AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಕ್-ಬೈಕ್ ಡಿಕ್ಕಿ: ಮಹಿಳೆ ಸಾವು, ಗಂಡನ ಎದುರೇ ಪತ್ನಿ ದೇಹ ಛಿದ್ರ ಛಿದ್ರ

ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ(Accident)ವೊಂದು ಸಂಭವಿಸಿದೆ. ಕರ್ವಾ ಚೌತ್ ಸಿದ್ಧತೆಗಾಗಿ ಪತಿಯೊಂದಿಗೆ ಮಾರುಕಟ್ಟೆಗೆ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದ್ದು, ಮಹಿಳೆ ಸಾವನ್ನಪ್ಪಿದ್ದಾರೆ. ಅಪಘಾತ ಎಷ್ಟು ಭೀಕರವಾಗಿತ್ತೆಂದರೆ ಗಂಡ ಕಣ್ಣುದೆರೇ ಪತ್ನಿಯ ದೇಹ ಛಿದ್ರಛಿದ್ರವಾಗಿತ್ತು. ರಸ್ತೆಗೆ ಬಿದ್ದ ನಂತರವೂ ಆಕೆಯ ಹೃದಯ ಕೆಲವು ಕ್ಷಣಗಳ ಕಾಲ ಬಡಿಯುತ್ತಲೇ ಇತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ

ಟ್ರಕ್-ಬೈಕ್ ಡಿಕ್ಕಿ: ಮಹಿಳೆ ಸಾವು, ಗಂಡನ ಎದುರೇ ಪತ್ನಿ ದೇಹ ಛಿದ್ರ ಛಿದ್ರ
ಮಹಿಳೆ Image Credit source: Google
ನಯನಾ ರಾಜೀವ್
|

Updated on: Oct 10, 2025 | 10:53 AM

Share

ಹಾಪುರ್, ಅಕ್ಟೋಬರ್ 10: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ(Accident)ವೊಂದು ಸಂಭವಿಸಿದೆ. ಕರ್ವಾ ಚೌತ್ ಸಿದ್ಧತೆಗಾಗಿ ಪತಿಯೊಂದಿಗೆ ಮಾರುಕಟ್ಟೆಗೆ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದ್ದು, ಮಹಿಳೆ ಸಾವನ್ನಪ್ಪಿದ್ದಾರೆ. ಅಪಘಾತ ಎಷ್ಟು ಭೀಕರವಾಗಿತ್ತೆಂದರೆ ಗಂಡ ಕಣ್ಣುದೆರೇ ಪತ್ನಿಯ ದೇಹ ಛಿದ್ರಛಿದ್ರವಾಗಿತ್ತು.

ರಸ್ತೆಗೆ ಬಿದ್ದ ನಂತರವೂ ಆಕೆಯ ಹೃದಯ ಕೆಲವು ಕ್ಷಣಗಳ ಕಾಲ ಬಡಿಯುತ್ತಲೇ ಇತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಗುರುವಾರ ಈ ಘಟನೆ ನಡೆದಿದೆ, 35 ವರ್ಷದ ಅನುರಾಧಾ ತನ್ನ ಪತಿ ಹರಿಓಮ್ ಜತೆ ಮಾರುಕಟ್ಟೆಗೆ ಹೋಗುತ್ತಿದ್ದಾಗ, ಧೌಲಾನಾ-ಗುಲಾವತಿ ರಸ್ತೆಯಲ್ಲಿ ಟ್ರಕ್ ಒಂದು ಅವರ ಬೈಕ್​ಗೆ ಡಿಕ್ಕಿ ಹೊಡೆದಿದೆ. ವರದಿಗಳ ಪ್ರಕಾರ, ಗುಂಡಿಯನ್ನು ತಪ್ಪಿಸಲು ಪ್ರಯತ್ನಿಸುವಾಗ ಟ್ರಕ್ ಚಾಲಕ ನಿಯಂತ್ರಣ ಕಳೆದುಕೊಂಡಿದ್ದು, ಬೈಕ್‌ಗೆ ನೇರ ಡಿಕ್ಕಿ ಹೊಡೆದಿದೆ.

ಅನುರಾಧಾ ಸ್ಥಳದಲ್ಲೇ ಮೃತಪಟ್ಟರೆ, ಅವರ ಪತಿಗೆ ಗಂಭೀರ ಗಾಯಗಳಾಗಿದ್ದು, ಪ್ರಸ್ತುತ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸ್ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಆಗಮಿಸಿ ಅನುರಾಧ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದರು.

ಮತ್ತಷ್ಟು ಓದಿ: ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ ವೇನಲ್ಲಿ ಸರಣಿ ಅಪಘಾತ: ಇಬ್ಬರು ದುರ್ಮರಣ, 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ

ಅಪಘಾತದ ನಂತರ, ಸಂಬಂಧಿಕರು ಮತ್ತು ಗ್ರಾಮಸ್ಥರು ಸಕಾಲಿಕ ಸಂವಹನದ ಕೊರತೆಯನ್ನು ಉಲ್ಲೇಖಿಸಿ ಸ್ಥಳದಲ್ಲಿ ಪ್ರತಿಭಟನೆ ನಡೆಸಿದರು. ಪಿಲ್ಖುವಾ ವೃತ್ತ ಅಧಿಕಾರಿ (ಸಿಒ) ಅನಿತಾ ಚೌಹಾಣ್ ಅವರು ಪರಿಸ್ಥಿತಿಯನ್ನು ಶಾಂತಗೊಳಿಸಲು ಆಗಮಿಸಿದರು ಮತ್ತು ಸಂಪೂರ್ಣ ತನಿಖೆಯ ಭರವಸೆ ನೀಡಿದರು.

ಪೊಲೀಸರು ಟ್ರಕ್ ಚಾಲಕನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಅಪಘಾತದ ಕಾರಣದ ಬಗ್ಗೆ ಔಪಚಾರಿಕ ವಿಚಾರಣೆಯನ್ನು ಪ್ರಾರಂಭಿಸಿದ್ದಾರೆ. ಈ ಅಪಘಾತಕ್ಕೆ ಧೌಲಾನಾ-ಗುಲಾವತಿ ರಸ್ತೆಯ ನಿರಂತರ ದುಸ್ಥಿತಿಯೇ ಕಾರಣ ಎಂದು ಪ್ರದೇಶದ ಅನೇಕ ಜನರು ದೂಷಿಸುತ್ತಾರೆ. ತುರ್ತು ದುರಸ್ತಿಗೆ ಮನವಿ ಮಾಡಿದರೂ ಆಡಳಿತ ಸ್ಪಂದಿಸಿಲ್ಲ ಎಂದು ಅವರು ಆರೋಪಿಸುತ್ತಾರೆ.

ಇತ್ತೀಚಿನ ತಿಂಗಳುಗಳಲ್ಲಿ ರಸ್ತೆ ಗುಂಡಿಗಳು ಅಪಘಾತಗಳಿಗೆ ಗಮನಾರ್ಹವಾಗಿ ಕಾರಣವಾಗಿವೆ ಎಂದು ಹೇಳಲಾಗಿದ್ದು, ಇದು ನಿವಾಸಿಗಳಲ್ಲಿ ರಸ್ತೆ ಸುರಕ್ಷತೆಯ ಬಗ್ಗೆ ಕಳವಳ ಹೆಚ್ಚುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ