ಉಗ್ರ ಸ್ವರೂಪ ಪಡೆದ ಪೌರತ್ವ ವಿರೋಧಿ ಪ್ರತಿಭಟನೆ, ಉತ್ತರ ಪ್ರದೇಶದಲ್ಲಿ 6 ಮಂದಿ ಸಾವು

ಲಖನೌ: ಪೌರತ್ವ ಕಾಯ್ದೆ ವಿರೋಧಿಸಿ ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆ ಉಗ್ರ ಸ್ವರೂಪ ಪಡೆದುಕೊಂಡಿದೆ. ಹಿಂಸಾಚಾರದಲ್ಲಿ 6 ಮಂದಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಕಾನ್ಪುರದಲ್ಲಿ ಪೊಲೀಸರು ಪ್ರತಿಭಟನಾಕಾರರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. 8 ಜನರಿಗೆ ಗುಂಡೇಟು ತಗುಲಿದ್ದು, ಎಂಟೂ ಜನರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗೋರಖ್​ಪುರದಲ್ಲಿ ಪೊಲೀಸರು, ಪ್ರತಿಭಟನಾಕಾರರ ನಡುವೆ ಸಂಘರ್ಷ ಉಂಟಾಗಿದ್ದು, ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಅಲ್ಲದೆ, ಬುಲಂದ್ ಶಹರ್​ನಲ್ಲಿ ಪೊಲೀಸ್ ವಾಹನಕ್ಕೆ ಬೆಂಕಿ ಹಚ್ಚಿದ್ದಾರೆ. ಒಟ್ಟಾರೆಯಾಗಿ ಉತ್ತರಪ್ರದೇಶದ […]

ಉಗ್ರ ಸ್ವರೂಪ ಪಡೆದ ಪೌರತ್ವ ವಿರೋಧಿ ಪ್ರತಿಭಟನೆ, ಉತ್ತರ ಪ್ರದೇಶದಲ್ಲಿ 6 ಮಂದಿ ಸಾವು
ಸಾಧು ಶ್ರೀನಾಥ್​

Updated on: Dec 20, 2019 | 8:17 PM

ಲಖನೌ: ಪೌರತ್ವ ಕಾಯ್ದೆ ವಿರೋಧಿಸಿ ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆ ಉಗ್ರ ಸ್ವರೂಪ ಪಡೆದುಕೊಂಡಿದೆ. ಹಿಂಸಾಚಾರದಲ್ಲಿ 6 ಮಂದಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಕಾನ್ಪುರದಲ್ಲಿ ಪೊಲೀಸರು ಪ್ರತಿಭಟನಾಕಾರರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. 8 ಜನರಿಗೆ ಗುಂಡೇಟು ತಗುಲಿದ್ದು, ಎಂಟೂ ಜನರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಗೋರಖ್​ಪುರದಲ್ಲಿ ಪೊಲೀಸರು, ಪ್ರತಿಭಟನಾಕಾರರ ನಡುವೆ ಸಂಘರ್ಷ ಉಂಟಾಗಿದ್ದು, ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಅಲ್ಲದೆ, ಬುಲಂದ್ ಶಹರ್​ನಲ್ಲಿ ಪೊಲೀಸ್ ವಾಹನಕ್ಕೆ ಬೆಂಕಿ ಹಚ್ಚಿದ್ದಾರೆ. ಒಟ್ಟಾರೆಯಾಗಿ ಉತ್ತರಪ್ರದೇಶದ 5ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಹಿಂಸಾಚಾರವಾಗಿದ್ದು, 15ಕ್ಕೂ ಹೆಚ್ಚು ವಾಹನಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೆಹಲಿಯಲ್ಲಿ 4 ಮೆಟ್ರೋ ಸ್ಟೇಷನ್ ಬಂದ್:
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ಪ್ರತಿಭಟನೆ ಮುಂದುವರಿದಿದೆ. ಮುಂಜಾಗ್ರತಾ ಕ್ರಮವಾಗಿ ಜಾಮಾ ಮಸೀದಿ ಸುತ್ತಲಿನ 4 ಮೆಟ್ರೋ ಸ್ಟೇಷನ್​ಗಳನ್ನು ಬಂದ್ ಮಾಡಲಾಗಿದೆ. ದೆಹಲಿಯ ಚಾರ್ವಿ ಬಜಾರ್, ಲಾಲ್​ಕಿಲಾ, ಜಾಮಾ ಮಸೀದಿ ಮತ್ತು ದೆಹಲಿ ಗೇಟ್​ ಮೆಟ್ರೋ ಸ್ಟೇಷನ್​ಗಳನ್ನು ಮುಚ್ಚಲಾಗಿದೆ.

ಹೈದರಾಬಾದ್​ನಲ್ಲೂ ಪರಿಸ್ಥಿತಿ ಉದ್ವಿಗ್ನ:
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಆಂಧ್ರದಲ್ಲೂ ಪ್ರತಿಭಟನೆ ಜೋರಾಗಿದೆ. ಚಿತ್ತೂರು, ನೆಲ್ಲೂರು, ಕರ್ನೂಲ್, ಪೂರ್ವಗೋದಾವರಿ ಸೇರಿದಂತೆ ಹಲವೆಡೆ ಬೃಹತ್​ ಪ್ರತಿಭಟನೆಗಳು ನಡೆಯುತ್ತಿವೆ. ಹೈದರಾಬಾದ್​ನ ಚಾರ್ಮಿನಾರ್​ ಬಳಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದರು. ಸ್ಥಳದಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದ್ದು ಅಹಿತಕರ ಘಟನೆ ನಡೆಯದಂತೆ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.

Published On - 5:48 pm, Fri, 20 December 19

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us