AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರಿಜ್​ ಭೂಷಣ್ ಶರಣ್​ ಸಿಂಗ್ ಪುತ್ರ ಕರಣ್​ ಬೆಂಗಾವಲು ವಾಹನ ಡಿಕ್ಕಿ, ಇಬ್ಬರು ಸಾವು

ಬಿಜೆಪಿ ಅಭ್ಯರ್ಥಿ ಕರಣ್‌ಭೂಷಣ್ ಸಿಂಗ್ ಅವರ ಬೆಂಗಾವಲು ವಾಹನ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. ಉತ್ತರ ಪ್ರದೇಶದ ಗೊಂಡಾದ ಕರ್ನಲ್‌ಗಂಜ್-ಹುಜೂರ್‌ಪುರ ರಸ್ತೆಯ ಬೈಕುಂತ್ ಪದವಿ ಕಾಲೇಜು ಬಳಿ ಅಪಘಾತ ಸಂಭವಿಸಿದೆ.

ಬ್ರಿಜ್​ ಭೂಷಣ್ ಶರಣ್​ ಸಿಂಗ್ ಪುತ್ರ ಕರಣ್​ ಬೆಂಗಾವಲು ವಾಹನ ಡಿಕ್ಕಿ, ಇಬ್ಬರು ಸಾವು
Image Credit source: India TV
ನಯನಾ ರಾಜೀವ್
|

Updated on:May 29, 2024 | 12:26 PM

Share

ಕೇಸರ್‌ಗಂಜ್‌ನ ಬಿಜೆಪಿ ಅಭ್ಯರ್ಥಿ ಕರಣ್‌ಭೂಷಣ್ ಸಿಂಗ್(Karan Bhushan Singh)  ಅವರ ಬೆಂಗಾವಲು ವಾಹನ ಡಿಕ್ಕಿಯಾಗಿ, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ.

ಉತ್ತರ ಪ್ರದೇಶದ ಗೊಂಡಾದ ಕರ್ನಲ್‌ಗಂಜ್-ಹುಜೂರ್‌ಪುರ ರಸ್ತೆಯ ಬೈಕುಂತ್ ಪದವಿ ಕಾಲೇಜು ಬಳಿ ಅಪಘಾತ ಸಂಭವಿಸಿದೆ. ಅಪಘಾತದ ನಂತರ ಚಾಲಕ ಕಾರು ಬಿಟ್ಟು ಅಲ್ಲಿಂದ ಪರಾರಿಯಾಗಿದ್ದಾರೆ. ಮಾಹಿತಿ ತಿಳಿದ ಕೂಡಲೇ ಗ್ರಾಮಸ್ಥರು ಸ್ಥಳದಲ್ಲಿ ಜಮಾಯಿಸಿದರು. ರಸ್ತೆಗಿಳಿದು ಪ್ರತಿಭಟನೆ ನಡೆಸುವುದರೊಂದಿಗೆ ಆಕ್ರೋಶಗೊಂಡ ಜನರು ಕಾರಿಗೆ ಬೆಂಕಿ ಹಚ್ಚಲು ಯತ್ನಿಸಿದರು.

ಕತ್ರಾಬಜಾರ್, ಪರಸ್ಪುರ್, ಕೌಡಿಯಾ ಮತ್ತು ಕರ್ನಲ್ಗಂಜ್ ಪೊಲೀಸ್ ಠಾಣೆಗಳ ಪೊಲೀಸ್ ಪಡೆಗಳು ಸ್ಥಳಕ್ಕೆ ಧಾವಿಸಿವೆ. ಕರ್ನಲ್‌ಗಂಜ್-ಹುಜೂರ್‌ಪುರ ರಸ್ತೆಯಲ್ಲಿ ಸುಮಾರು ಒಂದು ಗಂಟೆಗಳ ಕಾಲ ಜಾಮ್‌ ಉಂಟಾಗಿತ್ತು. ಅಪಘಾತದ ಸಮಯದಲ್ಲಿ ಕರಣ್ ಭೂಷಣ್ ವಾಹನದಲ್ಲಿ ಇದ್ದರಾ ಎನ್ನುವ ಕುರಿತು ತನಿಖೆ ನಡೆಯುತ್ತಿದೆ.

ಮತ್ತಷ್ಟು ಓದಿ: ಲೈಂಗಿಕ ಕಿರುಕುಳ ಆರೋಪ ಹೊತ್ತಿರುವ ಬ್ರಿಜ್​ ಭೂಷಣ್​ಗಿಲ್ಲ ಬಿಜೆಪಿ ಟಿಕೆಟ್​

ದೂರಿನ ಆಧಾರದ ಮೇಲೆ ಕರ್ನಲ್ ಗಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಕಾರು ಹಾಗೂ ಚಾಲಕನನ್ನು ವಶಕ್ಕೆ ಪಡೆದು ಕ್ರಮ ಕೈಗೊಂಡಿದ್ದಾರೆ. ಘಟನಾ ಸ್ಥಳದಲ್ಲಿ ಪೊಲೀಸ್ ಪಡೆ ಹಾಜರಿದ್ದು, ಸದ್ಯ ಕಾನೂನು ಸುವ್ಯವಸ್ಥೆ ನಿಯಂತ್ರಣದಲ್ಲಿದೆ. ಕರಣ್​ ಸಿಂಗ್​ ಕೇಸರ್​ಗಂಜ್​ನ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ.

ಕರಣ್​ ತಂದೆ ಬ್ರಿಜ್​ ಭೂಷಣ್​ ಶರಣ್​ ಸಿಂಗ್​ ಈ ಹಿಂದೆ ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷರಾಗಿದ್ದರು. ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದ ಮೇಲೆ ಅವರನ್ನು ಬಂಧಿಸುವಂತೆ ಒತ್ತಾಯಿಸಿ ನೂರಾರು ಮಹಿಳಾ ಕುಸ್ತಿಪಟುಗಳು ತಿಂಗಳುಗಟ್ಟಲೆ ಪ್ರತಿಭಟನೆ ನಡೆಸಿದ್ದರು. ಇದಾದ ಬಳಿಕ ಅವರನ್ನು ಕುಸ್ತಿ ಫೆಡರೇಷನ್ ಅಧ್ಯಕ್ಷ ಸ್ಥಾನದಿಂದ ಕೈಬಿಡಲಾಯಿತು. ಅಷ್ಟೇ ಅಲ್ಲದೆ ಕೇಸರ್​ಗಂಜ್​ನಲ್ಲಿ ಅವರ ಬದಲಿಗೆ ಅವರ ಪುತ್ರ ಕರಣ್​ಗೆ ಬಿಜೆಪಿ ಟಿಕೆಟ್​ ನೀಡಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:20 pm, Wed, 29 May 24