AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttar Pradesh: ಉತ್ತರ ಪ್ರದೇಶದಲ್ಲಿ ಗುಡಿಸಿಲಿಗೆ ಬೆಂಕಿ, ಮಕ್ಕಳು ಸೇರಿ ಐವರು ಸಜೀವ ದಹನ

ಉತ್ತರ ಪ್ರದೇಶದ ಕಾನ್ಪುರ ದೇಹತ್‌ನಲ್ಲಿ ಭಾನುವಾರ ಗುಡಿಸಲೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಐವರು ಸಜೀವ ದಹನಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Uttar Pradesh: ಉತ್ತರ ಪ್ರದೇಶದಲ್ಲಿ ಗುಡಿಸಿಲಿಗೆ ಬೆಂಕಿ, ಮಕ್ಕಳು ಸೇರಿ ಐವರು ಸಜೀವ ದಹನ
ಬೆಂಕಿ
ನಯನಾ ರಾಜೀವ್
|

Updated on: Mar 12, 2023 | 8:54 AM

Share

ಉತ್ತರ ಪ್ರದೇಶದ ಕಾನ್ಪುರ ದೇಹತ್‌ನಲ್ಲಿ ಭಾನುವಾರ ಗುಡಿಸಲೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಐವರು ಸಜೀವ ದಹನಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರೂರಾ ಪೊಲೀಸ್ ಠಾಣಾ ವ್ಯಾಪ್ತಿಯ ಹರ್ಮೌ ಬಂಜಾರದೇರಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸತೀಶ್ ಕುಮಾರ್, ಅವರ ಪತ್ನಿ ಕಾಜಲ್ ಮತ್ತು ಅವರ ಮೂವರು ಮಕ್ಕಳು ಮಲಗಿದ್ದಾಗ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಶಂಕಿಸಲಾಗಿದೆ. ಎಲ್ಲರೂ ಸಜೀವದಹನವಾಗಿದ್ದಾರೆ.

ಸ್ಥಳೀಯರು ಬೆಂಕಿ ನಂದಿಸಲು ಪ್ರಯತ್ನಿಸಿದ್ದು, ಬೆಂಕಿ ನಂದಿಸಲು ಅಗ್ನಿಶಾಮಕ ಟೆಂಡರ್‌ಗಳು ಗ್ರಾಮಕ್ಕೆ ಧಾವಿಸಿದರೂ ಅವರನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. ಘಟನೆಯಲ್ಲಿ ಬೆಂಕಿ ನಂದಿಸಲು ಯತ್ನಿಸಿದ ಸತೀಶ್ ಅವರ ತಾಯಿಗೂ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮತ್ತಷ್ಟು ಓದಿ:Raichur: ಶಾರ್ಟ್ ಸರ್ಕ್ಯೂಟ್​ನಿಂದ ಎಸಿ ಸ್ಫೋಟ: ತಾಯಿ, ಇಬ್ಬರು ಮಕ್ಕಳು ಸಜೀವದಹನ

ಮಾಹಿತಿ ಪಡೆದ ಜಿಲ್ಲಾ ಮ್ಯಾಜಿಸ್ಟ್ರೇಟ್, ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಮತ್ತು ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದರು. ಬೆಂಕಿಯ ಕಾರಣವನ್ನು ಕಂಡುಹಿಡಿಯಲು ವಿಧಿವಿಜ್ಞಾನ ತಂಡ ಮತ್ತು ಶ್ವಾನದಳವನ್ನು ಕರೆಸಲಾಯಿತು. ಸತೀಶ್ ತನ್ನ ಹೆಂಡತಿ ಮತ್ತು ಮಕ್ಕಳೊಂದಿಗೆ ಮಲಗಿದ್ದ. ಶಾರ್ಟ್ ಸರ್ಕ್ಯೂಟ್‌ನಿಂದ ಹುಲ್ಲಿನ ಛಾವಣಿಯ ಮೇಲಿದ್ದ ಲಾಟಿನ್​ಗೆ ಬೆಂಕಿ ತಗುಲಿ ಅವರು ಸುಟ್ಟು ಕರಕಲಾಗಿದ್ದಾರೆ ಎಂದು ಗ್ರಾಮಸ್ಥ ಉದಯಪಾಲ್ ಹೇಳಿದರು.

ಸತೀಶ್ ಮತ್ತು ಅವರ ಕುಟುಂಬ ಬೆಂಕಿಯಲ್ಲಿ ಸಜೀವ ದಹನವಾಗಿರುವ ಬಗ್ಗೆ ನಮಗೆ ಮಾಹಿತಿ ಬಂದಿದೆ. ನಾವು ವಿಧಿವಿಜ್ಞಾನ ತಂಡ, ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ಮತ್ತು ಶ್ವಾನ ದಳದ ತಂಡವನ್ನು ತನಿಖೆಗೆ ಕರೆಸಿದ್ದೇವೆ. ಘಟನೆಯಲ್ಲಿ ಐದು ಜನರು ಸಾವನ್ನಪ್ಪಿದ್ದಾರೆ ಎಂದು ಕಾನ್ಪುರ ದೇಹತ್ ಎಸ್ಪಿ ಇಂಡಿಯಾ ಟುಡೇಗೆ ತಿಳಿಸಿದ್ದಾರೆ.

ಸತೀಶ್ ಅವರ ತಾಯಿ ಚಿಕಿತ್ಸೆ ಪಡೆಯುತ್ತಿರುವ ಜಿಲ್ಲಾ ಆಸ್ಪತ್ರೆಗೆ ಡಿಎಂ ನೇಹಾ ಜೈನ್ ಭೇಟಿ ನೀಡಿದರು. ಹರ್ಮೌ ಗ್ರಾಮದಲ್ಲಿ ದಂಪತಿಗಳು ಮತ್ತು ಅವರ ಮೂವರು ಮಕ್ಕಳು ಬೆಂಕಿಯಲ್ಲಿ ಸಾವನ್ನಪ್ಪಿದ್ದಾರೆ. ನಾವು ಈ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಅವರು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ