ಒಂದೇ ಮಾರ್ಗದಲ್ಲಿ ಎರಡು ರೈಲುಗಳು ಮುಖಾಮುಖಿಯಾಗಿರುವ ಘಟನೆ ಉತ್ತರ ಪ್ರದೇಶದ ವಾರಾಣಸಿಯಲ್ಲಿ ನಡೆದಿದೆ. ಕ್ಯಾಂಟ್ ರೈಲು ನಿಲ್ದಾಣದಲ್ಲಿ ಗುರುವಾರ ಒಂದೇ ಮಾರ್ಗದಲ್ಲಿ ಎರಡು ರೈಲುಗಳು ಮುಖಾಮುಖಿಯಾಗಿವೆ. ಇದನ್ನು ಕಂಡ ವಿಶೇಷ ರೈಲಿನ ಲೋಕೋ ಪೈಲಟ್ (ರೈಲು ಚಾಲಕ) ಏಕಾಏಕಿ ತುರ್ತು ಬ್ರೇಕ್ ಹಾಕಿ ರೈಲನ್ನು ನಿಲ್ಲಿಸಿದ್ದಾರೆ ಇದರಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ.
ಚಾಲಕ ರೈಲನ್ನು ನಿಲ್ಲಿಸಿದ ಸ್ಥಳದಿಂದ ಸ್ವತಂತ್ರ ಸೇನಾನಿ ಎಕ್ಸ್‌ಪ್ರೆಸ್ 50 ಮೀಟರ್‌ಗಿಂತ ಕಡಿಮೆ ದೂರದಲ್ಲಿತ್ತು. ಘಟನೆ ಬಗ್ಗೆ ಮಾಹಿತಿ ಬಂದ ತಕ್ಷಣ ಇಡೀ ಇಲಾಖೆಯಲ್ಲಿ ಆತಂಕ ಮನೆ ಮಾಡಿದೆ. ಹೆಚ್ಚುವರಿ ವಿಭಾಗೀಯ ರೈಲ್ವೇ ವ್ಯವಸ್ಥಾಪಕ ಲಾಲ್ಜಿ ಚೌಧರಿ ಮತ್ತು ನಿಲ್ದಾಣದ ನಿರ್ದೇಶಕ ಅರ್ಪಿತ್ ಗುಪ್ತಾ ಸ್ಥಳ ಪರಿಶೀಲನೆ ನಡೆಸಿದರು. ಈ ಸಂಪೂರ್ಣ ಪ್ರಕರಣದ ತನಿಖೆಗೆ ಜಂಟಿ ಸಮಿತಿಯನ್ನು ರಚಿಸಲಾಗಿದೆ.
ರೈಲು ಸಂಖ್ಯೆ 12562 ಸ್ವತಂತ್ರ ಸೇನಾನಿ ಎಕ್ಸ್‌ಪ್ರೆಸ್ ಗುರುವಾರ ಬೆಳಗ್ಗೆ 8.15 ಕ್ಕೆ ಪ್ಲಾಟ್‌ಫಾರ್ಮ್ ನಂಬರ್ ಒಂದನ್ನು ಪ್ರವೇಶಿಸುತ್ತಿತ್ತು. ರೈಲ್ವೆ ನಿಯಂತ್ರಣಾಧಿಕಾರಿಗಳಿಂದ ಮಾಹಿತಿ ಬಂದ ತಕ್ಷಣ ಸ್ಥಳೀಯ ಅಧಿಕಾರಿಗಳು ಕಾರ್ಯಪ್ರವೃತ್ತರಾದರು. ಕಾರ್ಯಾಚರಣೆ ಮತ್ತು ಸಿಗ್ನಲ್ ವಿಭಾಗದ ನೌಕರರೊಂದಿಗೆ ಸ್ಥಳ ಪರಿಶೀಲನೆ ನಡೆಸಿದರು.
ಮತ್ತಷ್ಟು ಓದಿ: ಕೇರಳ: ರೈಲ್ವೆ ಗುತ್ತಿಗೆ ಕಾರ್ಮಿಕರ ಮೇಲೆ ಹರಿದ ಎಕ್ಸ್‌ಪ್ರೆಸ್ ರೈಲು, ನಾಲ್ವರು ಸಾವು
ತನಿಖೆಗಾಗಿ ಐವರು ಸದಸ್ಯರ ಜಂಟಿ ಸಮಿತಿಯನ್ನು ರಚಿಸಲಾಗಿದೆ ಎಂದು ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಲಾಲ್ಜಿ ಚೌಧರಿ ತಿಳಿಸಿದ್ದಾರೆ. 48 ಗಂಟೆಗಳಲ್ಲಿ ತನಿಖಾ ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ಇತ್ತೀಚಿನ ದಿನಗಳಲ್ಲಿ ರೈಲು ಅಪಘಾತದ ಹಲವು ಪ್ರಕರಣಗಳು ಬೆಳಕಿಗೆ ಬರುತ್ತಿವೆ, ಒಂದೇ ಮಾರ್ಗದಲ್ಲಿ ಎರಡು ರೈಲುಗಳು ಬಂದಿರುವ ಬಗ್ಗೆ ಕೇಳಿ ಆಶ್ಚರ್ಯವಾಗಿತ್ತು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ