ಉತ್ತರ ಪ್ರದೇಶ : ಮದುವೆ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದಾಗ ಅಪಘಾತ, ನವಜೋಡಿ ಸೇರಿ 7 ಮಂದಿ ಸ್ಥಳದಲ್ಲೇ ಸಾವು
ಮದುವೆ ಮುಗಿಸಿ ಸಂಭ್ರಮದಿಂದ ವರ ಮನೆಗೆ ಹಿಂದಿರುಗುತ್ತಿದ್ದಾಗ ಭಾರೀ ಅಪಘಾತವೊಂದು ನಡೆದಿದೆ. ಈ ಘಟನೆಯಿಂದ ನವ ಜೋಡಿ ಸೇರಿದಂತೆ 7 ಜನ ಸಾವನ್ನಪ್ಪಿದ್ದಾರೆ. ಈ ಘಟನೆ ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ನಡೆದಿದೆ. ಇದೀಗ ಈ ಘಟನೆಗೆ ಸಿಎಂ ಯೋಗಿ ಆದಿತ್ಯನಾಥ್ ಅವರು ಸಂತಾಪ ಸೂಚಿಸಿದ್ದಾರೆ
ಮದುವೆ ಮುಗಿಸಿ ಹಿಂದಿರುಗುತ್ತಿದ್ದಾಗ ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ಭಾರೀ ಅಪಘಾತ ನಡೆದಿದೆ. ಈ ಘಟನೆಯಲ್ಲಿ ನವವಿವಾಹಿತರು ಸೇರಿ ಐವರು ಸಾವನ್ನಪ್ಪಿದ್ದಾರೆ. ಶನಿವಾರ ಬೆಳಗ್ಗೆ ಬಿಜ್ನೋರ್‌ನಲ್ಲಿ ಭಾರೀ ಮಂಜು ಕವಿದ್ದಿತ್ತು. ಈ ವೇಳೆ ಮದುವೆ ಮುಗಿಸಿ ಬರುತ್ತಿದ್ದವರ ವಾಹನ ವೇಗವಾಗಿ ಬಂದು ಟೆಂಪೋಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಏಳು ಮಂದಿ ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ನಿನ್ನೆ ಸಂಜೆ ಜಾರ್ಖಂಡ್‌ನಲ್ಲಿ ಮದುವೆ ಸಂಭ್ರಮ ನಡೆದಿತ್ತು. ಬಿಜ್ನೋರ್‌ನ ಧಂಪುರದಲ್ಲಿರುವ ವರನ ಮನೆಗೆ ಹಿಂದಿರುಗುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ-74ರಲ್ಲಿ ಅವರಿದ್ದ ವಾಹನ ಟೆಂಪೋಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಎರಡೂ ವಾಹನಗಳು ಹಳ್ಳಕ್ಕೆ ಬಿದ್ದಿವೆ.
ವಾಹನದಲ್ಲಿ ವಧು, ವರ, ಅವರ ಚಿಕ್ಕಮ್ಮ ಮತ್ತು ಅವರ ಸಹೋದರ ಸೇರಿದಂತೆ 11 ಮಂದಿ ಇದ್ದರು ಎಂದು ಹೇಳಲಾಗಿದೆ. ಅಪಘಾತದಲ್ಲಿ ದಂಪತಿಗಳು ಮತ್ತು ಅವರ ನಾಲ್ವರು ಕುಟುಂಬ ಸದಸ್ಯರು ಸಾವನ್ನಪ್ಪಿದ್ದಾರೆ. ಉಳಿದವರನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ. ದಟ್ಟ ಮಂಜಿನಿಂದಾಗಿ ಚಾಲಕನಿಗೆ ರಸ್ತೆ ಸರಿಯಾಗಿ ಕಾಣಿಸುತ್ತಿರಲಿಲ್ಲ ಆ ಕಾರಣದಿಂದಲ್ಲೇ ಈ ಅಪಘಾತ ನಡೆದಿದೆ ಎಂದು ಹೇಳಲಾಗಿದೆ.
ಇದನ್ನೂ ಓದಿ: ಆಸ್ಪತ್ರೆ ಅಗ್ನಿ ಅವಘಡದಲ್ಲಿ 10 ನವಜಾತ ಶಿಶು ಸಜೀವ ದಹನ, 16 ಮಕ್ಕಳು ಜೀವನ್ಮರಣ ಹೋರಾಟ
ಈ ಘಟನೆಯಲ್ಲಿ ಸಾವನ್ನಪ್ಪಿದವರಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದು, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಹಾಗೂ ಪರಿಹಾರ ಕಾರ್ಯವನ್ನು ತ್ವರಿತಗೊಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ