ಪರೀಕ್ಷೆ ವೇಳೆ ಸ್ಯಾನಿಟರಿ ಪ್ಯಾಡ್ ಕೇಳಿದ್ದಕ್ಕೆ ವಿದ್ಯಾರ್ಥಿನಿಯನ್ನು ತರಗತಿಯಿಂದ ಹೊರಗೆ ನಿಲ್ಲಿಸಿದ ಪ್ರಾಂಶುಪಾಲರು

ಪರೀಕ್ಷೆ ವೇಳೆ ಸ್ಯಾನಿಟರಿ ಪ್ಯಾಡ್ ಕೇಳಿದ್ದಕ್ಕೆ ಪ್ರಾಂಶುಪಾಲರು ಆಕೆಯನ್ನು ತರಗತಿಯಿಂದ ಗಂಟೆಗಟ್ಟಲೆ ಹೊರಗೆ ನಿಲ್ಲಿಸಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಪ್ರಥಮ ವರ್ಷದ ಪಿಯು ವಿದ್ಯಾರ್ಥಿನಿ ಅಂದು ಪರೀಕ್ಷಾ ಕೊಠಡಿಯಲ್ಲಿ ಕುಳಿತಿದ್ದಳು, ಆಗ ಮುಟ್ಟು ಕಾಣಿಸಿಕೊಂಡಿತ್ತು, ಕೂಡಲೇ ಶಿಕ್ಷಕರ ಬಳಿ ಸ್ಯಾನಿಟರ್ ಪ್ಯಾಡ್ ತಂದುಕೊಡುವಂತೆ ಕೇಳಿಕೊಂಡಿದ್ದಳು.

ಪರೀಕ್ಷೆ ವೇಳೆ ಸ್ಯಾನಿಟರಿ ಪ್ಯಾಡ್ ಕೇಳಿದ್ದಕ್ಕೆ ವಿದ್ಯಾರ್ಥಿನಿಯನ್ನು ತರಗತಿಯಿಂದ ಹೊರಗೆ ನಿಲ್ಲಿಸಿದ ಪ್ರಾಂಶುಪಾಲರು
ಪ್ಯಾಡ್ಸ್​
Image Credit source: Nua

Updated on: Jan 27, 2025 | 8:04 AM

ಪರೀಕ್ಷೆ ವೇಳೆ ವಿದ್ಯಾರ್ಥಿನಿಗೆ ಮುಟ್ಟಿನ ನೋವು ಏಕಾಏಕಿ ಶುರುವಾಗಿತ್ತು,ಪ್ರಾಂಶುಪಾಲರ ಬಳಿ ಸ್ಯಾನಿಟರಿ ಪ್ಯಾಡ್ ಕೇಳಿದ್ದಕ್ಕೆ ಆಕೆಯನ್ನು ಗಂಟೆಗಳ ಕಾಲ ಕೊಠಡಿಯಿಂದ ಹೊರಗೆ ನಿಲ್ಲಿಸಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಬರೇಲಿಯಲ್ಲಿ ಈ ಘಟನೆ ನಡೆದಿದೆ.

ಪ್ರಥಮ ವರ್ಷದ ಪಿಯು ವಿದ್ಯಾರ್ಥಿನಿ ಅಂದು ಪರೀಕ್ಷಾ ಕೊಠಡಿಯಲ್ಲಿ ಕುಳಿತಿದ್ದಳು, ಆಗ ಮುಟ್ಟು ಕಾಣಿಸಿಕೊಂಡಿತ್ತು, ಕೂಡಲೇ ಶಿಕ್ಷಕರ ಬಳಿ ಸ್ಯಾನಿಟರ್ ಪ್ಯಾಡ್ ತಂದುಕೊಡುವಂತೆ ಕೇಳಿಕೊಂಡಿದ್ದಳು, ಅದಕ್ಕೆ ಕೋಪಗೊಂಡ ಪ್ರಾಂಶುಪಾಲರು ಆಕೆಯನ್ನು ತರಗತಿಯಿಂದ ಹೊರಗಿಟ್ಟಿದ್ದಾರೆ.

ಈ ಘಟನೆಯಿಂದ ಆಕೆ ಮಾನಸಿಕವಾಗಿ ಹಾಗೂ ದೈಹಿಕವಾಗಿ ನೊಂದಿದ್ದಾಳೆ ಎಂದು ಪೋಷಕರು ತಿಳಿಸಿದ್ದಾರೆ. ಈ ಸಂಬಂಧ ತಂದೆ ಜಿಲ್ಲಾಧಿಕಾರಿ, ಜಿಲ್ಲಾ ಶಾಲಾ ನಿರೀಕ್ಷಕ (ಡಿಐಒಎಸ್), ರಾಜ್ಯ ಮಹಿಳಾ ಆಯೋಗ ಹಾಗೂ ಮಹಿಳಾ ಕಲ್ಯಾಣ ಇಲಾಖೆಗೆ ಲಿಖಿತ ದೂರು ನೀಡಿದ್ದಾರೆ.

ಮತ್ತಷ್ಟು ಓದಿ:Period Hygiene : ಮುಟ್ಟಿನ ಅವಧಿಯಲ್ಲಿ ಎಷ್ಟು ಗಂಟೆಗಳಿಗೊಮ್ಮೆ ಸ್ಯಾನಿಟರಿ ಪ್ಯಾಡ್ ಬದಲಾಯಿಸಬೇಕು?

ತಂದೆಯ ದೂರಿನ ನಂತರ, ತನಿಖೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಶಾಲಾ ಇನ್ಸ್‌ಪೆಕ್ಟರ್ ದೇವಕಿ ನಂದನ್ ತಿಳಿಸಿದ್ದಾರೆ. ತನಿಖೆಯ ಫಲಿತಾಂಶದ ಆಧಾರದ ಮೇಲೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು. ಈ ಘಟನೆಯನ್ನು ಹಲವು ಸಾಮಾಜಿಕ ಕಾರ್ಯಕರ್ತರು ಹಾಗೂ ಸಂಘಟನೆಗಳು ಖಂಡಿಸಿದ್ದು, ಶಾಲಾ ಆಡಳಿತ ಮಂಡಳಿ ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ. ಮಹಿಳಾ ಕಲ್ಯಾಣ ಇಲಾಖೆ ಹಾಗೂ ರಾಜ್ಯ ಮಹಿಳಾ ಆಯೋಗ ಕೂಡ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದು, ಮಹಿಳಾ ಹಕ್ಕುಗಳ ಉಲ್ಲಂಘನೆ ಪ್ರಕರಣ ಎಂದು ಹೇಳಲಾಗಿದೆ.

ಕಳೆದ ವರ್ಷ, ಬೋರ್ಡ್ ಪರೀಕ್ಷೆಗಳಿಗೆ ಮುಂಚಿತವಾಗಿ, ಕೇಂದ್ರ ಶಿಕ್ಷಣ ಸಚಿವಾಲಯವು ಸಲಹೆಯನ್ನು ನೀಡಿತು ಮತ್ತು 10 ಮತ್ತು 12 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಸಮಯದಲ್ಲಿ ವಿದ್ಯಾರ್ಥಿನಿಯರಿಗೆ ಅಗತ್ಯ ವಿಶ್ರಾಂತಿ ಕೊಠಡಿಗಳನ್ನು ತೆಗೆದುಕೊಳ್ಳಲು ಅವಕಾಶ ನೀಡಬೇಕು ಮತ್ತು ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಉಚಿತ ಸ್ಯಾನಿಟರಿ ನ್ಯಾಪ್ಕಿನ್ಗಳನ್ನು ಲಭ್ಯವಾಗುವಂತೆ ಮಾಡಬೇಕು.

ಈ ಸಲಹೆಯು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಾದ್ಯಂತ ಎಲ್ಲಾ ಶಾಲೆಗಳು, ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE), ಕೇಂದ್ರೀಯ ವಿದ್ಯಾಲಯ ಸಂಘಟನೆ (KVS), ಮತ್ತು ನವೋದಯ ವಿದ್ಯಾಲಯ ಸಮಿತಿ (NVS) ಗೆ ಅನ್ವಯಿಸುತ್ತದೆ.

ಉಚಿತ ಸ್ಯಾನಿಟರಿ ಪ್ಯಾಡ್‌ಗಳು ಎಲ್ಲಾ 10 ಮತ್ತು 12 ಬೋರ್ಡ್ ಪರೀಕ್ಷಾ ಕೇಂದ್ರಗಳಲ್ಲಿ ಸುಲಭವಾಗಿ ಲಭ್ಯವಿರುತ್ತವೆ, ಅಗತ್ಯವಿದ್ದಲ್ಲಿ ಪರೀಕ್ಷೆಯ ಸಮಯದಲ್ಲಿ ಹೆಣ್ಣುಮಕ್ಕಳಿಗೆ ನೀಡಬೇಕಾಗುತ್ತದೆ. ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಸಿಬ್ಬಂದಿಗಳಲ್ಲಿ ಮುಟ್ಟಿನ ಆರೋಗ್ಯ ಮತ್ತು ನೈರ್ಮಲ್ಯದ ಬಗ್ಗೆ ಅರಿವು ಮೂಡಿಸಲು ಶೈಕ್ಷಣಿಕ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗುವುದು ಎಂದು ಸಚಿವಾಲಯ ತಿಳಿಸಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ