Uttar Pradesh Accident: ಸ್ಕೂಟಿಗೆ ಡಿಕ್ಕಿ ಹೊಡೆದು, 6 ವರ್ಷದ ಮಗುವನ್ನು 2 ಕಿ.ಮೀ ಎಳೆದೊಯ್ದ ಟ್ರಕ್

ಮತ್ತೊಂದು ಹಿಟ್​​ ಆಂಡ್ ರನ್ ಪ್ರಕರಣ ಉತ್ತರಪ್ರದೇಶದಾದ್ಯಂತ ಸದ್ದು ಮಾಡಿದೆ. ಟ್ರಕ್​ ಒಂದು ಸ್ಕೂಟಿಗೆ ಡಿಕ್ಕಿ ಹೊಡೆದು 6 ವರ್ಷದ ಮಗುವನ್ನು 2 ಕಿ.ಮೀಗೂ ಅಧಿಕ ದೂರ ಎಳೆದೊಯ್ದಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.

Uttar Pradesh Accident: ಸ್ಕೂಟಿಗೆ ಡಿಕ್ಕಿ ಹೊಡೆದು, 6 ವರ್ಷದ ಮಗುವನ್ನು 2 ಕಿ.ಮೀ ಎಳೆದೊಯ್ದ ಟ್ರಕ್
ಟ್ರಕ್
Follow us
ನಯನಾ ರಾಜೀವ್
|

Updated on: Feb 26, 2023 | 1:50 PM

ಮತ್ತೊಂದು ಹಿಟ್​​ ಆಂಡ್ ರನ್ ಪ್ರಕರಣ ಉತ್ತರಪ್ರದೇಶದಾದ್ಯಂತ ಸದ್ದು ಮಾಡಿದೆ. ಟ್ರಕ್​ ಒಂದು ಸ್ಕೂಟಿಗೆ ಡಿಕ್ಕಿ ಹೊಡೆದು 6 ವರ್ಷದ ಮಗುವನ್ನು 2 ಕಿ.ಮೀಗೂ ಅಧಿಕ ದೂರ ಎಳೆದೊಯ್ದಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಅಜ್ಜ ಉದಿತ್ ನಾರಾಯಣ ಚಾನ್ಸೋರಿಯಾ(67)ಹಾಗೂ ಮೊಮ್ಮಗ ಸಾತ್ವಿಕ್ ಮಾರುಕಟ್ಟೆಗೆ ಸ್ಕೂಟಿಯಲ್ಲಿ ಹೋಗುತ್ತಿದ್ದಾಗ ಘಟನೆ ನಡೆದಿದೆ.

ವೇಗವಾಗಿ ಬಂದ ಟ್ರಕ್ ಒಂದು ಸ್ಕೂಟಿಗೆ ಡಿಕ್ಕಿ ಹೊಡೆದಿದೆ, ಬಳಿಕ ಉದಿತ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ, ಸಾತ್ವಿಕ್​ನನ್ನು 2 ಕಿ.ಮೀ ದೂರದವರೆಗೆ ಟ್ರಕ್ ಎಳೆದುಕೊಂಡು ಹೋಗಿದೆ. ಕಾನ್ಪುರ್-ಸಾಗರ್ ಹೆದ್ದಾರಿ NH86ನಲ್ಲಿ ಈ ಘಟನೆ ನಡೆದಿದೆ. ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ಹಲವು ಬೈಕ್ ಸವಾರರು ಟ್ರಕ್​ ಅನ್ನು ನಿಲ್ಲಿಸಲು ಪ್ರಯತ್ನಿಸಿದ್ದನ್ನು ಕಾಣಬಹುದು, ಕೊನೆಗೆ ರಸ್ತೆಯಲ್ಲಿ ಕಲ್ಲುಗಳನ್ನಿಟ್ಟ ಕಾರಣ ಟ್ರಕ್ ನಿಂತಿತ್ತು, ಟ್ರಕ್ ಚಾಲಕನನ್ನು ಥಳಿಸಿ ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ.

ಮತ್ತಷ್ಟು ಓದಿ: ಮಂಡ್ಯ: ಎರಡು ಕಾರುಗಳ ನಡುವೆ ಭೀಕರ ಅಪಘಾತ: ನಾಲ್ವರ ಸಾವು

ಇತ್ತೀಚಿನ ದಿನಗಳಲ್ಲಿ ಹಿಟ್ ಆ್ಯಂಡ್ ರನ್ ಕೇಸ್ ಗಳು ಹೆಚ್ಚಾದಂತೆ ಪ್ರಕರಣ ದಾಖಲಿಸಿಕೊಂಡು ತಪ್ಪಿತಸ್ಥ ಚಾಲಕರನ್ನು ಬಂಧಿಸುವ ಕೆಲಸವನ್ನ ಪೊಲೀಸರು ಮಾಡುತ್ತಿದ್ದಾರೆ. ವಿಪರ್ಯಾಸವೆಂದರೆ ಅಪಘಾತವಾಗುವ ನಾಲ್ಕು ಹಿಟ್ ಅಂಡ್ ರನ್ ಅಪಘಾತಗಳ ಪೈಕಿ ಒಂದು ಕೇಸ್ ನಲ್ಲಿ ಪೊಲೀಸರು ಇತ್ಯರ್ಥಗೊಳಿಸುವಲ್ಲಿ ವಿಫಲರಾಗುತ್ತಿದ್ದಾರೆ.

2019ರಿಂದ 2023ರ ಜನವರಿ ಅಂತ್ಯದವರೆಗೆ ರಾಜ್ಯದಲ್ಲಿ 4549 ಹಿಟ್ ಅಂಡ್ ರನ್ ಅಪಘಾತ ಪ್ರಕರಣ ದಾಖಲಾಗಿದ್ದು 1187 ಕೇಸ್ ಗಳು ಪತ್ತೆಯಾಗಿಲ್ಲ. ಅಪಘಾತವೆಸಗಿದ ಚಾಲಕರನ್ನು ಪೊಲೀಸರು ಬಂಧಿಸುವಲ್ಲಿ ವಿಫಲರಾಗಿದ್ದಾರೆ. ಕಳೆದ ನಾಲ್ಕು ವರ್ಷಗಳಲ್ಲಿ 952 ಮಂದಿ ಅಪಘಾತದಲ್ಲಿ ಮೃತಪಟ್ಟಿದ್ದಾರೆ. 3807 ಮಂದಿ ಗಾಯಗೊಂಡಿದ್ದಾರೆ. ನಗರ ಪ್ರದೇಶಗಳಲ್ಲಿ ನಡೆದಿರುವ ರಸ್ತೆ ಅಪಘಾತವನ್ನ ಸುಲಭವಾಗಿ ಪ್ರಕರಣಗಳನ್ನು ಪತ್ತೆಮಾಡಲು ಸಾಧ್ಯವಾಗುತ್ತದೆ.

ಸಿಸಿಟಿವಿ ಇಲ್ಲದ‌ ಹಾಗೂ ರಾತ್ರಿ ವೇಳೆ ಸಂಭವಿಸುವ ಅಪಘಾತಗಳಲ್ಲಿ ತಪ್ಪಿತಸ್ಥರನ್ನು ಬಂಧಿಸಲು ಕಷ್ಟಕರವಾಗಲಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರ ಅಭಿಪ್ರಾಯ. ಏಕೆಂದರೆ ಸಿಸಿಟಿವಿ ಅಪಘಾತ ದೃಶ್ಯಾವಳಿ, ವಾಹನ ನೋಂದಣಿ ಸಂಖ್ಯೆ ಆಧರಿಸಿ ಪ್ರಕರಣ ಭೇದಿಸಲಾಗುತ್ತದೆ. ಆದರೆ ಗ್ರಾಮೀಣ ಅಥವಾ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳಲ್ಲಿ ಹಿಟ್ ಅಂಡ್ ರನ್ ಕೇಸ್ ನಡೆದಾಗ ಆರೋಪಿಗಳನ್ನು ಪತ್ತೆಹಚ್ಚಲು ಕಷ್ಟಸಾಧ್ಯ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ