜು, ಆಸ್ಪತ್ರೆಯಲ್ಲಿ ತರಬೇತಿ ನಿರತ ವೈದ್ಯೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
‘ಬರೀ ಟಾಸ್ಕ್ ಆಡಿದರೆ ಸಾಲದು’: ಧನುಷ್ ಆಟದ ಬಗ್ಗೆ ಲಕ್ಷ್ಮಿ ನೇರ ಮಾತು
‘ಬರೀ ಟಾಸ್ಕ್ ಆಡಿದರೆ ಸಾಲದು’: ಧನುಷ್ ಆಟದ ಬಗ್ಗೆ ಲಕ್ಷ್ಮಿ ನೇರ ಮಾತು
ಹಾಸನದಲ್ಲೊಂದು ಅಪರೂಪದ ಘಟನೆ: ಎರಡು ಕಾಡಾನೆಗಳ ಜಗಳ ಬಿಡಿಸಿದ ಶ್ವಾನ
ಹಾಸನದಲ್ಲೊಂದು ಅಪರೂಪದ ಘಟನೆ: ಎರಡು ಕಾಡಾನೆಗಳ ಜಗಳ ಬಿಡಿಸಿದ ಶ್ವಾನ
ಧನ್ವೀರ್ ಗೌಡ ಮನೆಗೆ ಮುತ್ತಿಗೆ ಹಾಕುತ್ತೇವೆ’: ಝೈದ್ ಖಾನ್ ಫ್ಯಾನ್ಸ್ ಗರಂ
ಧನ್ವೀರ್ ಗೌಡ ಮನೆಗೆ ಮುತ್ತಿಗೆ ಹಾಕುತ್ತೇವೆ’: ಝೈದ್ ಖಾನ್ ಫ್ಯಾನ್ಸ್ ಗರಂ
ಪಿ.ಎಸ್.ಲೇನ್ ರಸ್ತೆಯಲ್ಲಿ ಏಕಾಏಕಿ ಕುಸಿದ ಕಾಂಪೌಂಡ್​​: ಬೈಕ್​​ಗಳು ಜಖಂ
ಪಿ.ಎಸ್.ಲೇನ್ ರಸ್ತೆಯಲ್ಲಿ ಏಕಾಏಕಿ ಕುಸಿದ ಕಾಂಪೌಂಡ್​​: ಬೈಕ್​​ಗಳು ಜಖಂ
ಶೂನಲ್ಲಿ ಹೈಡ್ರೋಪೋನಿಕ್ ಗಾಂಜಾ ಇಟ್ಟುಕೊಂಡು ಬಂದು ಬೆಂಗಳೂರಿನಲ್ಲಿ ಲಾಕ್
ಶೂನಲ್ಲಿ ಹೈಡ್ರೋಪೋನಿಕ್ ಗಾಂಜಾ ಇಟ್ಟುಕೊಂಡು ಬಂದು ಬೆಂಗಳೂರಿನಲ್ಲಿ ಲಾಕ್
ಸೀಗೆಗುಡ್ಡದಲ್ಲಿ ಜನವೋ ಜನ,ಜಿಲ್ಲಾಡಳಿತಕ್ಕೆ ಟೆನ್ಷನ್ ತಂದಿಟ್ಟ ಪ್ರೇಮದ ಊರಲಿ
ಸೀಗೆಗುಡ್ಡದಲ್ಲಿ ಜನವೋ ಜನ,ಜಿಲ್ಲಾಡಳಿತಕ್ಕೆ ಟೆನ್ಷನ್ ತಂದಿಟ್ಟ ಪ್ರೇಮದ ಊರಲಿ
ಧನ್ವೀರ್ ಫೋಟೋಗೆ ಮಸಿ ಬಳಿದು ಝೈದ್ ಖಾನ್ ಅಭಿಮಾನಿಗಳ ಆಕ್ರೋಶ
ಧನ್ವೀರ್ ಫೋಟೋಗೆ ಮಸಿ ಬಳಿದು ಝೈದ್ ಖಾನ್ ಅಭಿಮಾನಿಗಳ ಆಕ್ರೋಶ
ಅವಾಂಟ್ ಬಿಕೆಜಿ ಆಸ್ಪತ್ರೆಯಲ್ಲಿ AI ತಂತ್ರಜ್ಞಾನ ಪರಿಚಯ
ಅವಾಂಟ್ ಬಿಕೆಜಿ ಆಸ್ಪತ್ರೆಯಲ್ಲಿ AI ತಂತ್ರಜ್ಞಾನ ಪರಿಚಯ
ರೈತನ ಮೆಣಸಿನಕಾಯಿ ಹೊಲಕ್ಕೆ ರಚಿತಾ ರಾಮ್‌, ರಶ್ಮಿಕಾ ಮಂದಣ್ಣ ಕಣ್ಗಾವಲು!
ರೈತನ ಮೆಣಸಿನಕಾಯಿ ಹೊಲಕ್ಕೆ ರಚಿತಾ ರಾಮ್‌, ರಶ್ಮಿಕಾ ಮಂದಣ್ಣ ಕಣ್ಗಾವಲು!
ಮಕ್ಕಳು ಅಂಗಳ ಅಗೆಯುವಾಗ ಕುಡಿಕೆಯಲ್ಲಿ ಪ್ರಾಚೀನ ನಾಣ್ಯಗಳು ಪತ್ತೆ
ಮಕ್ಕಳು ಅಂಗಳ ಅಗೆಯುವಾಗ ಕುಡಿಕೆಯಲ್ಲಿ ಪ್ರಾಚೀನ ನಾಣ್ಯಗಳು ಪತ್ತೆ