Uttar Pradesh Accident: ಉನ್ನಾವೋ ಬಳಿ ಕಾರು ಹಾಗೂ ಟ್ರಕ್ ನಡುವೆ ಅಪಘಾತ 6 ಮಂದಿ ಸಾವು

ಉತ್ತರ ಪ್ರದೇಶದ ಉನ್ನಾವೋ ಬಳಿ ಟ್ರಕ್ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿ 6 ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ. ಇಲ್ಲಿನ ಅಚಲಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯ ಲಕ್ನೋ-ಕಾನ್ಪುರ ಹೆದ್ದಾರಿಯಲ್ಲಿ ಭಾನುವಾರ ಸಂಜೆ ಡಂಪರ್ ಟ್ರಕ್ ಕಾರಿಗೆ ಡಿಕ್ಕಿ ಹೊಡೆದು ಆರು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Uttar Pradesh Accident: ಉನ್ನಾವೋ ಬಳಿ ಕಾರು ಹಾಗೂ ಟ್ರಕ್ ನಡುವೆ ಅಪಘಾತ 6 ಮಂದಿ ಸಾವು
ಟ್ರಕ್
Edited By:

Updated on: Jan 23, 2023 | 7:38 AM

ಉತ್ತರ ಪ್ರದೇಶದ ಉನ್ನಾವೋ ಬಳಿ ಟ್ರಕ್ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿ 6 ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ. ಇಲ್ಲಿನ ಅಚಲಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯ ಲಕ್ನೋ-ಕಾನ್ಪುರ ಹೆದ್ದಾರಿಯಲ್ಲಿ ಭಾನುವಾರ ಸಂಜೆ ಡಂಪರ್ ಟ್ರಕ್ ಕಾರಿಗೆ ಡಿಕ್ಕಿ ಹೊಡೆದು ಆರು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಡಿಕ್ಕಿಯ ರಭಸಕ್ಕೆ ಕಾರು ಸ್ವಲ್ಪ ದೂರ ಎಳೆದುಕೊಂಡು ಹೋಗಿ ಮಹಿಳೆ ಮತ್ತು ಆಕೆಯ ಮಗಳಿಗೆ ಡಿಕ್ಕಿ ಹೊಡೆದಿದೆ. ನಂತರ ಕಾರು ಕಂದಕಕ್ಕೆ ಬಿದ್ದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ್ ಶಂಕರ್ ಮೀನಾ ಹೇಳಿದ್ದಾರೆ, ಘಟನೆ ಸಂಜೆ 7 ಗಂಟೆ ಸುಮಾರಿಗೆ ಸಂಭವಿಸಿದೆ. ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಉಳಿದವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ಮೃತರನ್ನು ಛೋಟ್ಟೆಲಾಲ್ (32), ಶಿವಾಂಗ್ (30), ವಿಮಲೇಶ್ (60), ರಾಮ್‌ಪ್ಯಾರಿ (45) ಮತ್ತು ಆಕೆಯ ಮಗಳು ಶಿವಾನಿ (13) ಎಂದು ಗುರುತಿಸಲಾಗಿದೆ, ಜಿಲ್ಲಾ ಆಸ್ಪತ್ರೆಯ ತುರ್ತು ವೈದ್ಯಾಧಿಕಾರಿ (ಇಎಂಒ) ಡಾ ಆಶಿಶ್ ಎಂದು ತಿಳಿದುಬಂದಿದೆ, ಇನ್ನೊಬ್ಬ ವ್ಯಕ್ತಿಯ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ.

ಮತ್ತಷ್ಟು ಓದಿ: ರಾಜಸ್ಥಾನದಲ್ಲಿ ಭೀಕರ ರಸ್ತೆ ಅಪಘಾತ: ಟ್ರಕ್​-ಕಾರು ನಡುವೆ ಡಿಕ್ಕಿ, ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವು
ಅಪಘಾತದ ನಂತರ ಸ್ಥಳೀಯರು ರಸ್ತೆ ತಡೆ ನಡೆಸಿದರು. ಆದರೆ, ಕೆಲ ಹೊತ್ತಿನ ಬಳಿಕ ಪೊಲೀಸರ ಮಧ್ಯಸ್ಥಿಕೆಯಿಂದ ಸ್ಥಳೀಯರು ನಡೆಯಿಂದ ಹಿಂದೆ ಸರಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:37 am, Mon, 23 January 23