ಮುಸ್ಲಿಂ ಮಹಿಳೆಯರು ಬ್ಯೂಟಿ ಪಾರ್ಲರ್​ಗೆ ಹೋಗ್ಬಾರ್ದು: ಇಸ್ಲಾಂ ಧರ್ಮಗುರು ಹೇಳಿಕೆ

ಮುಸ್ಲಿಂ ಮಹಿಳೆಯರು ಬ್ಯೂಟಿ ಪಾರ್ಲರ್​ಗೆ ಹೋಗಬಾರದು ಎಂದು ಉತ್ತರ ಪ್ರದೇಶದ ಧರ್ಮಗುರುವೊಬ್ಬರು ಹೇಳಿಕೆ ನೀಡಿದ್ದು, ಚರ್ಚೆಗೆ ಗ್ರಾಸವಾಗಿದೆ. ಶುಕ್ರವಾರ ಉತ್ತರ ಪ್ರದೇಶದ ಸಹರಾನ್‌ಪುರ ಜಿಲ್ಲೆಯಲ್ಲಿ ಮುಸ್ಲಿಂ ಧರ್ಮಗುರುವೊಬ್ಬರು ಪುರುಷರು ಉದ್ಯೋಗದಲ್ಲಿರುವ ಬ್ಯೂಟಿ ಪಾರ್ಲರ್‌ಗಳಿಗೆ ಮುಸ್ಲಿಂ ಮಹಿಳೆಯರು ಹೋಗುವುದನ್ನು ತಪ್ಪಿಸಬೇಕು ಎಂದು ಹೇಳಿದ್ದಾರೆ.

ಮುಸ್ಲಿಂ ಮಹಿಳೆಯರು ಬ್ಯೂಟಿ ಪಾರ್ಲರ್​ಗೆ ಹೋಗ್ಬಾರ್ದು: ಇಸ್ಲಾಂ ಧರ್ಮಗುರು ಹೇಳಿಕೆ
ಧರ್ಮಗುರು
Image Credit source: India Today

Updated on: Nov 17, 2023 | 2:11 PM

ಮುಸ್ಲಿಂ ಮಹಿಳೆಯರು ಬ್ಯೂಟಿ ಪಾರ್ಲರ್​ಗೆ ಹೋಗಬಾರದು ಎಂದು ಉತ್ತರ ಪ್ರದೇಶದ ಧರ್ಮಗುರುವೊಬ್ಬರು ಹೇಳಿಕೆ ನೀಡಿದ್ದು, ಚರ್ಚೆಗೆ ಗ್ರಾಸವಾಗಿದೆ. ಶುಕ್ರವಾರ ಉತ್ತರ ಪ್ರದೇಶದ ಸಹರಾನ್‌ಪುರ ಜಿಲ್ಲೆಯಲ್ಲಿ ಮುಸ್ಲಿಂ ಧರ್ಮಗುರುವೊಬ್ಬರು ಪುರುಷರು ಉದ್ಯೋಗದಲ್ಲಿರುವ ಬ್ಯೂಟಿ ಪಾರ್ಲರ್‌ಗಳಿಗೆ ಮುಸ್ಲಿಂ ಮಹಿಳೆಯರು ಹೋಗುವುದನ್ನು ತಪ್ಪಿಸಬೇಕು ಎಂದು ಹೇಳಿದ್ದಾರೆ.

ಅಂತಹ ಪಾರ್ಲರ್‌ಗಳಲ್ಲಿ ಮಹಿಳೆಯರು ತಮ್ಮ ಮೇಕಪ್ ಮಾಡಿಕೊಳ್ಳುವುದನ್ನು ನಿಷಿದ್ಧ ಮತ್ತು ಕಾನೂನುಬಾಹಿರ ಎಂದು ಅವರು ಕರೆದಿದ್ದಾರೆ.
ಮುಫ್ತಿ ಅಸದ್ ಕಾಸ್ಮಿ ಅವರು ಈ ಹೇಳಿಕೆಗಳನ್ನು ನೀಡಿದ್ದು, ಮುಸ್ಲಿಂ ಮಹಿಳೆಯರು ಪುರುಷರು ಉದ್ಯೋಗದಲ್ಲಿರುವ ಬ್ಯೂಟಿ ಪಾರ್ಲರ್‌ಗಳಿಗೆ ಭೇಟಿ ನೀಡುವುದನ್ನು ತಡೆಯಿರಿ, ಬದಲಿಗೆ ಮಹಿಳೆಯರು ಮಾತ್ರ ಕೆಲಸ ಮಾಡುವ ಸಲೂನ್‌ಗಳನ್ನು ಆರಿಸಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ.

ಕಳೆದ ತಿಂಗಳು, ಕಾನ್ಪುರದ ಮಹಿಳೆಯೊಬ್ಬರು ಐಬ್ರೋ ಮಾಡಿಸಿದ್ದ ವಿಷಯ ತಿಳಿದ ಪತಿ ಸೌದಿಯಿಂದಲೇ ಫೋನ್ ಮೂಲಕ ತನ್ನ ಪತಿ ತ್ರಿವಳಿ ತಲಾಖ್ ನೀಡಿದ್ದರು.

ಮತ್ತಷ್ಟು ಓದಿ: UNO: ಅಫ್ಘಾನ್ ಮಹಿಳೆಯರ ಮೇಲೆ ನಿರ್ಬಂಧ ಇರುವವರೆಗೂ ತಾಲಿಬಾನ್ ಸರ್ಕಾರವನ್ನು ಅಂತರರಾಷ್ಟ್ರೀಯ ಸಮುದಾಯ ಎಂದು ಗುರುತಿಸಲು ಸಾಧ್ಯವಿಲ್ಲ: ವಿಶ್ವಸಂಸ್ಥೆ

ಆಕೆಯ ಪತಿ ವೀಡಿಯೊ ಕರೆಯನ್ನು ಮಾಡಿದಾಗ, ಹುಬ್ಬುಗಳು ಹೊಸ ಆಕಾರದಲ್ಲಿದ್ದುದನ್ನು ಗಮನಿಸಿದ್ದಾರೆ, ಈ ಕುರಿತು ಪತ್ನಿಯನ್ನು ಪ್ರಶ್ನೆ ಮಾಡಿದ್ದರು. ದಟ್ಟವಾದ ಹುಬ್ಬುಗಳಿಂದಾಗಿ ತಾನು ಚೆನ್ನಾಗಿ ಕಾಣುತ್ತಿಲ್ಲ ಎಂದು ಭಾವಿಸಿ ಐಬ್ರೋ ಮಾಡಿಸಿದ್ದಾಳೆ ಎಂಬುದನ್ನು ತಿಳಿದು ಪತಿ ಕೋಪಗೊಂಡಿದ್ದರು, ವಿಡಿಯೋ ಕರೆಯಲ್ಲಿಯೇ ಮೂರು ಬಾರಿ ತಲಾಖೆ ಎಂದು ಹೇಳಿದ್ದಾಗ ಮಹಿಳೆ ದೂರಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Loading...
Unable to load recommendations.
Follow Us