ಉತ್ತರಪ್ರದೇಶ: ಭೀಕರ ರಸ್ತೆ ಅಪಘಾತದಲ್ಲಿ 24 ಭಕ್ತರು ದುರ್ಮರಣ

| Updated By: ವಿವೇಕ ಬಿರಾದಾರ

Updated on: Oct 01, 2022 | 10:33 PM

ಉತ್ತರಪ್ರದೇಶದ ಖಾನ್ಪುರ ಜಿಲ್ಲೆಯ ಘಟಂಪುರ ಪ್ರದೇಶದಲ್ಲಿ ಟ್ರ್ಯಾಕ್ಟರ್‌ ಟ್ರಾಲಿ ಪಲ್ಟಿಯಾಗಿ 22 ಭಕ್ತರು ಸಾವನ್ನಪ್ಪಿದ್ದಾರೆ.

ಉತ್ತರಪ್ರದೇಶ: ಭೀಕರ ರಸ್ತೆ ಅಪಘಾತದಲ್ಲಿ 24 ಭಕ್ತರು ದುರ್ಮರಣ
ಸಾಂಧರ್ಬಿಕ ಚಿತ್ರ
Follow us on

ಲಖನೌ: ಉತ್ತರಪ್ರದೇಶದ ಖಾನ್ಪುರ ಜಿಲ್ಲೆಯ ಘಟಂಪುರ ಪ್ರದೇಶದಲ್ಲಿ ಶನಿವಾರ (ಅ. 1) ಟ್ರ್ಯಾಕ್ಟರ್‌ ಟ್ರಾಲಿ ಪಲ್ಟಿಯಾಗಿ 22 ಭಕ್ತರು ಸಾವನ್ನಪ್ಪಿದ್ದಾರೆ.  ಹಲವರ ಸ್ಥಿತಿ ಚಿಂತಾಜನಕವಾಗಿದೆ. ಮೃತರ ಸಂಖ್ಯೆ 24 ಕ್ಕೆ ಏರಿಕೆಯಾಗಿದೆ. ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ. ಗಾಯಾಳುಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ತಲಾ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಘಟನಾ ಸ್ಥಳಕ್ಕೆ ಉತ್ತರಪ್ರದೇಶದ ಇಬ್ಬರು ಸಚಿವರು ಭೇಟಿ ನೀಡಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಮೃತ  ಭಕ್ತರು ಫತೇಪುರದ ದೇವಿ  ದರ್ಶನ  ಪಡೆದು ಮನೆಗೆ ಮರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಭಕ್ತರೆಲ್ಲರೂ ಕೊರ್ತಾ ಗ್ರಾಮದವರು ಎನ್ನಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:12 pm, Sat, 1 October 22