AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾತ್ರೆಯ ಸ್ವಿಂಗ್ ರಾಡ್​ಗೆ ಕೂದಲು ಸಿಲುಕಿ ಬಾಲಕಿಯ ನೆತ್ತಿಯ ಚರ್ಮವೇ ಕಿತ್ತು ಬಂತು!

ಉತ್ತರ ಪ್ರದೇಶದ ಕನ್ನೌಜ್ ಜಾತ್ರೆಯಲ್ಲಿ ಸ್ವಿಂಗ್ ರಾಡ್‌ನಲ್ಲಿ ಕೂದಲು ಸಿಕ್ಕಿಹಾಕಿಕೊಂಡ ಹಿನ್ನೆಲೆಯಲ್ಲಿ 13 ವರ್ಷದ ಹುಡುಗಿಯ ನೆತ್ತಿಯೇ ಕಿತ್ತುಹೋಗಿದೆ. ಈ ಭಯಾನಕ ವಿಡಿಯೋ ವೈರಲ್ ಆಗಿದೆ. ಈ ಘಟನೆಯ ವಿಡಿಯೋ ಸೋಮವಾರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಸ್ವಿಂಗ್ ನಿಲ್ಲುವ ವೇಳೆಗೆ ಸಂಪೂರ್ಣವಾಗಿ ನೆತ್ತಿ ಕಿತ್ತು ಹೋಗಿದ್ದು, ಆಕೆಯ ಸ್ಥಿತಿ ಚಿಂತಾಜನಕವಾಗಿದೆ.

ಜಾತ್ರೆಯ ಸ್ವಿಂಗ್ ರಾಡ್​ಗೆ ಕೂದಲು ಸಿಲುಕಿ ಬಾಲಕಿಯ ನೆತ್ತಿಯ ಚರ್ಮವೇ ಕಿತ್ತು ಬಂತು!
ಜಾತ್ರೆಯ ಸ್ವಿಂಗ್ ರಾಡ್​ಗೆ ಕೂದಲು ಸಿಲುಕಿ ಬಾಲಕಿಯ ನೆತ್ತಿಯ ಚರ್ಮವೇ ಕಿತ್ತು ಬಂತು!
ಸುಷ್ಮಾ ಚಕ್ರೆ
|

Updated on: Nov 11, 2024 | 6:06 PM

Share

ನೊಯ್ಡಾ: ಉತ್ತರ ಪ್ರದೇಶದ ಕನೌಜ್‌ನ ಮಧೋನಗರ ಗ್ರಾಮದ ಜಾತ್ರೆಯೊಂದರಲ್ಲಿ ನಡೆದ ಭೀಕರ ಅಪಘಾತದಲ್ಲಿ 13 ವರ್ಷದ ಅನುರಾಧಾ ಕಥೇರಿಯಾ ಎಂಬ ಬಾಲಕಿಯ ಕೂದಲು ಸ್ವಿಂಗ್ ರೈಡ್‌ನ ಯಂತ್ರಕ್ಕೆ ಸಿಲುಕಿ ಗಂಭೀರವಾದ ಗಾಯಗಳಾಗಿದ್ದು, ಆಕೆಯ ನೆತ್ತಿ ಕಿತ್ತುಹೋಗಿದೆ. ಈ ಘಟನೆಯ ವಿಡಿಯೋದಲ್ಲಿ ರಾಡ್‌ನಿಂದ ಅವಳ ನೆತ್ತಿ ನೇತಾಡುತ್ತಿರುವುದನ್ನು ತೋರಿಸುತ್ತದೆ. ಆಕೆಯ ಸುತ್ತಲೂ ಇದ್ದವರು ಸ್ವಿಂಗ್ ಅನ್ನು ನಿಲ್ಲಿಸಲು ಪ್ರಯತ್ನಿಸಿದರು. ಆದರೆ, ಅಷ್ಟರೊಳಗೆ ಆಕೆಯ ನೆತ್ತಿಯ ಕೂದಲು ಹಾಗೂ ಚರ್ಮವೂ ಕಿತ್ತುಬಂದಾಗಿತ್ತು.

ತಲೆಗೆ ಪೆಟ್ಟಾಗಿ ತೀವ್ರ ರಕ್ತಸ್ರಾವದಿಂದ ಅನುರಾಧ ಸ್ಥಳದಲ್ಲೇ ಪ್ರಜ್ಞೆ ತಪ್ಪಿ ಬಿದ್ದಿದ್ದಾಳೆ. ಆಕೆಯ ಕುಟುಂಬವು ಆರಂಭದಲ್ಲಿ ಅವಳನ್ನು ಗುರ್ಸಹೈಗಂಜ್‌ನಲ್ಲಿರುವ ಖಾಸಗಿ ಆಸ್ಪತ್ರೆಗೆ ಸಾಗಿಸಿತು, ಆದರೆ ಆಕೆಯ ಸ್ಥಿತಿಯು ಹದಗೆಟ್ಟಿದ್ದರಿಂದ, ಅವಳನ್ನು ಪಿಜಿಐಗೆ ಕರೆದುಕೊಂಡು ಹೋಗಲಾಯಿತು. ವಿಶೇಷ ಚಿಕಿತ್ಸೆಗಾಗಿ ಲಕ್ನೋಗೆ ಸೇರಿಸಲಾಯಿತು. ಈಗಲೂ ಆಕೆ ಚಿಂತಾಜನಕ ಸ್ಥಿತಿಯಲ್ಲಿಯೇ ಉಳಿದಿದ್ದಾಳೆ.

ಇದನ್ನೂ ಓದಿ: Viral: ನಮಗೆ 7-8 ಮಕ್ಕಳು ಇದ್ದಾರೆ ಆದ್ರೆ ಯಾಕೆ ಸರ್ಕಾರ ನಮ್ಗೆ ಕೆಲಸ ಕೊಡ್ತಿಲ್ಲ ಎಂದ ಆಸಾಮಿ; ವಿಡಿಯೋ ವೈರಲ್‌

ಈ ಘಟನೆಯ ವಿಡಿಯೋ ಇಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಸ್ವಿಂಗ್ ನಿಲ್ಲುವ ವೇಳೆಗೆ ಸಂಪೂರ್ಣ ನೆತ್ತಿ ಕಿತ್ತು ಹೋಗಿದ್ದು, ಆಕೆಯ ಸ್ಥಿತಿ ಚಿಂತಾಜನಕವಾಗಿದೆ. ಕನೌಜ್‌ನ ತಾಲ್ಗ್ರಾಮ್ ಪೊಲೀಸ್ ಠಾಣಾ ವ್ಯಾಪ್ತಿಯ ಮಾಧೋನಗರ ಗ್ರಾಮದಲ್ಲಿ ಜಾತ್ರೆಯ ವೇಳೆ ಈ ಅವಘಡ ಸಂಭವಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್