ಉತ್ತರ ಪ್ರದೇಶ: ಪಿಕ್ಅಪ್ ಟ್ರಕ್‌ಗೆ ಜೀಪ್ ಡಿಕ್ಕಿ, 6 ಮಂದಿ ಸಾವು
ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯಲ್ಲಿ ಪಿಕ್ ಅಪ್ ಟ್ರಕ್‌ಗೆ ಜೀಪ್ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಆರು ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಭಾನುವಾರವೂ ಉತ್ತರ ಪ್ರದೇಶದಲ್ಲಿ ಅಪಘಾತ ಸಂಭವಿಸಿತ್ತು. ಉತ್ತರ ಪ್ರದೇಶದಲ್ಲಿ ಅಪಘಾತ ಉತ್ತರ ಪ್ರದೇಶದ ಜೌನ್‌ಪುರ ಜಿಲ್ಲೆಯಲ್ಲಿ ಟ್ರಾಕ್ಟರ್-ಟ್ರಾಲಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಆರು ಕಾರ್ಮಿಕರು ಸಾವನ್ನಪ್ಪಿದ್ದರು.
ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯಲ್ಲಿ ಪಿಕ್ ಅಪ್ ಟ್ರಕ್‌ಗೆ ಜೀಪ್ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಆರು ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಜಿಲ್ಲೆಯ ಸುಗರ್ ಛಾಪ್ರಾ ಪ್ರದೇಶದ ಬಳಿ ಅಪಘಾತ ಸಂಭವಿಸಿದೆ. ಎಸ್ಪಿ ಸೇರಿದಂತೆ ಉನ್ನತ ಪೊಲೀಸ್ ಅಧಿಕಾರಿಗಳು ಅಪಘಾತ ಸ್ಥಳಕ್ಕೆ ತಲುಪಿದ್ದಾರೆ.
ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಂತಾಜನಕವಾಗಿರುವ ನಾಲ್ವರನ್ನು ವಾರಣಾಸಿಗೆ ರವಾನಿಸಲಾಗಿದೆ. ಜೀಪಿನಲ್ಲಿದ್ದವರು ಮಾಸುಂಪುರ್ ಗ್ರಾಮದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ದೋಕ್ತಿಗೆ ಹಿಂತಿರುಗುತ್ತಿದ್ದರು.
ಉತ್ತರ ಪ್ರದೇಶ, ಬಿಹಾರದಲ್ಲಿ ಎರಡು ಪ್ರತ್ಯೇಕ ಅಪಘಾತ, 15 ಮಂದಿ ಸಾವು ಉತ್ತರ ಪ್ರದೇಶ ಹಾಗೂ ಬಿಹಾರದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ ಒಟ್ಟು 15 ಮಂದಿ ಸಾವನ್ನಪ್ಪಿದ್ದಾರೆ. ಬಿಹಾರದ ಕೈಮೂರ್ ಜಿಲ್ಲೆಯ ದೇವಕಲಿ ಗ್ರಾಮದ ಬಳಿ ಭಾನುವಾರ ಸಂಜೆ ಅಪಘಾತ ಸಂಭವಿಸಿದೆ. ಹಾಗೆಯೇ ಉತ್ತರ ಪ್ರದೇಶದಲ್ಲೂ ಬಸ್ ಹಾಗೂ ಟ್ರ್ಯಾಕ್ಟರ್ ಹಾಗೂ ಬಸ್ ನಡುವೆ ಡಿಕ್ಕಿ ಸಂಭವಿಸಿದೆ.
ಮತ್ತಷ್ಟು ಓದಿ: ಬೆಳಗಾವಿಯಲ್ಲಿ ಹೆಚ್ಚಾದ ಅಪಘಾತ ಪ್ರಕರಣಗಳು; ಕೇವಲ ಮೂರು ದಿನದಲ್ಲಿ 25 ಸಾವು
ಬಿಹಾರದ ಕೈಮೂರ್ ಜಿಲ್ಲೆಯ ದೇವಕಲಿ ಗ್ರಾಮದ ಬಳಿ ಭಾನುವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ 9 ಜನರು ಸಾವನ್ನಪ್ಪಿದ್ದಾರೆ. ಎನ್‌ಎಚ್ 2 ರ ಉದ್ದಕ್ಕೂ ದೇವಕಾಲಿ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಸಸಾರಾಮ್‌ನಿಂದ ವಾರಾಣಸಿಗೆ ತೆರಳುತ್ತಿದ್ದ ಕಾರು, ಮೋಟಾರ್‌ಸೈಕಲ್‌ಗೆ ಡಿಕ್ಕಿ ಹೊಡೆದಿದೆ. ಆಗ ಎದುರಿನ ಲೇನ್‌ಗೆ ದ್ವಿಚಕ್ರವಾಹನ ಮತ್ತು ಕಾರು ಪಲ್ಟಿಯಾಗಿ ಟ್ರಕ್ ಡಿಕ್ಕಿ ಹೊಡೆದಿದೆ.
ಅಪಘಾತದಲ್ಲಿ ಇಬ್ಬರು ಮಹಿಳೆಯರು ಮತ್ತು ವಾಹನ ಚಾಲಕ ಸೇರಿದಂತೆ ಕಾರಿನಲ್ಲಿದ್ದ ಎಂಟು ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಅಪಘಾತದ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದಾನೆ. ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಕಾರು ಬಕ್ಸರ್‌ನಲ್ಲಿ ನೋಂದಣಿಯಾಗಿದೆ ಎಂದು ತಿಳಿದುಬಂದಿದೆ ಮತ್ತು ಮುಂಬೈ ವಿಳಾಸವನ್ನು ಹೊಂದಿರುವ ಎರಡು ಆಧಾರ್ ಕಾರ್ಡ್‌ಗಳನ್ನು ಮೃತರಿಂದ ವಶಪಡಿಸಿಕೊಳ್ಳಲಾಗಿದೆ.
ಉತ್ತರ ಪ್ರದೇಶದಲ್ಲಿ ಅಪಘಾತ ಉತ್ತರ ಪ್ರದೇಶದ ಜೌನ್‌ಪುರ ಜಿಲ್ಲೆಯಲ್ಲಿ ಟ್ರಾಕ್ಟರ್-ಟ್ರಾಲಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಆರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು ಆರು ಮಂದಿ ಗಾಯಗೊಂಡಿದ್ದಾರೆ. ಉತ್ತರ ಪ್ರದೇಶದ ರೋಡ್‌ವೇಸ್ ಬಸ್ ಪ್ರಯಾಗ್‌ರಾಜ್‌ನಿಂದ ಜಾನ್‌ಪುರಕ್ಕೆ ತೆರಳುತ್ತಿತ್ತು. ಭಾನುವಾರ ರಾತ್ರಿ 11.15ರ ಸುಮಾರಿಗೆ ಸಮದ್‌ಗಂಜ್ ಬಳಿ ಅಪಘಾತ ಸಂಭವಿಸಿದೆ.
ಪೊಲೀಸರ ಪ್ರಕಾರ, ಆರರ ಪೈಕಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದು ಮತ್ತು ಆರನೆಯವರು ಜಿಲ್ಲಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಅಪಘಾತದ ವೇಳೆ ಟ್ರ್ಯಾಕ್ಟರ್ ಟ್ರಾಲಿಯಲ್ಲಿ 12 ಕಾರ್ಮಿಕರು ಪ್ರಯಾಣಿಸುತ್ತಿದ್ದರು. ಘಟನೆಯ ಬಗ್ಗೆ ಮಾಹಿತಿ ಪಡೆದ ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಗೊಂಡ ಎಲ್ಲಾ ಕಾರ್ಮಿಕರನ್ನು ಜಿಲ್ಲಾ ಆಸ್ಪತ್ರೆಗೆ ಕಳುಹಿಸಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ