Ghaziabad: ಬೈಕ್​ಗೆ ಡಿಕ್ಕಿ ಹೊಡೆದ ಟ್ರಕ್, ಗರ್ಭಿಣಿ ಸಾವು, ಪತಿ, ಮಗನಿಗೆ ಗಂಭೀರ ಗಾಯ

ಬೈಕ್​ಗೆ ಟ್ರಕ್​ ಒಂದು ಡಿಕ್ಕಿ ಹೊಡೆದ ಪರಿಣಾಮ ಗರ್ಭಿಣಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಆಕೆಯ ಪತಿ ಹಾಗೂ ಮಗನಿಗೆ ಗಂಭೀರ ಗಾಯವಾಗಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್​ನಲ್ಲಿ ನಡೆದಿದೆ.

Ghaziabad: ಬೈಕ್​ಗೆ ಡಿಕ್ಕಿ ಹೊಡೆದ ಟ್ರಕ್, ಗರ್ಭಿಣಿ ಸಾವು,  ಪತಿ, ಮಗನಿಗೆ ಗಂಭೀರ ಗಾಯ
ಗರ್ಭಿಣಿ

Updated on: Jun 20, 2023 | 12:19 PM

ಬೈಕ್​ಗೆ ಟ್ರಕ್​ ಒಂದು ಡಿಕ್ಕಿ ಹೊಡೆದ ಪರಿಣಾಮ ಗರ್ಭಿಣಿ(Pregnant) ಸ್ಥಳದಲ್ಲೇ ಸಾವನ್ನಪ್ಪಿದ್ದು, ಆಕೆಯ ಪತಿ ಹಾಗೂ ಮಗನಿಗೆ ಗಂಭೀರ ಗಾಯವಾಗಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್​ನಲ್ಲಿ ನಡೆದಿದೆ. ರಂಜನಾ(30) 6 ತಿಂಗಳ ಗರ್ಭಿಣಿಯಾಗಿದ್ದರು, ಆಕೆಯ ಪತಿ ಕುಮಾರ್ ಹಾಗೂ ಮಗ ದೇವಾಂಶ್​ಗೆ ಗಾಯಗಳಾಗಿದ್ದು, ಸಾವಿನ ಅಪಾಯದಿಂದ ಪಾರಾಗಿದ್ದಾರೆ.

ಬ್ರಿಜ್​ ಘಾಟ್​ನಿಂದ ವಾಪಾಸುವ ವೇಳೆ ಇವರಿದ್ದ ಬೈಕ್​ಗೆ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದಿದೆ. ಬಳಿಕ ಬೈಕ್ ಹೋಗಿ ಡಿವೈಡರ್​ಗೆ ಡಿಕ್ಕಿಯಾಗಿತ್ತು.

ಮತ್ತಷ್ಟು ಓದಿ: Al Pacino: 83 ವರ್ಷ ವಯಸ್ಸಿನ ನಟನಿಗೆ 29ರ ಪ್ರೇಯಸಿ; ಗರ್ಭಿಣಿ ಆದ ಬಳಿಕ ತಂದೆ ಯಾರೆಂದು ತಿಳಿಯಲು ಪರೀಕ್ಷೆ: ಕಾದಿತ್ತು ಅಚ್ಚರಿ

ಮಹಿಳೆ ಹಾಗೂ ಬಾಲಕ ಇಬ್ಬರೂ ಕೂಡ ಹೆಲ್ಮೆಟ್​ ಧರಿಸಿರಲಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ. ಟ್ರಕ್ ರಿಜಿಸ್ಟ್ರೇಷನ್ ನಂಬರ್​ನ್ನು ತೆಗೆದುಕೊಂಡಿದ್ದೇವೆ, ತುರ್ತು ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಪಿ ರವಿ ಕುಮಾರ್ ತಿಳಿಸಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
Loading...
Unable to load recommendations.
Follow Us