ಉತ್ತರ ಪ್ರದೇಶದಲ್ಲಿ ಭಾರೀ ಮಳೆಯಿಂದ 25 ಜನ ಸಾವು; ಶಾಲೆಗಳಿಗೆ ರಜೆ ಘೋಷಣೆ

ಉತ್ತರ ಪ್ರದೇಶದಾದ್ಯಂತ ಭಾನುವಾರ ತಡರಾತ್ರಿಯವರೆಗೆ ಸುರಿದ ಮಳೆಯಿಂದ 25 ಜನರು ಸಾವನ್ನಪ್ಪಿದ್ದಾರೆ. ಮನೆ ಕುಸಿದಿದ್ದರಿಂದ ಸಾವಿನ ಸಂಖ್ಯೆ ಹೆಚ್ಚಾಗಿದೆ.

ಉತ್ತರ ಪ್ರದೇಶದಲ್ಲಿ ಭಾರೀ ಮಳೆಯಿಂದ 25 ಜನ ಸಾವು; ಶಾಲೆಗಳಿಗೆ ರಜೆ ಘೋಷಣೆ
ಉತ್ತರ ಪ್ರದೇಶದಲ್ಲಿ ಮಳೆ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Oct 10, 2022 | 12:55 PM

ಲಕ್ನೋ: ಉತ್ತರ ಪ್ರದೇಶದಾದ್ಯಂತ (Uttar Pradesh Rain) ಭಾನುವಾರ ತಡರಾತ್ರಿಯವರೆಗೆ ಸುರಿದ ಮಳೆಯಿಂದ (Rainfall) 25 ಜನರು ಸಾವನ್ನಪ್ಪಿದ್ದಾರೆ. ಮನೆ ಕುಸಿದಿದ್ದರಿಂದ ಸಾವಿನ ಸಂಖ್ಯೆ ಹೆಚ್ಚಾಗಿದೆ. ಕಳೆದ 48 ಗಂಟೆಗಳಲ್ಲಿ ಎಡೆಬಿಡದೆ ಸುರಿದ ಮಳೆಯಿಂದಾಗಿ ರಾಜ್ಯದ ಎಲ್ಲಾ ಪ್ರಮುಖ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಉತ್ತರ ಪ್ರದೇಶದ ಪೂರ್ವ, ಮಧ್ಯ ಭಾಗಗಳು, ಬುಂದೇಲ್‌ಖಂಡ್, ತೇರಾಯ್ ಬೆಲ್ಟ್ ಮತ್ತು ರೋಹಿಲ್‌ಖಂಡ್ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಬಗ್ಗೆ ರಾಜ್ಯ ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ.

ಲಕ್ನೋ, ನೊಯ್ಡಾ, ಗಾಜಿಯಾಬಾದ್, ಕಾನ್ಪುರ್, ರಾಂಪುರ ಮತ್ತು ಮೀರತ್‌ನಲ್ಲಿ ಜಿಲ್ಲಾಧಿಕಾರಿಗಳು ಇಂದು 12ನೇ ತರಗತಿಯವರೆಗೆ ಎಲ್ಲಾ ಶಾಲೆಗಳನ್ನು ಮುಚ್ಚಲು ನಿರ್ಧರಿಸಿದ್ದಾರೆ. ಆಗ್ರಾ ಮತ್ತು ಅಲಿಗಢ ಆಡಳಿತಗಳು ಇಂದು ಮತ್ತು ಮಂಗಳವಾರ ಶಾಲೆಗಳಿಗೆ ರಜೆ ಘೋಷಿಸಿವೆ. ಬಲ್ರಾಮ್‌ಪುರ ಜಿಲ್ಲೆಯ ಸುಮಾರು 400 ಹಳ್ಳಿಗಳು ಜಲಾವೃತವಾಗಿದ್ದು, ಗೋರಖ್‌ಪುರದ ಬರ್ಹಲ್‌ಗಂಜ್‌ನಲ್ಲಿ ದೋಣಿಯೊಂದು ಮುಳುಗಿದ ಪರಿಣಾಮ ಇಬ್ಬರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ.

ಇದನ್ನೂ ಓದಿ: Karnataka Rain: ಕರಾವಳಿಯಲ್ಲಿ ತಗ್ಗಿದ ಮಳೆ; ಬೆಂಗಳೂರು, ಶಿವಮೊಗ್ಗ ಸೇರಿ 20 ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್​ ಘೋಷಣೆ

ಲಕ್ನೋ ಮುನ್ಸಿಪಲ್ ಕಾರ್ಪೊರೇಷನ್ ಜನರು ಎಚ್ಚರಿಕೆಯಿಂದ ಇರಲು ಸೂಚಿಸಿದೆ. ಜನದಟ್ಟಣೆಯ ಸ್ಥಳಗಳು ಮತ್ತು ಶಿಥಿಲಗೊಂಡ ಕಟ್ಟಡಗಳತ್ತ ಹೋಗದಂತೆ ಜನರಿಗೆ ಸಲಹೆ ನೀಡಿದೆ. ಮಳೆಗೆ ಸಂಬಂಧಿತ ಸಮಸ್ಯೆಗಳಿಗೆ ಸಿಲುಕಿರುವ ಜನರಿಗಾಗಿ ಹಲವಾರು ಜಿಲ್ಲೆಗಳಲ್ಲಿ ಸಹಾಯವಾಣಿಗಳನ್ನು ತೆರೆಯಲಾಗಿದೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ಲಕ್ನೋ, ಅಲಿಗಢ, ಮೀರತ್, ಗೌತಮ್ ಬುದ್ಧ ನಗರ ಮತ್ತು ಘಜಿಯಾಬಾದ್ ಸೇರಿದಂತೆ 12 ಜಿಲ್ಲೆಗಳ ಅಧಿಕಾರಿಗಳು ಇಂದು ಶಾಲೆಗಳನ್ನು ಮುಚ್ಚಲು ಆದೇಶಿಸಿದ್ದಾರೆ.

ಅಲಿಘಢದಲ್ಲಿ 12ನೇ ತರಗತಿಯವರೆಗಿನ ಎಲ್ಲಾ ಶಾಲೆಗಳು ಅಕ್ಟೋಬರ್ 12ರವರೆಗೆ ಮುಚ್ಚಲ್ಪಡುತ್ತವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನೊಯ್ಡಾ, ಆಗ್ರಾ, ಮಥುರಾ, ಕಾನ್ಪುರ, ಇಟಾಹ್, ಮೈನ್‌ಪುರಿ ಮತ್ತು ಫಿರೋಜಾಬಾದ್‌ನ ಜಿಲ್ಲಾ ಅಧಿಕಾರಿಗಳು ಶಾಲೆಗಳನ್ನು ಮುಚ್ಚಲು ಆದೇಶಿಸಿದ್ದಾರೆ. ರಾಜ್ಯದಲ್ಲಿ ಈಗಾಗಲೇ ಕಳೆದ ಕೆಲವು ದಿನಗಳಿಂದ ನಿರಂತರ ಮಳೆಯಾಗುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ