ಉಗ್ರ ಸ್ವರೂಪ ಪಡೆದ ಪೌರತ್ವ ವಿರೋಧಿ ಪ್ರತಿಭಟನೆ, ಉತ್ತರ ಪ್ರದೇಶದಲ್ಲಿ 6 ಮಂದಿ ಸಾವು
ಲಖನೌ: ಪೌರತ್ವ ಕಾಯ್ದೆ ವಿರೋಧಿಸಿ ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆ ಉಗ್ರ ಸ್ವರೂಪ ಪಡೆದುಕೊಂಡಿದೆ. ಹಿಂಸಾಚಾರದಲ್ಲಿ 6 ಮಂದಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಕಾನ್ಪುರದಲ್ಲಿ ಪೊಲೀಸರು ಪ್ರತಿಭಟನಾಕಾರರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. 8 ಜನರಿಗೆ ಗುಂಡೇಟು ತಗುಲಿದ್ದು, ಎಂಟೂ ಜನರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗೋರಖ್ಪುರದಲ್ಲಿ ಪೊಲೀಸರು, ಪ್ರತಿಭಟನಾಕಾರರ ನಡುವೆ ಸಂಘರ್ಷ ಉಂಟಾಗಿದ್ದು, ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಅಲ್ಲದೆ, ಬುಲಂದ್ ಶಹರ್ನಲ್ಲಿ ಪೊಲೀಸ್ ವಾಹನಕ್ಕೆ ಬೆಂಕಿ ಹಚ್ಚಿದ್ದಾರೆ. ಒಟ್ಟಾರೆಯಾಗಿ ಉತ್ತರಪ್ರದೇಶದ […]
ಲಖನೌ: ಪೌರತ್ವ ಕಾಯ್ದೆ ವಿರೋಧಿಸಿ ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆ ಉಗ್ರ ಸ್ವರೂಪ ಪಡೆದುಕೊಂಡಿದೆ. ಹಿಂಸಾಚಾರದಲ್ಲಿ 6 ಮಂದಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಕಾನ್ಪುರದಲ್ಲಿ ಪೊಲೀಸರು ಪ್ರತಿಭಟನಾಕಾರರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. 8 ಜನರಿಗೆ ಗುಂಡೇಟು ತಗುಲಿದ್ದು, ಎಂಟೂ ಜನರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಗೋರಖ್ಪುರದಲ್ಲಿ ಪೊಲೀಸರು, ಪ್ರತಿಭಟನಾಕಾರರ ನಡುವೆ ಸಂಘರ್ಷ ಉಂಟಾಗಿದ್ದು, ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಅಲ್ಲದೆ, ಬುಲಂದ್ ಶಹರ್ನಲ್ಲಿ ಪೊಲೀಸ್ ವಾಹನಕ್ಕೆ ಬೆಂಕಿ ಹಚ್ಚಿದ್ದಾರೆ. ಒಟ್ಟಾರೆಯಾಗಿ ಉತ್ತರಪ್ರದೇಶದ 5ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಹಿಂಸಾಚಾರವಾಗಿದ್ದು, 15ಕ್ಕೂ ಹೆಚ್ಚು ವಾಹನಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೆಹಲಿಯಲ್ಲಿ 4 ಮೆಟ್ರೋ ಸ್ಟೇಷನ್ ಬಂದ್: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ಪ್ರತಿಭಟನೆ ಮುಂದುವರಿದಿದೆ. ಮುಂಜಾಗ್ರತಾ ಕ್ರಮವಾಗಿ ಜಾಮಾ ಮಸೀದಿ ಸುತ್ತಲಿನ 4 ಮೆಟ್ರೋ ಸ್ಟೇಷನ್ಗಳನ್ನು ಬಂದ್ ಮಾಡಲಾಗಿದೆ. ದೆಹಲಿಯ ಚಾರ್ವಿ ಬಜಾರ್, ಲಾಲ್ಕಿಲಾ, ಜಾಮಾ ಮಸೀದಿ ಮತ್ತು ದೆಹಲಿ ಗೇಟ್ ಮೆಟ್ರೋ ಸ್ಟೇಷನ್ಗಳನ್ನು ಮುಚ್ಚಲಾಗಿದೆ.
ಹೈದರಾಬಾದ್ನಲ್ಲೂ ಪರಿಸ್ಥಿತಿ ಉದ್ವಿಗ್ನ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಆಂಧ್ರದಲ್ಲೂ ಪ್ರತಿಭಟನೆ ಜೋರಾಗಿದೆ. ಚಿತ್ತೂರು, ನೆಲ್ಲೂರು, ಕರ್ನೂಲ್, ಪೂರ್ವಗೋದಾವರಿ ಸೇರಿದಂತೆ ಹಲವೆಡೆ ಬೃಹತ್ ಪ್ರತಿಭಟನೆಗಳು ನಡೆಯುತ್ತಿವೆ. ಹೈದರಾಬಾದ್ನ ಚಾರ್ಮಿನಾರ್ ಬಳಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದರು. ಸ್ಥಳದಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದ್ದು ಅಹಿತಕರ ಘಟನೆ ನಡೆಯದಂತೆ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.
Published On - 5:48 pm, Fri, 20 December 19