ಲಕ್ನೋ-ಆಗ್ರಾ ಎಕ್ಸ್ಪ್ರೆಸ್ ವೇನಲ್ಲಿ ಬಸ್ ಕಂದಕಕ್ಕೆ ಬಿದ್ದ ಪರಿಣಾಮ 40 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಜೌನ್‌ಪುರದಿಂದ ದೆಹಲಿಗೆ ತೆರಳುತ್ತಿದ್ದ ಖಾಸಗಿ ಡಬಲ್ ಡೆಕ್ಕರ್ ಬಸ್ ಲಕ್ನೋ-ಆಗ್ರಾ ಎಕ್ಸ್‌ಪ್ರೆಸ್‌ವೇನಲ್ಲಿ ಪಲ್ಟಿಯಾಗಿದೆ. ವರದಿಗಳ ಪ್ರಕಾರ, ವಾಹನ ಚಲಾಯಿಸುವಾಗ ಚಾಲಕ ನಿದ್ರೆಗೆ ಜಾರಿದ ಕಾರಣ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಗಾಯಗೊಂಡ 30 ಪ್ರಯಾಣಿಕರನ್ನು ಸೌರಿಖ್ ಸರ್ಕಾರಿ ಆಸ್ಪತ್ರೆಗೆ ಮತ್ತು 12 ಮಂದಿಯನ್ನು ಚಿಕಿತ್ಸೆಗಾಗಿ ವೈದ್ಯಕೀಯ ಕಾಲೇಜು ತಿರ್ವಾಗೆ ಕಳುಹಿಸಲಾಗಿದೆ.
ಎಎಸ್ಪಿ, ಸಿಒ ಸೇರಿದಂತೆ ಹಲವು ಠಾಣೆಗಳ ಪೊಲೀಸ್ ತಂಡಗಳು ಸ್ಥಳಕ್ಕೆ ಆಗಮಿಸಿ ಗಾಯಗೊಂಡ ಪ್ರಯಾಣಿಕರನ್ನು ರಕ್ಷಿಸಿದರು.
ಛಿಬ್ರಾಮೌ ತಹಸಿಲ್‌ನ ಸೌರಿಖ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ. ಗಾಯಗೊಂಡ ಪ್ರಯಾಣಿಕರ ಸ್ಥಿತಿಯ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.
ಜಮ್ಮು ಕಾಶ್ಮೀರದಲ್ಲಿ ಉಗ್ರರ ದಾಳಿಯಲ್ಲಿ ಬಸ್ ಕಂದಕಕ್ಕೆ ಬಿದ್ದಿತ್ತು
ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಭಯೋತ್ಪಾದಕ ದಾಳಿ ನಡೆದಿತ್ತು, ಶಿವಖೋಡಿಯಿಂದ ಕತ್ರಾಗೆ ತೆರಳುತ್ತಿದ್ದ ಬಸ್ ಮೇಲೆ ಉಗ್ರರು ಸುಮಾರು 30ರಿಂದ 40 ಸುತ್ತು ಗುಂಡು ಹಾರಿಸಿದ್ದಾರೆ.
ಮತ್ತಷ್ಟು ಓದಿ: ಆ ಒಂದು ಬುಲೆಟ್ನಿಂದ ಕಂದಕಕ್ಕೆ ಬಿದ್ದಿತ್ತು ಬಸ್, ಜಮ್ಮು ಕಾಶ್ಮೀರದಲ್ಲಿ ಉಗ್ರರ ದಾಳಿ ನಡೆದಿದ್ದು ಹೇಗೆ?
ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ ಬಸ್ ಚಾಲಕನಿಗೆ ಬುಲೆಟ್ ತಗುಲಿದ್ದು, ಇದರ ಪರಿಣಾಮ ಚಾಲಕ ವಾಹನದ ಮೇಲೆ ಸಮತೋಲನ ಕಳೆದುಕೊಂಡ ಕಾರಣ ಬಸ್ ಆಳವಾದ ಕಂದಕಕ್ಕೆ ಬಿದ್ದಿತ್ತು.
ಅಪಘಾತದಲ್ಲಿ 10 ಮಂದಿ ಸಾವನ್ನಪ್ಪಿದ್ದು, 33 ಮಂದಿ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ನಾರಾಯಣ ಆಸ್ಪತ್ರೆ ಮತ್ತು ರಿಯಾಸಿ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿತ್ತು.
ಈ ಉಗ್ರರು ಪಾಕಿಸ್ತಾನ ಮೂಲದವರಾಗಿದ್ದಾರೆ ಎಂಬುದು ತಿಳಿದುಬಂದಿದೆ, ಇದೀಗ ಡ್ರೋನ್ ಮೂಲಕ ಇಡೀ ಕಾಡನ್ನು ಸುತ್ತುವರೆಯಲಾಗಿದೆ, ಅಲ್ಲಿ ಎಲ್ಲಾದರೂ ಉಗ್ರರ ಚಟುವಟಿಕೆ ಕಂಡುಬಂದರೆ ತಕ್ಷಣ ಮಾಹಿತಿ ಲಭ್ಯವಾಗುತ್ತದೆ. ಅಪಘಾತಕ್ಕೀಡಾದ ಬಸ್ ಶಿವ ಖೋಡಿಯಿಂದ ಹಿಂತಿರುಗುತ್ತಿತ್ತು. ಯಾತ್ರಾರ್ಥಿಗಳು ಶಿವಖೋಡಿಯಲ್ಲಿ ಭೋಲೆ ಬಾಬಾನ ದರ್ಶನ ಪಡೆದು ಕತ್ರಾಗೆ ಹಿಂತಿರುಗುತ್ತಿದ್ದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ