ತಂದೆಯನ್ನು ಕೊಲ್ಲಲು ಮೂವರು ಶೂಟರ್​ಗಳನ್ನು ನೇಮಿಸಿದ್ದ ಬಾಲಕನ ಬಂಧನ

ತನ್ನ ತಂದೆಯನ್ನೇ ಕೊಲ್ಲಲು ಶೂಟರ್​ಗಳನ್ನು ನೇಮಿಸಿದ್ದ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶದ ಪ್ರತಾಪ್​ಗಢದ ಪಟ್ಟಿ ಪ್ರದೇಶದಲ್ಲಿ ಉದ್ಯಮಿ ಮೊಹಮ್ಮದ್ ನಯೀಮ್ (50) ಅವರನ್ನು ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಈ ಪ್ರಕರಣದ ತನಿಖೆ ನಡೆಯುವಾಗ ಈ ವಿಚಾರ ಬೆಳಕಿಗೆ ಬಂದಿದೆ.

ತಂದೆಯನ್ನು ಕೊಲ್ಲಲು ಮೂವರು ಶೂಟರ್​ಗಳನ್ನು ನೇಮಿಸಿದ್ದ ಬಾಲಕನ ಬಂಧನ

Updated on: Mar 24, 2024 | 8:46 AM

ತಂದೆಯನ್ನು ಕೊಲ್ಲಲು ಮೂವರು ಶೂಟರ್‌ಗಳನ್ನು ನೇಮಿಸಿದ್ದ 16 ವರ್ಷದ ಬಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಉತ್ತರ ಪ್ರದೇಶದ ಪ್ರತಾಪ್​ಗಢದ ಪಟ್ಟಿ ಪ್ರದೇಶದಲ್ಲಿ ಉದ್ಯಮಿ ಮೊಹಮ್ಮದ್ ನಯೀಮ್ (50) ಅವರನ್ನು ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ಮೂವರು ದಾಳಿಕೋರರಾದ ​​ಪಿಯೂಷ್ ಪಾಲ್, ಶುಭಂ ಸೋನಿ ಮತ್ತು ಪ್ರಿಯಾಂಶು ಅವರನ್ನು ಬಂಧಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ದುರ್ಗೇಶ್ ಕುಮಾರ್ ಸಿಂಗ್ ತಿಳಿಸಿದ್ದಾರೆ. ವಿಚಾರಣೆ ವೇಳೆ ಆರೋಪಿಗಳು ಕೃತ್ಯಕ್ಕೆ ನಯೀಮ್‌ನ ಮಗನಿಂದ ಹಣ ಪಡೆದಿದ್ದಾಗಿ ಲೀಸರಿಗೆ ಮಾಹಿತಿ ನೀಡಿದ್ದಾರೆ.

ಶೂಟರ್​ಗಳಿಗೆ ತನ್ನ ತಂದೆಯನ್ನು ಹತ್ಯೆ ಮಾಡುವಂತೆ ಸುಪಾರಿ ನೀಡಿದ್ದ, ಆರು ಲಕ್ಷ ರೂಪಾಯಿ ನೀಡುವುದಾಗಿ ಭರವಸೆ ನೀಡಿದ್ದು, ತನ್ನ ತಂದೆಯನ್ನು ಕೊಂದ ಬಳಿಕ ಉಳಿದ ಮೊತ್ತವನ್ನು ನೀಡುವುದಾಗಿ ಮುಂಗಡವಾಗಿ 1.5 ಲಕ್ಷ ನೀಡಿದ್ದಾನೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮತ್ತಷ್ಟು ಓದಿ: ಭಯೋತ್ಪಾದಕ ಸಂಘಟನೆಗೆ ಸೇರುವ ಇಚ್ಛೆ ವ್ಯಕ್ತಪಡಿಸಿದ ಐಐಟಿ ಗುವಾಹಟಿ ವಿದ್ಯಾರ್ಥಿಯ ಬಂಧನ

ಪೊಲೀಸರ ಪ್ರಕಾರ, ತಂದೆ ಹೆಚ್ಚಿನ ಪಾಕೆಟ್​ ಮನಿ ನೀಡದ ಕಾರಣ ಕೋಪಗೊಂಡು ಹತ್ಯೆ ಮಾಡಿದ್ದಾಗಿ ತಿಳಿಸಿದ್ದಾನೆ.
ಆ ಬಾಲಕ ತನ್ನ ಆಸೆಗಳನ್ನು ಪೂರೈಸಿಕೊಳ್ಳಲು ಆಗಾಗ ಅಂಗಡಿಯಿಂದ ಹಣ ಅಥವಾ ಮನೆಯಿಂದ ಚಿನ್ನಾಭರಣ ಕದಿಯುತ್ತಿದ್ದ, ಈ ಮೊದಲು ತನ್ನ ತಂದೆಯನ್ನು ಕೊಲ್ಲಲು ಪ್ಲ್ಯಾನ್ ಮಾಡಿ ವಿಫಲನಾಗಿದ್ದ. ಪೊಲೀಸರು ಬಂಧಿತ ಶೂಟರ್‌ಗಳನ್ನು ಜೈಲಿಗೆ ಕಳುಹಿಸಿದ್ದು, ಅಪ್ರಾಪ್ತ ವಯಸ್ಕನನ್ನು ಬಾಲಾಪರಾಧಿಗೃಹಕ್ಕೆ ಕಳುಹಿಸಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
Loading...
Unable to load recommendations.
Follow Us