ಇಟಾವಾದಲ್ಲಿ ಡಬಲ್ ಡೆಕ್ಕರ್ ಬಸ್ ಹಾಗೂ ಕಾರು ನಡುವೆ ಅಪಘಾತ, 7 ಮಂದಿ ಸಾವು, 45ಕ್ಕೂ ಅಧಿಕ ಜನರಿಗೆ ಗಾಯ

|

Updated on: Aug 04, 2024 | 8:29 AM

ಇಟಾವಾದಲ್ಲಿ ಕಾರು ಹಾಗೂ ಬಸ್​ ನಡುವೆ ಡಿಕ್ಕಿ ಉಂಟಾಗಿ 7 ಮಂದಿ ಸಾವನ್ನಪ್ಪಿದ್ದು, 45 ಮಂದಿ ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಇಟಾವಾದಲ್ಲಿ ಡಬಲ್ ಡೆಕ್ಕರ್ ಬಸ್ ಹಾಗೂ ಕಾರು ನಡುವೆ ಅಪಘಾತ, 7 ಮಂದಿ ಸಾವು, 45ಕ್ಕೂ ಅಧಿಕ ಜನರಿಗೆ ಗಾಯ
ಬಸ್
Image Credit source: Moneycontrol.com
Follow us on

ಉತ್ತರ ಪ್ರದೇಶದ ಇಟಾವಾದಲ್ಲಿ ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಡಬಲ್ ಡೆಕ್ಕರ್ ಬಸ್ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿ ಏಳು ಜನರು ಸಾವನ್ನಪ್ಪಿದ್ದಾರೆ. ರಾಯ್ ಬರೇಲಿಯಿಂದ ದೆಹಲಿಗೆ ಹೋಗುತ್ತಿದ್ದ ಡಬಲ್ ಡೆಕ್ಕರ್ ಬಸ್ ರಾತ್ರಿ 12.30 ರ ಸುಮಾರಿಗೆ ಕಾರಿಗೆ ಡಿಕ್ಕಿ ಹೊಡೆದಿದೆ ಎಂದು ಎಸ್‌ಎಸ್‌ಪಿ ಇಟಾವಾ ಸಂಜಯ್ ಕುಮಾರ್ ವರ್ಮಾ ತಿಳಿಸಿದ್ದಾರೆ.

ಬಸ್ಸಿನಲ್ಲಿ 60 ಜನರಿದ್ದರು, ಈ ಪೈಕಿ 4 ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 20-25 ಜನರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸಹ ಸಾವನ್ನಪ್ಪಿದ್ದಾರೆ. ಒಟ್ಟು 7 ಮಂದಿ ಸಾವನ್ನಪ್ಪಿದ್ದಾರೆ.

ಆಗ್ರಾದಿಂದ ಲಕ್ನೋಗೆ ತೆರಳುತ್ತಿದ್ದ ಕಾರೊಂದು ರಸ್ತೆಯ ಮಧ್ಯಭಾಗದಲ್ಲಿರುವ ನೆಟ್ ಡಿವೈಡರ್ ಅನ್ನು ದಾಟಿ ರಾಂಗ್ ಸೈಡ್‌ನಲ್ಲಿ ಬಂದಿದೆ ಎಂದು ವರದಿಗಳು ತಿಳಿಸಿವೆ.

ಆಗ ಕಾರು ಡಬ್ಬಲ್ ಡೆಕ್ಕರ್ ಸ್ಲೀಪರ್ ಬಸ್‌ಗೆ ಡಿಕ್ಕಿ ಹೊಡೆದು ಅದನ್ನು ನಿಯಂತ್ರಿಸಲಾಗದೆ; ಬಸ್ ಎಕ್ಸ್‌ಪ್ರೆಸ್‌ವೇಯಿಂದ 20 ಅಡಿ ಕೆಳಗೆ ಬಿದ್ದಿದೆ. ಎಫ್‌ಐಆರ್ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸುಮಾರು 15 ಮಂದಿಯನ್ನು ಪ್ರಥಮ ಚಿಕಿತ್ಸೆ ನಂತರ ಬಿಡುಗಡೆ ಮಾಡಲಾಗಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ