ಯಮುನಾ ಎಕ್ಸ್ಪ್ರೆಸ್ ವೇನಲ್ಲಿ ಕಾರು, ಬಸ್ ನಡುವೆ ಭೀಕರ ಅಪಘಾತ, ಹೊತ್ತಿಕೊಂಡ ಬೆಂಕಿ ಐವರು ಸಜೀವದಹನ
ಮಥುರಾದ ಮಹಾವಾನ್ ಪ್ರದೇಶದ ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ 40 ಜನರಿದ್ದ ಸ್ಲೀಪರ್ ಕೋಚ್ ಬಸ್ ಕಾರಿಗೆ ಡಿಕ್ಕಿ ಹೊಡೆದು ಐವರು ಸಾವನ್ನಪ್ಪಿದ್ದಾರೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಮಥುರಾ ಶೈಲೇಶ್ ದುಬೆ ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಬಸ್ ಬಿಹಾರದಿಂದ ದೆಹಲಿ ಕಡೆಗೆ ಹೋಗುತ್ತಿತ್ತು ಎನ್ನಲಾಗಿದೆ. ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ತಕ್ಷಣ ಬೆಂಕಿ ಹೊತ್ತಿಕೊಂಡಿತ್ತು.
ಮಥುರಾದ ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ, ನಿಯಂತ್ರಣ ತಪ್ಪಿ ಬಸ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐವರು ಸಜೀವ ದಹನವಾಗಿದ್ದಾರೆ. ಮೃತರು ಸ್ವಿಫ್ಟ್ ಡಿಜೈರ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು, ಇದು ಬಸ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಬಳಿಕ ಡಿವೈಡರ್‌ಗೆ ಡಿಕ್ಕಿ ಹೊಡೆದ ನಂತರ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಅಪಘಾತದ ನಂತರ ಪೊಲೀಸರು ಮತ್ತು ಅಗ್ನಿಶಾಮಕ ದಳದ ತಂಡಗಳು ಸ್ಥಳಕ್ಕೆ ಬಂದು ಬೆಂಕಿ ನಂದಿಸಿವೆ. ಮಥುರಾದ ಮಹಾವಾನ್ ಪ್ರದೇಶದ ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ 40 ಜನರಿದ್ದ ಸ್ಲೀಪರ್ ಕೋಚ್ ಬಸ್ ಕಾರಿಗೆ ಡಿಕ್ಕಿ ಹೊಡೆದಿತ್ತು. ಪೊಲೀಸರ ಪ್ರಕಾರ, ಬಸ್ ಬಿಹಾರದಿಂದ ದೆಹಲಿ ಕಡೆಗೆ ಚಲಿಸುತ್ತಿತ್ತು.
ಬಸ್ಸಿನಲ್ಲಿದ್ದ ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿ ಹೊರಗೆ ಬಂದಿದ್ದಾರೆ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲರೂ ಕಾರಿನೊಳಗೆ ಸಜೀವ ದಹನವಾಗಿದ್ದಾರೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಘಟನೆಯಲ್ಲಿ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಗಾಯಗೊಂಡವರಿಗೆ ನೆರವು ನೀಡುವಂತೆ ಸೂಚಿಸಿದ್ದಾರೆ.
ವಿಡಿಯೋ
ये भीषण सड़क हादसा यमुना एक्सप्रेसवे पर हुआ है। बताया जा रहा है आगरा से नोएडा जा रही बस तिरछी हुई, ठीक उसी समय कार की उससे भिड़ंत हो गई।#roadaccident #yamunaexpressway pic.twitter.com/95k1WZP5W2
— Faraaz Haseeb Khan (@khan_faraazh) February 12, 2024
ವರದಿಗಳ ಪ್ರಕಾರ ಕಾರಿನಲ್ಲಿದ್ದವರು ಆಗ್ರಾದಿಂದ ನೋಯ್ಡಾಗೆ ಹೋಗುತ್ತಿದ್ದರು. ಮಥುರಾದ ಎಕ್ಸ್‌ಪ್ರೆಸ್‌ವೇಯಲ್ಲಿ ಕಾರೊಂದರ ಮುಂದೆ ಬಸ್ ಚಲಿಸುತ್ತಿದ್ದು, ಅದರ ಟೈರ್ ಪಂಕ್ಚರ್ ಆಗಿದೆ. ಇದರಿಂದ ನಿಯಂತ್ರಣ ತಪ್ಪಿದ ಬಸ್ ಹಿಂಬದಿಯಿಂದ ಬಸ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ನಂತರ ಬೆಂಕಿ ಹೊತ್ತಿಕೊಂಡಿದ್ದು, ಕಾರಿನಲ್ಲಿದ್ದವರು ಸಕಾಲದಲ್ಲಿ ಹೊರಬರಲು ಸಾಧ್ಯವಾಗಲಿಲ್ಲ.
ಅಪಘಾತದಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐವರು ಸಜೀವ ದಹನವಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಮೃತಪಟ್ಟವರ ಗುರುತು ಇನ್ನೂ ಪತ್ತೆಯಾಗಿಲ್ಲ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ