ಉತ್ತರ ಪ್ರದೇಶ ಚುನಾವಣೆಗೆ ಮುನ್ನ ಬೂತ್ ಮಟ್ಟದ 30 ಲಕ್ಷ ಕಾರ್ಯಕರ್ತರಿಗೆ ದೀಪಾವಳಿ ಉಡುಗೊರೆ ಕಳುಹಿಸಿದ ಬಿಜೆಪಿ

Uttar Pradesh ಉಡುಗೊರೆಗಳು ಚುನಾವಣಾ ಪ್ರಚಾರದ ಭಾಗವೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಪಾಠಕ್, "ಪಕ್ಷದ ಪ್ರಮುಖ ಗಮನವು 2022 ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಾಗಿದೆ ಮತ್ತು ಜನರಲ್ಲಿ ಚುನಾವಣಾ ಚಿಹ್ನೆಯನ್ನು ತೆಗೆದುಕೊಂಡು ಹೋಗುವುದು ಸಹಜ ಪ್ರಕ್ರಿಯೆ" ಎಂದು ಹೇಳಿದರು.

ಉತ್ತರ ಪ್ರದೇಶ ಚುನಾವಣೆಗೆ ಮುನ್ನ ಬೂತ್ ಮಟ್ಟದ 30 ಲಕ್ಷ ಕಾರ್ಯಕರ್ತರಿಗೆ ದೀಪಾವಳಿ ಉಡುಗೊರೆ ಕಳುಹಿಸಿದ ಬಿಜೆಪಿ
ಬಿಜೆಪಿ ಧ್ವಜ (ಪ್ರಾತಿನಿಧಿಕ ಚಿತ್ರ)
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Oct 28, 2021 | 5:26 PM

ಲಖನೌ: ಉತ್ತರ ಪ್ರದೇಶದ ಬಿಜೆಪಿ ತನ್ನ ಬೂತ್ ಮಟ್ಟದ 30 ಲಕ್ಷ ಕಾರ್ಯಕರ್ತರಿಗೆ ದೀಪಾವಳಿ ಉಡುಗೊರೆಯನ್ನು ಕಳುಹಿಸಿದ್ದು, 2022 ರ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಬೂತ್ ನಿರ್ವಹಣೆಯ ಮಹತ್ವವನ್ನು ಒತ್ತಿಹೇಳಿದೆ. ರಾಜ್ಯದಲ್ಲಿ 1.63 ಲಕ್ಷ ಬೂತ್‌ಗಳಿದ್ದು, 1.5 ಲಕ್ಷಕ್ಕೂ ಹೆಚ್ಚು ಬೂತ್‌ಗಳಲ್ಲಿ ಬಿಜೆಪಿ 20-20 ಸದಸ್ಯರ ಸಮಿತಿಗಳನ್ನು ರಚಿಸಿದೆ.ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡುವ ಬಿಜೆಪಿ ಕುಟುಂಬದಲ್ಲಿ ಬೂತ್ ಮಟ್ಟದ ಕಾರ್ಯಕರ್ತ ಪ್ರಮುಖ ಕೊಂಡಿಯಾಗಿದ್ದು, ದೀಪಾವಳಿಯಂದು ಉಡುಗೊರೆಗಳನ್ನು ನೀಡುವ ಸಂಪ್ರದಾಯವಿದೆ ಆದ್ದರಿಂದ ಪಕ್ಷವು ಈ ಬಾರಿ 30 ಲಕ್ಷಕ್ಕೂ ಹೆಚ್ಚು ಬೂತ್ ಕಾರ್ಯಕರ್ತರಿಗೆ ಉಡುಗೊರೆಗಳನ್ನು ಕಳುಹಿಸಿದೆ ಎಂದು ಬಿ.ಜೆ.ಪಿ. ರಾಜ್ಯ ಉಪಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ವಿಜಯ್ ಬಹದ್ದೂರ್ ಪಾಠಕ್ ಹೇಳಿದರು. ಬಾಗಿಲ ತೋರಣ ಮತ್ತು ಕಮಲದ ಆಕಾರದ ಮಣ್ಣಿನ ದೀಪವನ್ನು ಒಳಗೊಂಡಿರುವ ಉಡುಗೊರೆ ಪೆಟ್ಟಿಗೆಗಳನ್ನು ಎಲ್ಲಾ ಬೂತ್ ಸಮಿತಿಗಳ ಸದಸ್ಯರಿಗೆ ಕಳುಹಿಸಲಾಗಿದೆ.

ಉಡುಗೊರೆಗಳು ಚುನಾವಣಾ ಪ್ರಚಾರದ ಭಾಗವೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಪಾಠಕ್, “ಪಕ್ಷದ ಪ್ರಮುಖ ಗಮನವು 2022 ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಾಗಿದೆ ಮತ್ತು ಜನರಲ್ಲಿ ಚುನಾವಣಾ ಚಿಹ್ನೆಯನ್ನು ತೆಗೆದುಕೊಂಡು ಹೋಗುವುದು ಸಹಜ ಪ್ರಕ್ರಿಯೆ” ಎಂದು ಹೇಳಿದರು.

“ಜನರು ಕಮಲದ ದೀಪವನ್ನು ಬೆಳಗಿಸಿದಾಗ, ಕತ್ತಲೆ ಮಾತ್ರ ಮಾಯವಾಗುವುದಿಲ್ಲ, ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಪ್ರಾರಂಭಿಸಿದ ಅಭಿವೃದ್ಧಿ ಯೋಜನೆಗಳು ಬಲಗೊಳ್ಳುತ್ತವೆ ಎಂದು ಪಾಠಕ್ ಹೇಳಿದರು.

2017 ರ ವಿಧಾನಸಭಾ ಚುನಾವಣೆಯಲ್ಲಿ, ಆಗ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬೂತ್ ನಿರ್ವಹಣಾ ಸೂತ್ರವನ್ನು ಜಾರಿಗೆ ತಂದರು ಮತ್ತು ಬೂತ್ ಕಾರ್ಯಕರ್ತರ ಮನೆಗಳಿಗೆ ಭೇಟಿ ನೀಡಿದ್ದರು. ಶಾ ರಾಜ್ಯದ ವಿವಿಧ ಭಾಗಗಳಲ್ಲಿ ಬೂತ್ ಸಭೆಗಳನ್ನು ಉದ್ದೇಶಿಸಿ ಮಾತನಾಡಿದ್ದರು. ಪಕ್ಷದ ಕಾರ್ಯಕರ್ತರನ್ನು ಹುರಿದುಂಬಿಸಲು ಶಾ ಶುಕ್ರವಾರ ಲಖನೌಗೆ ಭೇಟಿ ನೀಡಲಿದ್ದಾರೆ. ಬಿಜೆಪಿ ಕೂಡ ‘ಸಾಮಾಜಿಕ ಪ್ರತಿನಿಧಿ ಸಮ್ಮೇಳನ’, ಜಾತಿ ಆಧಾರಿತ ಸಮಾವೇಶಗಳನ್ನು ನಡೆಸುತ್ತಿದೆ.

ಇದನ್ನೂ ಓದಿ: 12 ಐಎಎಸ್ ಅಧಿಕಾರಿಗಳ ವರ್ಗಾವಣೆ, ಲಖಿಂಪುರ ಖೇರಿ ಜಿಲ್ಲಾ ಮ್ಯಾಜಿಸ್ಟ್ರೇಟ್​ನ್ನು ತೆಗೆದುಹಾಕಿದ ಉತ್ತರ ಪ್ರದೇಶ ಸರ್ಕಾರ

ಇದನ್ನೂ ಓದಿ:  ಇದು ಉತ್ತರ ಪ್ರದೇಶದಲ್ಲಿ ನಡೆಯುತ್ತಿರಬಹುದು, ಇಲ್ಲಿ ಅಲ್ಲ: ಯುಪಿ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ದೆಹಲಿ ಹೈಕೋರ್ಟ್

ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?