ಉತ್ತರ ಪ್ರದೇಶ: ಲಾರಿಗೆ ಡಿಕ್ಕಿ ಹೊಡೆದ ಡಬಲ್ ಡೆಕ್ಕರ್ ಬಸ್, 5 ತಿಂಗಳ ಮಗು ಸೇರಿ ಐವರು ಸಾವು

ಡಬಲ್ ಡೆಕ್ಕರ್​ ಬಸ್​ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಐದು ತಿಂಗಳ ಮಗು ಸೇರಿ ಐವರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಅಲಿಗಢದ ಯಮುನಾ ಎಕ್ಸ್​ಪ್ರೆಸ್​ ವೇನಲ್ಲಿ ಘಟನೆ ನಡೆದಿದೆ. ದೆಹಲಿಯಿಂದ ಅಜಂಗಢಕ್ಕೆ ತೆರಳುತ್ತಿದ್ದ ಬಸ್ ಹಿಂಬದಿಯಿಂದ ಟ್ರಕ್‌ಗೆ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ಪರಿಣಾಮ ಬಸ್ ಛಿದ್ರಗೊಂಡಿದ್ದು, ಮೃತದೇಹಗಳು ಮತ್ತು ಪ್ರಯಾಣಿಕರು ಒಳಗೆ ಸಿಲುಕಿಕೊಂಡಿದ್ದಾರೆ.

ಉತ್ತರ ಪ್ರದೇಶ: ಲಾರಿಗೆ ಡಿಕ್ಕಿ ಹೊಡೆದ ಡಬಲ್ ಡೆಕ್ಕರ್ ಬಸ್, 5 ತಿಂಗಳ ಮಗು ಸೇರಿ ಐವರು ಸಾವು
ಬಸ್ ಅಪಘಾತ
Image Credit source: IndiaToday

Updated on: Nov 21, 2024 | 7:50 AM

ಡಬಲ್ ಡೆಕ್ಕರ್​ ಬಸ್​ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಐದು ತಿಂಗಳ ಮಗು ಸೇರಿ ಐವರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಅಲಿಗಢದ ಯಮುನಾ ಎಕ್ಸ್​ಪ್ರೆಸ್​ ವೇನಲ್ಲಿ ಘಟನೆ ನಡೆದಿದೆ. ದೆಹಲಿಯಿಂದ ಅಜಂಗಢಕ್ಕೆ ತೆರಳುತ್ತಿದ್ದ ಬಸ್ ಹಿಂಬದಿಯಿಂದ ಟ್ರಕ್‌ಗೆ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ಪರಿಣಾಮ ಬಸ್ ಛಿದ್ರಗೊಂಡಿದ್ದು, ಮೃತದೇಹಗಳು ಮತ್ತು ಪ್ರಯಾಣಿಕರು ಒಳಗೆ ಸಿಲುಕಿಕೊಂಡಿದ್ದಾರೆ.

11 ತಿಂಗಳ ಹೆಣ್ಣು ಮಗು, 5 ವರ್ಷದ ಮಗು, ಮೂವರು ಮಹಿಳೆಯರು ಮತ್ತು ಒಂಬತ್ತು ಪುರುಷರು ಸೇರಿದಂತೆ 15 ಮಂದಿ ಗಾಯಗೊಂಡಿದ್ದಾರೆ. ಬಸ್ಸಿನ ಗಾಜುಗಳನ್ನು ಒಡೆದು ಗಾಯಾಳುಗಳನ್ನು ರಕ್ಷಿಸಲಾಗಿದೆ. ಅವರನ್ನು ಚಿಕಿತ್ಸೆಗಾಗಿ ಜೇವರ್‌ನ ಕೈಲಾಶ್ ಆಸ್ಪತ್ರೆಗೆ ರವಾನಿಸಲಾಗಿದೆ.

ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಶವಾಗಾರಕ್ಕೆ ಕಳುಹಿಸಿದ್ದಾರೆ. ಮೂರು ಶವಗಳನ್ನು ಗುರುತಿಸಲಾಗಿದ್ದು, ಇಬ್ಬರ ಗುರುತು ಪತ್ತೆಯಾಗಿಲ್ಲ. ಬಸ್ ಫೈಜಾಬಾದ್ ಮೂಲದ ಕೃಷ್ಣ ಟ್ರಾವೆಲ್ಸ್ ಕಂಪನಿಗೆ ಸೇರಿದೆ. ತಪ್ಪಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಮತ್ತಷ್ಟು ಓದಿ: ಡೆಹ್ರಾಡೂನ್‌ನಲ್ಲಿ ಮದ್ಯಪಾನ ಮಾಡಿದ ಯುವಕರ ಕಾರು ಡಿಕ್ಕಿ; 6 ವಿದ್ಯಾರ್ಥಿಗಳ ಸಾವು

ಮತ್ತೊಂದು ಘಟನೆ

ದಟ್ಟ ಮಂಜಿನಿಂದಾಗಿ ಅಪಘಾತ
ಉತ್ತರ ಪ್ರದೇಶದ ಕಾನ್ಪುರದ ಘಟಂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಡಿಮೆ ಗೋಚರತೆಯಿಂದಾಗಿ ಬಸ್ ಟ್ರಕ್​ಗೆ ಡಿಕ್ಕಿ ಹೊಡೆದು ಇಬ್ಬರು ಸಾವನ್ನಪ್ಪಿದ್ದಾರೆ. ಆರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಬಸ್ ಚಾಲಕ ಮೋಹಿತ್ ಯಾದವ್ ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ