ಬಸ್ ಪಲ್ಟಿಯಾಗಿ 5 ಮಂದಿ ಮೃತಪಟ್ಟು, 15 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಜಲೌನ್ ಜಿಲ್ಲೆಯಲ್ಲಿ ನಡೆದಿದೆ. ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಬಸ್‌ನಲ್ಲಿ 40 ಜನರಿದ್ದರು, ಲೌನ್ ಜಿಲ್ಲೆಯಲ್ಲಿ ಮದುವೆಗೆ ಅತಿಥಿಗಳನ್ನು ಸಾಗಿಸುತ್ತಿದ್ದ ಬಸ್ ಅಪರಿಚಿತ ವಾಹನಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಐದು ಜನರು ಸಾವನ್ನಪ್ಪಿದ್ದಾರೆ ಮತ್ತು 15 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ. ಏತನ್ಮಧ್ಯೆ, ಶನಿವಾರ ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಬಸ್ ಪಲ್ಟಿಯಾದ ಪರಿಣಾಮ ನಾಲ್ವರು ಗಾಯಗೊಂಡಿದ್ದಾರೆ. ಬಸ್ಸು ಬಿಹಾರದಿಂದ ದೆಹಲಿಗೆ ಸುಮಾರು 40 ಜನರೊಂದಿಗೆ ಪ್ರಯಾಣಿಸುತ್ತಿತ್ತು ಎಂದು ಸ್ಥಳೀಯ ಆಡಳಿತ ತಿಳಿಸಿದೆ.
ಮತ್ತಷ್ಟು ಓದಿ: ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ಬಸ್ ಪಲ್ಟಿ; ಮಹಿಳೆ ಸಾವು, ಎಂಟು ಮಂದಿಗೆ ಗಂಭೀರ ಗಾಯ
ಬಿಹಾರದಿಂದ ಯಮುನಾ ಎಕ್ಸ್‌ಪ್ರೆಸ್‌ವೇ ಮೂಲಕ ದೆಹಲಿಗೆ ಹೋಗುತ್ತಿದ್ದ ಬಸ್, ಆಗ್ರಾ ಬಳಿ ಹಠಾತ್ ಪಲ್ಟಿಯಾಗಿದೆ. ಬಸ್‌ನಲ್ಲಿ 38 ಪ್ರಯಾಣಿಕರಿದ್ದರು. ಖಂಡೌಲಿ ಪೊಲೀಸ್ ಠಾಣೆ ಮತ್ತು ಆಗ್ರಾದ ಎತ್ಮಾದ್‌ಪುರ ಗಡಿಯಲ್ಲಿ ಘಟನೆ ನಡೆದಿದೆ. ನಾಲ್ವರು ಗಾಯಗೊಂಡಿದ್ದಾರೆ ಎಂದು ನಾಯಬ್ ತಹಸೀಲ್ದಾರ್ ಹೇಳಿದ್ದಾರೆ. ಗಾಯಾಳುಗಳನ್ನು ತಕ್ಷಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿತ್ತು ಎಂದು ಅಧಿಕಾರಿ ತಿಳಿಸಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ