ತಂದೆಯನ್ನು ಕೊಲ್ಲಲು ಮೂವರು ಶೂಟರ್​ಗಳನ್ನು ನೇಮಿಸಿದ್ದ ಬಾಲಕನ ಬಂಧನ

ತನ್ನ ತಂದೆಯನ್ನೇ ಕೊಲ್ಲಲು ಶೂಟರ್​ಗಳನ್ನು ನೇಮಿಸಿದ್ದ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶದ ಪ್ರತಾಪ್​ಗಢದ ಪಟ್ಟಿ ಪ್ರದೇಶದಲ್ಲಿ ಉದ್ಯಮಿ ಮೊಹಮ್ಮದ್ ನಯೀಮ್ (50) ಅವರನ್ನು ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಈ ಪ್ರಕರಣದ ತನಿಖೆ ನಡೆಯುವಾಗ ಈ ವಿಚಾರ ಬೆಳಕಿಗೆ ಬಂದಿದೆ.

ತಂದೆಯನ್ನು ಕೊಲ್ಲಲು ಮೂವರು ಶೂಟರ್​ಗಳನ್ನು ನೇಮಿಸಿದ್ದ ಬಾಲಕನ ಬಂಧನ
Follow us
ನಯನಾ ರಾಜೀವ್
|

Updated on: Mar 24, 2024 | 8:46 AM

ತಂದೆಯನ್ನು ಕೊಲ್ಲಲು ಮೂವರು ಶೂಟರ್‌ಗಳನ್ನು ನೇಮಿಸಿದ್ದ 16 ವರ್ಷದ ಬಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಉತ್ತರ ಪ್ರದೇಶದ ಪ್ರತಾಪ್​ಗಢದ ಪಟ್ಟಿ ಪ್ರದೇಶದಲ್ಲಿ ಉದ್ಯಮಿ ಮೊಹಮ್ಮದ್ ನಯೀಮ್ (50) ಅವರನ್ನು ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ಮೂವರು ದಾಳಿಕೋರರಾದ ​​ಪಿಯೂಷ್ ಪಾಲ್, ಶುಭಂ ಸೋನಿ ಮತ್ತು ಪ್ರಿಯಾಂಶು ಅವರನ್ನು ಬಂಧಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ದುರ್ಗೇಶ್ ಕುಮಾರ್ ಸಿಂಗ್ ತಿಳಿಸಿದ್ದಾರೆ. ವಿಚಾರಣೆ ವೇಳೆ ಆರೋಪಿಗಳು ಕೃತ್ಯಕ್ಕೆ ನಯೀಮ್‌ನ ಮಗನಿಂದ ಹಣ ಪಡೆದಿದ್ದಾಗಿ ಲೀಸರಿಗೆ ಮಾಹಿತಿ ನೀಡಿದ್ದಾರೆ.

ಶೂಟರ್​ಗಳಿಗೆ ತನ್ನ ತಂದೆಯನ್ನು ಹತ್ಯೆ ಮಾಡುವಂತೆ ಸುಪಾರಿ ನೀಡಿದ್ದ, ಆರು ಲಕ್ಷ ರೂಪಾಯಿ ನೀಡುವುದಾಗಿ ಭರವಸೆ ನೀಡಿದ್ದು, ತನ್ನ ತಂದೆಯನ್ನು ಕೊಂದ ಬಳಿಕ ಉಳಿದ ಮೊತ್ತವನ್ನು ನೀಡುವುದಾಗಿ ಮುಂಗಡವಾಗಿ 1.5 ಲಕ್ಷ ನೀಡಿದ್ದಾನೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮತ್ತಷ್ಟು ಓದಿ: ಭಯೋತ್ಪಾದಕ ಸಂಘಟನೆಗೆ ಸೇರುವ ಇಚ್ಛೆ ವ್ಯಕ್ತಪಡಿಸಿದ ಐಐಟಿ ಗುವಾಹಟಿ ವಿದ್ಯಾರ್ಥಿಯ ಬಂಧನ

ಪೊಲೀಸರ ಪ್ರಕಾರ, ತಂದೆ ಹೆಚ್ಚಿನ ಪಾಕೆಟ್​ ಮನಿ ನೀಡದ ಕಾರಣ ಕೋಪಗೊಂಡು ಹತ್ಯೆ ಮಾಡಿದ್ದಾಗಿ ತಿಳಿಸಿದ್ದಾನೆ. ಆ ಬಾಲಕ ತನ್ನ ಆಸೆಗಳನ್ನು ಪೂರೈಸಿಕೊಳ್ಳಲು ಆಗಾಗ ಅಂಗಡಿಯಿಂದ ಹಣ ಅಥವಾ ಮನೆಯಿಂದ ಚಿನ್ನಾಭರಣ ಕದಿಯುತ್ತಿದ್ದ, ಈ ಮೊದಲು ತನ್ನ ತಂದೆಯನ್ನು ಕೊಲ್ಲಲು ಪ್ಲ್ಯಾನ್ ಮಾಡಿ ವಿಫಲನಾಗಿದ್ದ. ಪೊಲೀಸರು ಬಂಧಿತ ಶೂಟರ್‌ಗಳನ್ನು ಜೈಲಿಗೆ ಕಳುಹಿಸಿದ್ದು, ಅಪ್ರಾಪ್ತ ವಯಸ್ಕನನ್ನು ಬಾಲಾಪರಾಧಿಗೃಹಕ್ಕೆ ಕಳುಹಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ