ಕಬ್ಬಿನ ಗದ್ದೆಯಲ್ಲಿ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಅರೆ ನಗ್ನ ದೇಹ ಪತ್ತೆ
ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷದ ಮಹಿಳೆಯ ಸುಟ್ಟ, ಅರೆ ನಗ್ನ ದೇಹ ಪತ್ತೆಯಾಗಿದೆ. ಮುಖ ಸುಟ್ಟು ಕರಕಲಾಗಿದ್ದರಿಂದ ಗುರುತು ಪತ್ತೆ ಅಸಾಧ್ಯವಾಗಿದೆ. ಅತ್ಯಾಚಾರ ಮಾಡಿ ಕೊಲೆಗೈದು, ಸಾಕ್ಷ್ಯ ನಾಶಪಡಿಸಲು ದೇಹವನ್ನು ಸುಟ್ಟು ಹಾಕಿರುವ ಶಂಕೆ ವ್ಯಕ್ತವಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ ಮತ್ತು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

ಹಾಪುರ್, ಜನವರಿ 08: ಕಬ್ಬಿನ ಗದ್ದೆಯಲ್ಲಿ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಅರೆ ಬೆತ್ತಲೆ ದೇಹ ಪತ್ತೆಯಾಗಿರುವ ಘಟನೆ ಉತ್ತರ ಪ್ರದೇಶ(Uttar Pradesh)ದ ಹಾಪುರ್ ಜಿಲ್ಲೆಯ ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದಲ್ಲಿ ನಡೆದಿದೆ. ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ ಮಹಿಳೆಯ ದೇಹ ಪತ್ತೆಯಾಗಿದೆ.
ಮಹಿಳೆಯ ಮುಖ ಸುಟ್ಟು ಕರಕಲಾಗಿದ್ದು, ಗುರುತು ಪತ್ತೆ ಹಚ್ಚುವುದು ಅಸಾಧ್ಯವಾಗಿತ್ತು. ಗ್ರಾಮಸ್ಥರ ಪ್ರಕಾರ, ಶವ ಗಬ್ಬಿನ ಗದ್ದೆಯಲ್ಲಿ ಪತ್ತೆಯಾಗಿತ್ತು, ನಂತರ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಹತ್ತಿರದ ರೈತರು ಮತ್ತು ನಿವಾಸಿಗಳು ಸ್ಥಳದಲ್ಲಿ ಜಮಾಯಿಸಿದ್ದರು.
ಪೊಲೀಸರು ಸ್ಥಳಕ್ಕೆ ತಲುಪಿ ಮಹಿಳೆಯ ಗುರುತನ್ನು ಪತ್ತೆ ಹಚ್ಚಲು ಪ್ರಯತ್ನಿಸಿದ್ದಾರೆ. ಆದರೆ ಅದು ವಿಫಲವಾಗಿತ್ತು. ಮಹಿಳೆಯ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ನಂತರ ಸಾಕ್ಷ್ಯಗಳನ್ನು ನಾಶಮಾಡಲು ಆಕೆಯ ದೇಹವನ್ನು ಸುಟ್ಟು ಹಾಕಲಾಗಿದೆ ಎನ್ನುವ ಶಂಕೆ ವ್ಯಕ್ತವಾಗಿದೆ.
ಮತ್ತಷ್ಟು ಓದಿ: ತಿಂಗಳಲ್ಲಿ 15 ದಿನ ಗಂಡನ ಜೊತೆ, 15 ದಿನ ಪ್ರೇಮಿ ಜೊತೆ; ಈ ಮಹಿಳೆಯ ಶೋಕಿಗೆ ಊರವರು ಶಾಕ್!
ಕೊಲೆಯನ್ನು ಬೇರೆಡೆ ಮಾಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ, ಮೃತರ ಗುರುತು ಮರೆಮಾಡಲು ಶವವನ್ನು ಕಬ್ಬಿನ ಗದ್ದೆಗೆ ತರಲಾಗಿದೆ. ಮಹಿಳೆಯ ಬಟ್ಟೆಗಳು ಭಾಗಶಃ ಸುಟ್ಟುಹೋಗಿವೆ ಮತ್ತು ಆಕೆಯ ದೇಹದ ಹಲವಾರು ಭಾಗಗಳಲ್ಲಿ ತೀವ್ರವಾದ ಸುಟ್ಟ ಗಾಯಗಳಿದ್ದವು. ಸುತ್ತಮುತ್ತಲಿನ ಪ್ರದೇಶದಿಂದ ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ಸಾವಿಗೆ ನಿಖರವಾದ ಕಾರಣ ತಿಳಿದುಬರಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದಕ್ಕೂ ಮೊದಲು, ನಂದಗ್ರಾಮ್‌ನ ರಾಜ್‌ನಗರ ಪ್ರದೇಶದಲ್ಲಿ ಬಾಡಿಗೆ ಮಾಲೀಕರ ಶವ ಸೂಟ್ಕೇಸ್ನಲ್ಲಿ ಪತ್ತೆಯಾಗಿತ್ತು, ಬಾಡಿಗೆ ಕೇಳಿದ್ದಕ್ಕೆ ಅವರನ್ನು ಹತ್ಯೆ ಮಾಡಲಾಗಿತ್ತು. ಅವರು ಬಹಳ ಹೊತ್ತು ಮನೆಗೆ ಹಿಂದಿರುಗದ ಕಾರಣ ಆತಂಕ ಹೆಚ್ಚಾಗಿತ್ತು. ಕೆಲಸದವಳು ಮನೆ ಮಾಲೀಕರ ಶವವನ್ನು ಪತ್ತೆ ಹಚ್ಚಿದ್ದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
