ಟೆಂಪೋ-ಡಂಪರ್ ಡಿಕ್ಕಿ ಹೊಡೆದ ಪರಿಣಾಮ 12 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಶಹಜಹಾನ್ಪುರದದಲ್ಲಿ ಸಂಭವಿಸಿದೆ. ವೇಗವಾಗಿ ಬಂದ ಡಂಪರ್ ಆಟೋ ರಿಕ್ಷಾಗೆ ಡಿಕ್ಕಿ ಹೊಡೆದಿದೆ. ದಟ್ಟವಾದ ಮಂಜಿನಿಂದ ಉಂಟಾದ ಕಡಿಮೆ ಗೋಚರತೆಯು ಅಪಘಾತಕ್ಕೆ ಕಾರಣವಾಗಿದೆ.
ಅಲ್ಲಾಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಫರೂಕಾಬಾದ್ ರಸ್ತೆಯಲ್ಲಿ ಘರ್ಷಣೆ ಸಂಭವಿಸಿದೆ. ಘಟನೆಯ ಬಗ್ಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತೀವ್ರ ದುಃಖ ವ್ಯಕ್ತಪಡಿಸಿದ್ದು, ದುಃಖತಪ್ತ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ. ಗಾಯಾಳುಗಳ ತಕ್ಷಣದ ಚಿಕಿತ್ಸೆಗೆ ಆದ್ಯತೆ ನೀಡಬೇಕು ಮತ್ತು ಮೃತರ ಕುಟುಂಬಗಳಿಗೆ ಸಾಧ್ಯವಿರುವ ಎಲ್ಲ ನೆರವು ನೀಡುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಮತ್ತೊಂದು ಘಟನೆ
ಅಹ್ಮದ್‌ನಗರ-ಕಲ್ಯಾಣ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ, 6 ಮಂದಿ ಸಾವು
ಪುಣೆ ಜಿಲ್ಲೆಯ ಅಹ್ಮದ್‌ನಗರ-ಕಲ್ಯಾಣ ಹೆದ್ದಾರಿಯಲ್ಲಿ ಮಂಗಳವಾರ ತಡರಾತ್ರಿ ಟ್ರಕ್, ಸರ್ಕಾರಿ ಬಸ್ ಮತ್ತು ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಆರು ಜನರು ಸಾವನ್ನಪ್ಪಿದ್ದಾರೆ. ಧವಲ್ಪುರಿ ಫಾಟಾ ಬಳಿ ಮುಂಜಾನೆ 2.30ಕ್ಕೆ ಈ ಘಟನೆ ನಡೆದಿದೆ. ಅಪಘಾತದ ನಂತರ ಆರು ಜನರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಐವರನ್ನು ಪಾರ್ನರ್ ಗ್ರಾಮಾಂತರ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದರೆ, ಒಬ್ಬರನ್ನು ಅಹ್ಮದ್‌ನಗರ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಚಿಕಿತ್ಸೆ ವೇಳೆ ಆರು ಮಂದಿ ಸಾವನ್ನಪ್ಪಿದ್ದಾರೆ.
ಮತ್ತಷ್ಟು ಓದಿ: ಅಹ್ಮದ್‌ನಗರ-ಕಲ್ಯಾಣ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ, 6 ಮಂದಿ ಸಾವು
ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸ್ ತಂಡವು ಸ್ಥಳಕ್ಕೆ ಆಗಮಿಸಿ ಗಾಯಗೊಂಡವರನ್ನು ಆಸ್ಪತ್ರೆಗೆ ತಲುಪಿಸಲು ಸಹಾಯ ಮಾಡಿದ್ದಾರೆ. ಮೃತರ ಗುರುತು ಪತ್ತೆ ಮಾಡಲಾಗುತ್ತಿದ್ದು, ಘಟನೆಯ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಅಪಘಾತದಲ್ಲಿ ಸಾವನ್ನಪ್ಪಿದ ಎಲ್ಲರ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
ಡಿಸೆಂಬರ್‌ನಲ್ಲಿ ಅಹಮದ್‌ನಗರ-ಕಲ್ಯಾಣ ಹೆದ್ದಾರಿಯಲ್ಲಿ ಇದೇ ರೀತಿಯ ಅಪಘಾತ ಕಳೆದ ತಿಂಗಳು ಪುಣೆಯ ಜುನ್ನಾರ್ ತಾಲೂಕಿನ ಅಹ್ಮದ್‌ನಗರ-ಕಲ್ಯಾಣ ಹೆದ್ದಾರಿಯಲ್ಲಿ ಪಿಕಪ್ ಟ್ರಕ್ ಮತ್ತು ಆಟೋರಿಕ್ಷಾ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಮಕ್ಕಳು ಸೇರಿದಂತೆ ಎಂಟು ಮಂದಿ ಸಾವನ್ನಪ್ಪಿದ್ದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 12:53 pm, Thu, 25 January 24