ಉತ್ತರ ಪ್ರದೇಶ: ಹಿಂದೂ ಯುವತಿ ಜತೆಗೆ ದೇವಾಸ್ಥಾನದಲ್ಲಿ ಕಾಣಿಸಿಕೊಂಡ ಅನ್ಯಕೋಮಿನ ಯುವಕ, ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು

ಅನ್ಯಕೋಮಿನ ಯುವಕನೊಬ್ಬ ಹಿಂದೂ ಯುವತಿಯೊಂದಿಗೆ ದೇವಾಸ್ಥಾನದಲ್ಲಿ ಕುಳಿತಿದ್ದನ್ನು ಕಂಡು ಜನರು ಆತನಿಗೆ ಅಮಾನುಷವಾಗಿ ಹಲ್ಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಕನೌಜ್ ಜಿಲ್ಲೆಯ ನಡೆದಿದೆ.

Follow us
ಅಕ್ಷಯ್​ ಪಲ್ಲಮಜಲು​​
|

Updated on:Aug 01, 2023 | 1:42 PM

ಕನೌಜ್, ಆ1: ಅನ್ಯಕೋಮಿನ ಯುವಕನೊಬ್ಬ ಹಿಂದೂ ಯುವತಿಯೊಂದಿಗೆ ದೇವಾಸ್ಥಾನದಲ್ಲಿ ಕುಳಿತಿದ್ದನ್ನು ಕಂಡು ಜನರು ಆತನಿಗೆ ಅಮಾನುಷವಾಗಿ ಹಲ್ಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಕನೌಜ್ ಜಿಲ್ಲೆಯ ನಡೆದಿದೆ. ವರದಿಗಳ ಪ್ರಕಾರ ಈ ಯುವಕ ಹಿಂದೂ ಎಂದು ಪರಿಚಯಿಸಿಕೊಂಡು ಸಾಮಾಜಿಕ ಮಾಧ್ಯಮದ ಮೂಲಕ ಹುಡುಗಿಯೊಂದಿಗೆ ಸ್ನೇಹ ಬೆಳೆಸಿದ್ದಾನೆ ಎಂದು ಹೇಳಲಾಗಿದೆ. ಈ ಯುವಕನನ್ನು ಕನೌಜ್ ಜಿಲ್ಲೆಯ ಗುರ್ಸಹೈಗಂಜ್ ಪ್ರದೇಶದ ನಿವಾಸಿ ಅಮನ್ ಖಾನ್ ಎಂದು ಗುರುತಿಸಲಾಗಿದೆ. ಹಿಂದೂ ಯುವತಿಯೊಂದಿಗೆ ದೇವಸ್ಥಾನದ ಬಳಿ ಕುಳಿತಿದ್ದಾಗ ಅಲ್ಲಿದ್ದ ಕೆಲವರು ಆತನನ್ನು ಗುರುತಿಸಿದ್ದಾರೆ. ಅನ್ಯಕೋಮಿನಾಗಿರುವ ನೀನು ದೇವಸ್ಥಾನದಲ್ಲಿ ಹುಡುಗಿಯೊಂದಿಗೆ ಏನು ಮಾಡುತ್ತಿದ್ದೀಯಾ ಎಂದ ಗದರಿಸಿದಾಗ ಎಲ್ಲ ಕಥೆಯನ್ನು ಹೇಳಿದ್ದಾನೆ.

ವೈರಲ್​​ ಆಗಿರುವ ವಿಡಿಯೋದಲ್ಲಿ ದೇವಾಸ್ಥಾನದಲ್ಲಿ ಸೇರಿದ್ದ ಜನರ ಗುಂಪೊಂದು ಅನ್ಯಕೋಮಿನ ಯುವಕನಿಗೆ ಸರಿಯಾಗಿ ಥಳಿಸಿರುವುದನ್ನು ಕಾಣಬಹುದು. ಜಿಲ್ಲೆಯಲ್ಲಿ ಲವ್ ಜಿಹಾದ್ ಪ್ರಕರಣಗಳು ಹೆಚ್ಚಾಗಿದ್ದು, ಇದಕ್ಕಾಗಿ ಒಂದು ಗ್ಯಾಂಗ್ ಕೂಡ ಸಕ್ರೀಯವಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಈ ವಿಡಿಯೋದಲ್ಲಿ ಯುವಕ ತಪ್ಪಾಯಿತು ಎಂದು ಬೇಡಿಕೊಂಡರು, ಅಲ್ಲಿದ್ದ ಜನ ಆತನಿಗೆ ಥಳಿಸುವುದು ನಿಲ್ಲಿಸುವುದಿಲ್ಲ. ಇನ್ನು ಈ ಬಗ್ಗೆ ಯುವತಿಯನ್ನು ಪ್ರಶ್ನಿಸಿದಾಗ ಆತ ನನಗೆ ಸೋಶಿಯಲ್​​ ಮೀಡಿಯಾದಲ್ಲಿ ಪರಿಚಯವಾಗಿದ್ದು, ನನ್ನಲ್ಲಿ ಹಿಂದೂ ಎಂದು ಹೇಳಿಕೊಂಡಿದ್ದ ಎಂದು ಹೇಳಿದ್ದಾಳೆ.

ಇದನ್ನೂ ಓದಿ: ಹಾಸನ: ಮಲಗಿದ್ದಲ್ಲೇ ನಿಗೂಢವಾಗಿ ಸಾವನ್ನಪ್ಪಿದ ಉತ್ತರ ಪ್ರದೇಶ ಮೂಲದ ಯುವಕರು

ಯುವಕ ಮತ್ತು ಆಕೆಯನ್ನು ಸ್ಥಳೀಯ ಪೊಲೀಸ್​​ ಠಾಣೆಗೆ ಕರೆದುಕೊಂಡು ಹೋಗಿದ್ದು, ಎರಡು ಕುಟುಂಬಗಳನ್ನು ಕರೆಸಲಾಗಿದೆ. ವರದಿಯ ಪ್ರಕಾರ ಯುವತಿಯ ಮನೆಯವರು ಯಾವುದೇ ದೂರು ನೀಡಿಲ್ಲ. ಯುವತಿಯನ್ನು ಮನೆ ಕಳುಹಿಸಲಾಗಿದ್ದು, ಅನ್ಯಕೋಮಿನ ಯುವಕ ಬಂಧಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್​​ ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:40 pm, Tue, 1 August 23

ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ