ಅಯೋಧ್ಯೆ: ಜನವರಿಯಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠೆ, ರಾಮ ಮಂದಿರದ ಕಾಮಗಾರಿ ಇನ್ನೆಷ್ಟು ಬಾಕಿ ಇದೆ?

ಜಗತ್ತಿನಾದ್ಯಂತ ಇರುವ ಕೋಟ್ಯಂತರ ರಾಮಭಕ್ತರ ಕನಸು ನನಸಾಗಲಿದೆ ಎಂದು ಚಂಪತ್ ರಾಯ್ ಹೇಳಿದರು. ಹಲವು ವರ್ಷಗಳಿಂದ ನಡೆಯುತ್ತಿರುವ ವಿವಾದದ ಬಳಿಕ ಇದೀಗ ರಾಮಲಲ್ಲಾ ಅಯೋಧ್ಯೆಯ ತಮ್ಮ ಭವ್ಯ ಮಂದಿರದಲ್ಲಿ ಪ್ರತಿಷ್ಠಾಪನೆ ಆಗಲಿದೆ. ಮುಂದಿನ ವರ್ಷ ಮಕರ ಸಂಕ್ರಾಂತಿಯ ನಂತರ ಜನವರಿ 16ರಿಂದ 24ರ ನಡುವೆ ಯಾವುದೇ ಶುಭ ಸಂದರ್ಭದಲ್ಲಿ ರಾಮಲಲ್ಲಾ ಮೂರ್ತಿಯನ್ನು ದೇವಾಲಯದ ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲಾಗುವುದು ಎಂದರು.

Follow us
ರಶ್ಮಿ ಕಲ್ಲಕಟ್ಟ
|

Updated on: Aug 21, 2023 | 4:39 PM

ಅಯೋಧ್ಯೆ ಆಗಸ್ಟ್ 21: ಉತ್ತರ ಪ್ರದೇಶ (Uttar Pradesh) ಅಯೋಧ್ಯೆಯಲ್ಲಿ (Ayodhya) ಶ್ರೀರಾಮ ಜನ್ಮಭೂಮಿಯಲ್ಲಿ ನಿರ್ಮಾಣವಾಗುತ್ತಿರುವ ದೇವಾಲಯದ ಗರ್ಭಗುಡಿ ಸಿದ್ಧವಾಗಿದೆ. ದೇಗುಲದ ಮೊದಲ ಮಹಡಿಯ ಕಾಮಗಾರಿ ಪೂರ್ಣಗೊಳ್ಳುವುದರೊಂದಿಗೆ ಮುಂದಿನ ವರ್ಷ ಮಕರ ಸಂಕ್ರಾಂತಿಯ ನಂತರ (ಜನವರಿ 16ರಿಂದ 24ರ ನಡುವೆ) ರಾಮಲಲ್ಲಾ(Ram Lalla) ಪ್ರತಿಷ್ಠಾಪನೆ ನಡೆಯಲಿದೆ. ರಾಮಮಂದಿರ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರು ಭಾನುವಾರ ಹರಿದ್ವಾರಕ್ಕೆ ಆಗಮಿಸಿದಾಗ ಇಲ್ಲಿನ ಸಂತರನ್ನು ಭೇಟಿ ಮಾಡಿ ಮಂದಿರ ನಿರ್ಮಾಣ ಕಾಮಗಾರಿಯ ಪ್ರಗತಿ ಕುರಿತು ಮಾಹಿತಿ ನೀಡಿದರು. ಇದರೊಂದಿಗೆ ದೇವಸ್ಥಾನದಲ್ಲಿ ರಾಮಲಲ್ಲಾ ಅವರ ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೂ ಆಹ್ವಾನ ನೀಡಲಾಗಿತ್ತು.

ವರ್ಷಗಳ ಕನಸು ಈಡೇರುತ್ತಿದೆ: ಚಂಪತ್ ರಾಯ್

ಜಗತ್ತಿನಾದ್ಯಂತ ಇರುವ ಕೋಟ್ಯಂತರ ರಾಮಭಕ್ತರ  ಕನಸು ನನಸಾಗಲಿದೆ ಎಂದು ಚಂಪತ್ ರಾಯ್ ಹೇಳಿದರು. ಹಲವು ವರ್ಷಗಳಿಂದ ನಡೆಯುತ್ತಿರುವ ವಿವಾದದ ಬಳಿಕ ಇದೀಗ ರಾಮಲಲ್ಲಾ ಅಯೋಧ್ಯೆಯ ತಮ್ಮ ಭವ್ಯ ಮಂದಿರದಲ್ಲಿ ಪ್ರತಿಷ್ಠಾಪನೆ ಆಗಲಿದೆ. ಮುಂದಿನ ವರ್ಷ ಮಕರ ಸಂಕ್ರಾಂತಿಯ ನಂತರ ಜನವರಿ 16ರಿಂದ 24ರ ನಡುವೆ ಯಾವುದೇ ಶುಭ ಸಂದರ್ಭದಲ್ಲಿ ರಾಮಲಲ್ಲಾ ಮೂರ್ತಿಯನ್ನು ದೇವಾಲಯದ ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲಾಗುವುದು ಎಂದರು.

ಪ್ರಾಣ ಪ್ರತಿಷ್ಠೆಗೆ ಸಂತರು ಮತ್ತು ಋಷಿಮುನಿಗಳನ್ನು ಆಹ್ವಾನಿಸುವ ಕುರಿತು ಮಾತನಾಡಿದ ಚಂಪತ್ ರಾಯ್, ದೇವಾಲಯದಲ್ಲಿ ಪ್ರಾಣ ಪ್ರತಿಷ್ಠೆಗಾಗಿ ಸಂತರು ಮತ್ತು ದರ್ಶಕರಿಗೆ ಮೌಖಿಕ ಆಹ್ವಾನವನ್ನು ನೀಡಲಾಗುತ್ತಿದೆ. ನವೆಂಬರ್‌ನಲ್ಲಿ ಸಾಧುಗಳು ಮತ್ತು ಸನ್ಯಾಸಿಗಳನ್ನು ಸಹ ವಿಧಿವತ್ತಾಗಿ ಆಹ್ವಾನಿಸಲಾಗುವುದು ಎಂದು ಹೇಳಿದರು. ಇದರೊಂದಿಗೆ ದೇಶದ ಎಲ್ಲಾ ಸಂಪ್ರದಾಯಗಳಿಗೆ ಸಂಬಂಧಿಸಿದ ಋಷಿಮುನಿಗಳು ಮತ್ತು ಸಂತರನ್ನು ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೆ ಆಹ್ವಾನಿಸಲಾಗುವುದು ಎಂದು ಹೇಳಲಾಗಿದೆ.

ದೇವಸ್ಥಾನದ ಕಾಮಗಾರಿ ಎಲ್ಲಿವರೆಗೆ ಆಯ್ತು?

ದೇಗುಲದ ಸಿದ್ಧತೆ ಕುರಿತು ಮಾಹಿತಿ ನೀಡಿದ ಚಂಪತ್ ರಾಯ್, ಗರ್ಭಗುಡಿಯಲ್ಲಿ ರಾಮಲಲ್ಲಾ ಭವ್ಯ ಮೂರ್ತಿ ಪ್ರತಿಷ್ಠಾಪಿಸುವ ಸ್ಥಳವನ್ನು ಸಂಪೂರ್ಣ ಸಿದ್ಧಪಡಿಸಲಾಗಿದೆ ಎಂದರು. ಎರಡು ಅಂತಸ್ತಿನ ದೇವಸ್ಥಾನದ ಮೊದಲ ಅಂತಸ್ತಿನ ಮೇಲ್ಛಾವಣಿಯ ಶೇ.80 ರಷ್ಟು ಕಾಮಗಾರಿ ಪೂರ್ಣಗೊಂಡಿದೆ ಎಂದ ಅವರು, ದೇವಸ್ಥಾನದಲ್ಲಿ ಭಕ್ತರ ದರ್ಶನದ ಜೊತೆಗೆ ನಿರ್ಮಾಣ ಕಾರ್ಯವೂ ಮುಂದುವರಿಯಲಿದ್ದು, ಇದರಿಂದ ಯಾರಿಗೂ ಯಾವುದೇ ಸಮಸ್ಯೆಗಳಾಗುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಯೋಧ್ಯೆಯಲ್ಲಿ ಮುಂದಿನ ಜನವರಿ ಅಂತ್ಯಕ್ಕೆ ಶ್ರೀ ರಾಮಮಂದಿರ ಉದ್ಘಾಟನೆಯಾಗಲಿದೆ: ಪೇಜಾವರ ಶ್ರೀ

ಈ ಸಂದರ್ಭದಲ್ಲಿ, ಅಖಿಲ ಭಾರತೀಯ ಅಖಾರ ಪರಿಷತ್ತಿನ ಅಧ್ಯಕ್ಷ ಮಹಂತ್ ರವೀಂದ್ರ ಪುರಿ ಮಾತನಾಡಿ, ಭಗವಾನ್ ಶ್ರೀರಾಮನು ತನ್ನ ದೇವಾಲಯದ ನಿರ್ಮಾಣದ ಜವಾಬ್ದಾರಿಯನ್ನು ಚಂಪತ್ ರಾಯ್ ಅವರಿಗ ವಹಿಸಿದ್ದಾನೆ. ಅವರನ್ನು ನೋಡಿದರೆ ಸಂತರಿಗೆ ದೇವರ ದರ್ಶನವಾದಂತೆ ಎಂದು ನಾವು ನಂಬುತ್ತೇವೆ. ಮೂರ್ತಿ ಪ್ರತಿಷ್ಠಾಪನೆ ಹಾಗೂ ದೇಗುಲದ ಉದ್ಘಾಟನಾ ಸಮಾರಂಭಕ್ಕೆ ಎಲ್ಲ ಸಂತರು, ಋಷಿಮುನಿಗಳು ಆಗಮಿಸಬೇಕು ಎಂದು ಪುರಿ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ