AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ: ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತ ಪಡೆದ 14 ಮಕ್ಕಳಿಗೆ ಹೆಪಟೈಟಿಸ್, ಎಚ್​ಐವಿ ಸೋಂಕು

ಉತ್ತರ ಪ್ರದೇಶ ಕಾನ್ಪುರದ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತ ಪಡೆದ 14 ಮಕ್ಕಳಿಗೆ ಎಚ್​ಐವಿ, ಹೆಪಟೈಟಿಸ್ ಬಿ ಹಾಗೂ ಸಿ ಸೋಂಕು ತಗುಲಿರುವುದು ಪತ್ತೆಯಾಗಿದೆ. ರಕ್ತದಾನದ ವೇಳೆ ಸೂಕ್ತ ಪರೀಕ್ಷೆ ಮಾಡದ ಕಾರಣ ಈ ಪ್ರಮಾದ ನಡೆದಿದೆ ಎಂದು ವರದಿಯಾಗಿದೆ. ಕಾನ್ಪುರದ ಲಾಲಾ ಲಜಪತ್​ ರಾಯ್ ಸರ್ಕಾರಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ.

ಉತ್ತರ ಪ್ರದೇಶ: ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತ ಪಡೆದ 14 ಮಕ್ಕಳಿಗೆ ಹೆಪಟೈಟಿಸ್, ಎಚ್​ಐವಿ ಸೋಂಕು
ಎಚ್​ಐವಿ
ನಯನಾ ರಾಜೀವ್
|

Updated on: Oct 24, 2023 | 1:02 PM

Share

ಉತ್ತರ ಪ್ರದೇಶ ಕಾನ್ಪುರದ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತ ಪಡೆದ 14 ಮಕ್ಕಳಿಗೆ ಎಚ್​ಐವಿ, ಹೆಪಟೈಟಿಸ್ ಬಿ ಹಾಗೂ ಸಿ ಸೋಂಕು ತಗುಲಿರುವುದು ಪತ್ತೆಯಾಗಿದೆ. ರಕ್ತದಾನದ ವೇಳೆ ಸೂಕ್ತ ಪರೀಕ್ಷೆ ಮಾಡದ ಕಾರಣ ಈ ಪ್ರಮಾದ ನಡೆದಿದೆ ಎಂದು ವರದಿಯಾಗಿದೆ. ಕಾನ್ಪುರದ ಲಾಲಾ ಲಜಪತ್​ ರಾಯ್ ಸರ್ಕಾರಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ.

180 ಥಲಸ್ಸೆಮಿಯಾ ರೋಗಿಗಳು ಆಸ್ಪತ್ರೆಯಲ್ಲಿ ರಕ್ತ ಪಡೆದಿದ್ದಾರೆ, 14 ಮಕ್ಕಳು ಖಾಸಗಿ ಮತ್ತು ಜಿಲ್ಲಾ ಆಸ್ಪತ್ರೆಗಳಿಂದ ರಕ್ತಪಡೆದರು. ನಂತರದ ಪರೀಕ್ಷೆಯಲ್ಲಿ ಎಚ್​ಐವಿ ಹಾಗೂ ಹೆಪಟೈಟಿಸ್ ಸೋಂಕಿಗೆ ಒಳಗಾಗಿದ್ದಾರೆ. ಆರರಿಂದ 16 ವರ್ಷದೊಳಗಿನ ಮಕ್ಕಳು ಸೋಂಕಿಗೆ ತುತ್ತಾಗಿದ್ದಾರೆ, ಅದರಲ್ಲಿ ಏಳು ಮಕ್ಕಳಿಗೆ ಹೆಪಟೈಟಿಸ್ ಬಿ ಹಾಗೂ ಐವರಿಗೆ ಹೆಪಟೈಟಿಸ್ ಸಿ ಹಾಗೂ ಇಬ್ಬರಿಗೆ ಎಚ್​ಐವಿ ಇರುವುದು ಪತ್ತೆಯಾಗಿದೆ.

ಹೆಪಟೈಟಿಸ್ ದೃಢಪಟ್ಟವರನ್ನು ಗ್ಯಾಸ್ಟ್ರೋಎಂಟರಾಲಜಿ ವಿಭಾಗಕ್ಕೆ ಹಾಗೂ ಎಚ್​ಐವಿ ರೋಗಿಗಳನ್ನು ಕಾನ್ಪುರದ ಆಸ್ಪತ್ರೆಗೆ ರವಾನಿಸಲಾಗಿದೆ. ಈ ವೈರಸ್​ಗಳು ಥಲಸ್ಸೆಮಿಯಾ ಕಾಯಿಲೆಯಿಂದ ಬಳಲುತ್ತಿರುವ ಮಕ್ಕಳಿಗೆ ಹೆಚ್ಚು ಗಂಭೀರ ಆರೋಗ್ಯ ಸಮಸ್ಯೆಯನ್ನುಂಟು ಮಾಡುತ್ತದೆ.

ಮತ್ತಷ್ಟು ಓದಿ:HIV AIDS: ಎಚ್‌ಐವಿ ಏಡ್ಸ್ ಕುರಿತು ಈಗಲೂ ತಿಳಿದುಕೊಳ್ಳಬೇಕಾದ ಅಂಶಗಳಿವು

ಯಾರಾದರೂ ರಕ್ತದಾನ ಮಾಡಿದಾಗ ವೈರಸ್ ಇರುವಿಕೆಯನ್ನು ಪರೀಕ್ಷಿಸಲಾಗುತ್ತದೆ. ಆದರೆ ಮಕ್ಕಳು ರಕ್ತ ಪಡೆಯಲು ವಿಂಡೋ ಪೀರಿಯಡ್​ನಲ್ಲಿ ಇರಬೇಕಾಗುತ್ತದೆ. ಈ ಹಂತದಲ್ಲಿ ರಕ್ತದಲ್ಲಿ ವೈರಸ್ ಇರುವಿಕೆಯನ್ನು ಪರೀಕ್ಷೆಯಿಂದ ಕಂಡುಹಿಡಿಯಲಾಗುವುದಿಲ್ಲ ಹೆಪಟೈಟಿಸ್ ವೈರಸ್ ನಿಯಂತ್ರಣ ಮಂಡಳಿಯು ಸೋಂಕಿನ ಮೂಲವನ್ನು ಕಂಡುಹಿಡಿಯಲು ತನಿಖೆ ನಡೆಸಲಿದೆ.

ಥಲಸ್ಸೆಮಿಯಾ ಎಂಬುದು ದೇಹವು ಸಾಕಷ್ಟು ಹಿಮೋಗ್ಲೋಬಿನ್​ ಅನ್ನು ಉತ್ಪಾದಿಸಲು ಸಾಧ್ಯವಾಗದ ಸ್ಥಿತಿಯಾಗಿದೆ. ಭಾರತದಲ್ಲಿ ಥಲಸ್ಸೆಮಿಯಾದಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆ ಹೆಚ್ಚು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ