ಉತ್ತರ ಪ್ರದೇಶ: ಸರಣಿ ಅಪಘಾತ, ಮಗು ಸೇರಿದಂತೆ ಒಂದೇ ಕುಟುಂಬದ ಐವರು ಸಾವು

ಉತ್ತರ ಪ್ರದೇಶದಲ್ಲಿ ಸಂಭವಿಸಿದ ಸರಣಿ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಪ್ರಾಣ ಕಳೆದುಕೊಂಡಿದ್ದಾರೆ. ಮೆಹಮೂದಾಬಾದ್ ರಸ್ತೆಯಲ್ಲಿ ಈ ಘಟನೆ ಸಂಭವಿಸಿದ್ದು, ಲಕ್ನೋ ಕಡೆಗೆ ಹೋಗುತ್ತಿದ್ದ ಅತಿವೇಗದ ಕಾರು ಮೊದಲು ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದು ನಂತರ ವಿರುದ್ಧ ದಿಕ್ಕಿನಿಂದ ಬಂದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ.

ಉತ್ತರ ಪ್ರದೇಶ: ಸರಣಿ ಅಪಘಾತ, ಮಗು ಸೇರಿದಂತೆ ಒಂದೇ ಕುಟುಂಬದ ಐವರು ಸಾವು
ಅಪಘಾತImage Credit source: India Today
Follow us
ನಯನಾ ರಾಜೀವ್
|

Updated on: Sep 06, 2024 | 8:09 AM

ಸರಣಿ ಅಪಘಾತ ಸಂಭವಿಸಿ ಒಂದೇ ಕುಟುಂಬದ ಐವರು ಪ್ರಾಣ ಕಳೆದುಕೊಂಡಿರುವ ಘಟನೆ ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಗುರುವಾರ ಮಧ್ಯರಾತ್ರಿ ನಡೆದಿದೆ. ವೇಗವಾಗಿ ಬಂದ ಕಾರು ಇತರೆ ಎರಡು ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಮಗು ಸೇರಿದಂತೆ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ. ಗಾಯಗೊಂಡವರಲ್ಲಿ ಮೂವರ ಸ್ಥಿತಿ ಚಿಂತಾಜನಕವಾಗಿದೆ.

ಮೆಹಮೂದಾಬಾದ್ ರಸ್ತೆಯಲ್ಲಿ ಈ ಘಟನೆ ಸಂಭವಿಸಿದ್ದು, ಲಕ್ನೋ ಕಡೆಗೆ ಹೋಗುತ್ತಿದ್ದ ಅತಿವೇಗದ ಕಾರು ಮೊದಲು ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದು ನಂತರ ವಿರುದ್ಧ ದಿಕ್ಕಿನಿಂದ ಬಂದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಎರಡನೇ ಕಾರು ಸಮೀಪದ ಹೊಂಡಕ್ಕೆ ಹಾರಿದೆ.

ಸ್ಥಳೀಯರು ಕೂಡಲೇ ರಕ್ಷಣೆ ಮಾಡಲು ಮುಂದಾದರು. ಮೂವರು ಸ್ಥಳದಲ್ಲೇ ಮೃತಪಟ್ಟರೆ, ಇಬ್ಬರು ಚಿಕಿತ್ಸೆ ವೇಳೆ ಕೊನೆಯುಸಿರೆಳೆದಿದ್ದಾರೆ. ಮೃತರೆಲ್ಲರೂ ಸಂಬಂಧಿಕರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಆಟೋದಲ್ಲಿ ಹೋಗುತ್ತಿದ್ದರು.

ಮತ್ತಷ್ಟು ಓದಿ: Black Day Of Raichur: ಮಾನ್ವಿ ಸ್ಕೂಲ್ ಬಸ್​ ಅಪಘಾತಕ್ಕೆ ರಸ್ತೆ ಗುಂಡಿಯೇ ವಿಲನ್

ಮೃತರನ್ನು ಇರ್ಫಾನ್, ವಹಿದುನ್ ನಿಶಾ, ಅಜೀಜ್ ಅಹ್ಮದ್ (ಅಲಿಯಾಸ್ ಬುದ್ಧ), ತಾಹಿರಾ ಬಾನೋ ಮತ್ತು ಸಬ್ರೀನ್ ಎಂದು ಗುರುತಿಸಲಾಗಿದೆ, ಎಲ್ಲರೂ ಬಾರಾಬಂಕಿ ಜಿಲ್ಲೆಯ ಒಂದೇ ಕುಟುಂಬದವರು. ಕಾರು ಚಾಲಕ ವಿವೇಕ್ ಸೇರಿದಂತೆ ಮೂವರು ಗಾಯಗೊಂಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೆಳಗಾವಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಸಚಿವೆ ಚೇತರಿಸಿಕೊಳ್ಳುತ್ತಿದ್ದಾರೆ
ಬೆಳಗಾವಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಸಚಿವೆ ಚೇತರಿಸಿಕೊಳ್ಳುತ್ತಿದ್ದಾರೆ
ಪ್ರಭಾಕರ್ ಜೊತೆ ಸರಿಗಮ ವಿಜಿಗೆ ಇತ್ತು ಒಳ್ಳೆಯ ಒಡನಾಟ
ಪ್ರಭಾಕರ್ ಜೊತೆ ಸರಿಗಮ ವಿಜಿಗೆ ಇತ್ತು ಒಳ್ಳೆಯ ಒಡನಾಟ
ಕಾಂಗ್ರೆಸ್​ನ ನೂತನ ಪ್ರಧಾನ​ ಕಚೇರಿ‘ಇಂದಿರಾ ಭವನ’ ಉದ್ಘಾಟಿಸಿದ ಸೋನಿಯಾ
ಕಾಂಗ್ರೆಸ್​ನ ನೂತನ ಪ್ರಧಾನ​ ಕಚೇರಿ‘ಇಂದಿರಾ ಭವನ’ ಉದ್ಘಾಟಿಸಿದ ಸೋನಿಯಾ
ನೂತನ ಎಐಸಿಸಿ ಕಟ್ಟಡಕ್ಕೆ ಇಂದಿರಾ ಗಾಂಧಿ ಭವನ್ ಎಂದು ಹೆಸರಿಡಲಾಗಿದೆ
ನೂತನ ಎಐಸಿಸಿ ಕಟ್ಟಡಕ್ಕೆ ಇಂದಿರಾ ಗಾಂಧಿ ಭವನ್ ಎಂದು ಹೆಸರಿಡಲಾಗಿದೆ
ತಾರಾ ಎದುರೇ ಮೋಕ್ಷಿತಾಗೆ ಕೈ ಮುಗಿದು ಕ್ಷಮೆ ಕೇಳಿದ ಮಂಜು
ತಾರಾ ಎದುರೇ ಮೋಕ್ಷಿತಾಗೆ ಕೈ ಮುಗಿದು ಕ್ಷಮೆ ಕೇಳಿದ ಮಂಜು
Daily Devotional: ಸಾಲ ಬಾಧೆ, ಮನೆಯಲ್ಲಿನ ಸಮಸ್ಯೆಗಳಿಗೆ ಇಲ್ಲಿದೆ ಪರಿಹಾರ
Daily Devotional: ಸಾಲ ಬಾಧೆ, ಮನೆಯಲ್ಲಿನ ಸಮಸ್ಯೆಗಳಿಗೆ ಇಲ್ಲಿದೆ ಪರಿಹಾರ
Daily Horoscope: ಈ ರಾಶಿಯವರು ಇಂದು ಮಕ್ಕಳಿಂದ ಶುಭ ಸುದ್ದಿ ಕೇಳುವರು
Daily Horoscope: ಈ ರಾಶಿಯವರು ಇಂದು ಮಕ್ಕಳಿಂದ ಶುಭ ಸುದ್ದಿ ಕೇಳುವರು
ಜಾತ್ರೆಗೆ ನುಗ್ಗಿದ ಕಾರು: ಯುವತಿ ಸಾವು, 8 ಜನರಿಗೆ ಗಂಭೀರ ಗಾಯ..!
ಜಾತ್ರೆಗೆ ನುಗ್ಗಿದ ಕಾರು: ಯುವತಿ ಸಾವು, 8 ಜನರಿಗೆ ಗಂಭೀರ ಗಾಯ..!
ಸರ್ಕಾರದ ಅಸ್ಥಿಪಂಜರ ಮಾತ್ರ ಉಳಿದಿದೆ, ಸುಟ್ಟುಹೋಗೋದು ನಿಶ್ಚಿತ: ಸೋಮಣ್ಣ
ಸರ್ಕಾರದ ಅಸ್ಥಿಪಂಜರ ಮಾತ್ರ ಉಳಿದಿದೆ, ಸುಟ್ಟುಹೋಗೋದು ನಿಶ್ಚಿತ: ಸೋಮಣ್ಣ
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಗೆ ನುಗ್ಗಿದ ಚಿರತೆ, ವಿಡಿಯೋ ನೋಡಿ
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಗೆ ನುಗ್ಗಿದ ಚಿರತೆ, ವಿಡಿಯೋ ನೋಡಿ