AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶದ ಹೆಣ್ಮಕ್ಕಳಿಗೆ ‘ಮುಖ್ಯಮಂತ್ರಿ ಕನ್ಯಾ ಸುಮಂಗಲಾ ಯೋಜನೆ’ ಮೂಲಕ ಭರ್ಜರಿ ಗಿಫ್ಟ್ ನೀಡಿದ ಸಿಎಂ ಯೋಗಿ ಆದಿತ್ಯನಾಥ್

ರಾಜ್ಯದಲ್ಲಿ ಇಂದು ಮುಖ್ಯಮಂತ್ರಿ ಕನ್ಯಾ ಸುಮಂಗಲಾ ಯೋಜನೆ ಮೂಲಕ 1624000 ಸಾವಿರ ಹೆಣ್ಣು ಮಕ್ಕಳಿಗೆ ಪ್ರಯೋಜನ ಸಿಗುತ್ತಿದೆ ಎಂದು ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಬೇಟಿ ಬಚಾವೋ, ಬೇಟಿ ಪಢಾವೋ ಕಾರ್ಯಕ್ರಮವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವಲ್ಲಿ ಇಂದು ಅತ್ಯಂತ ಮಹತ್ವದ ದಿನವಾಗಿದೆ ಎಂದು ಅವರು ಹೇಳಿದ್ದಾರೆ.

ಉತ್ತರ ಪ್ರದೇಶದ ಹೆಣ್ಮಕ್ಕಳಿಗೆ 'ಮುಖ್ಯಮಂತ್ರಿ ಕನ್ಯಾ ಸುಮಂಗಲಾ ಯೋಜನೆ' ಮೂಲಕ ಭರ್ಜರಿ ಗಿಫ್ಟ್ ನೀಡಿದ ಸಿಎಂ ಯೋಗಿ ಆದಿತ್ಯನಾಥ್
ಯೋಗಿ ಆದಿತ್ಯನಾಥ್
ರಶ್ಮಿ ಕಲ್ಲಕಟ್ಟ
|

Updated on:Aug 30, 2023 | 6:09 PM

Share

ಅಲಹಾಬಾದ್ ಆಗಸ್ಟ್ 30: ರಕ್ಷಾ ಬಂಧನದ ಸಂದರ್ಭದಲ್ಲಿ ಉತ್ತರ ಪ್ರದೇಶದ (Uttar Pradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ರಾಜ್ಯದ ಹೆಣ್ಣು ಮಕ್ಕಳಿಗೆ ಭರ್ಜರಿ ಗಿಫ್ಟ್ ನೀಡಿದ್ದಾರೆ. ‘ಮುಖ್ಯಮಂತ್ರಿ ಕನ್ಯಾ ಸುಮಂಗಲಾ’ (CM Kanya Sumangala Yojana) ಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಯೋಗಿ ಈ ಯೋಜನೆಯ ಹಣವನ್ನು ಹೆಚ್ಚಿಸುವುದಾಗಿ ಘೋಷಿಸಿದ್ದಾರೆ. ಕನ್ಯಾ ಸುಮಂಗಲಾ ಯೋಜನೆಯ ಮೊತ್ತವನ್ನು 15 ಸಾವಿರದಿಂದ 25 ಸಾವಿರಕ್ಕೆ ಹೆಚ್ಚಿಸುವ ಯೋಜನೆ ಇದೆ.

ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಯೋಗಿ ಆದಿತ್ಯನಾಥ್, ಈ ಯೋಜನೆಯಡಿ ಈ ಹಿಂದೆ ಆರು ಹಂತಗಳಲ್ಲಿ 15 ಸಾವಿರ ರೂ.ಗಳ ಪ್ಯಾಕೇಜ್ ನೀಡಲಾಗುತ್ತಿದ್ದು, ಮುಂದಿನ ವರ್ಷದಿಂದ ಮಗಳು ಹುಟ್ಟಿದ ತಕ್ಷಣ ಆಕೆಯ ಪೋಷಕರ ಖಾತೆಗೆ 5 ಸಾವಿರ ರೂ.ಗಳನ್ನು ವರ್ಗಾಯಿಸಲಾಗುವುದು. ಮಗಳಿಗೆ ಒಂದು ವರ್ಷವಾದಾಗ ಎರಡು ಸಾವಿರ ರೂ, ಮಗಳು ಒಂದನೇ ತರಗತಿಗೆ ದಾಖಲಾದಾಗ ಮೂರು ಸಾವಿರ, ಮಗಳು ಆರನೇ ತರಗತಿಗೆ ಪ್ರವೇಶ ಪಡೆದರೆ ಮೂರು ಸಾವಿರ, ಮಗಳು ಒಂಬತ್ತನೇ ತರಗತಿಗೆ ಹೋದರೆ ಐದು ಸಾವಿರ ರೂ. ಮತ್ತು ಮಗಳು ಯಾವುದೇ ಪದವಿ ಅಥವಾ ಡಿಪ್ಲೊಮಾ ಅಥವಾ ಸರ್ಟಿಫಿಕೇಟ್ ಕೋರ್ಸ್ ಮಾಡಿದರೆ ಏಳು ಸಾವಿರ ರೂಪಾಯಿಗಳನ್ನು ಖಾತೆಗೆ ವರ್ಗಾಯಿಸಲಾಗುತ್ತದೆ ಎಂದಿದ್ದಾರೆ.

ರಾಜ್ಯದಲ್ಲಿ ಇಂದು ಮುಖ್ಯಮಂತ್ರಿ ಕನ್ಯಾ ಸುಮಂಗಲಾ ಯೋಜನೆ ಮೂಲಕ 1624000 ಸಾವಿರ ಹೆಣ್ಣು ಮಕ್ಕಳಿಗೆ ಪ್ರಯೋಜನ ಸಿಗುತ್ತಿದೆ ಎಂದು ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಬೇಟಿ ಬಚಾವೋ, ಬೇಟಿ ಪಢಾವೋ ಕಾರ್ಯಕ್ರಮವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವಲ್ಲಿ ಇಂದು ಅತ್ಯಂತ ಮಹತ್ವದ ದಿನವಾಗಿದೆ ಎಂದು ಅವರು ಹೇಳಿದ್ದಾರೆ.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕನ್ಯಾ ಸುಮಂಗಲಾ ಯೋಜನೆಯ ಫಲಾನುಭವಿಗಳಾದ ಕೆಲ ಬಾಲಕಿಯರು ಸಿಎಂ ಯೋಗಿ ಅವರ ಹಣೆಗೆ ತಿಲಕವಿಟ್ಟು, ಕೈಗೆ ರಾಖಿ ಕಟ್ಟಿದರು. ಸಿಎಂ ಯೋಗಿ ಅವರಿಗೆ ಉಡುಗೊರೆ ನೀಡಿ ರಕ್ಷಣೆ ನೀಡುವುದಾಗಿ ಭರವಸೆ ನೀಡಿದರು. ಕಾರ್ಯಕ್ರಮದಲ್ಲಿ ಸಿಎಂ ಯೋಗಿ ಒಂದೇ ಕ್ಲಿಕ್ ಮೂಲಕ 29523 ಫಲಾನುಭವಿ ಹೆಣ್ಣು ಮಕ್ಕಳ ಖಾತೆಗೆ 5.82 ಕೋಟಿ ರೂ. ವರ್ಗಾವಣೆ ಮಾಡಿದ್ದಾರೆ.

ಯೋಜನೆಯ ಫಲಾನುಭವಿ ರತ್ನಾ ಮಿಶ್ರಾ ಮಾತನಾಡಿ, ಈ ಯೋಜನೆಯಿಂದಾಗಿ ಶಿಕ್ಷಣ  ಸಾಧ್ಯವಾಗಿದೆ. ಇದು ಆತ್ಮವಿಶ್ವಾಸವನ್ನು ಹೆಚ್ಚಿಸಿದೆ. ಈಗ ರಾಜ್ಯದ ಹೆಣ್ಣುಮಕ್ಕಳಿಗೆ ಬೆಂಬಲವಾಗಿ ನಿಂತಿರುವ ಸಿಎಂ ಯೋಗಿ ಇರುವುದರಿಂದ ನಮ್ಮ ಕನಸು ನನಸಾಗಲು ಸಾಧ್ಯವಾಗುತ್ತಿದೆ ಎಂದರು.

ಇದನ್ನೂ ಓದಿ: ಸನ್ಯಾಸಿಗಳು ಯಾವಾಗ ಮುಖ್ಯಮಂತ್ರಿಯಾಗ್ತಾರೋ ನಮಗ್ಯಾರಿಗೂ ಗೊತ್ತಿಲ್ಲ: ಪರೋಕ್ಷವಾಗಿ ಯೋಗಿ ವಿರುದ್ಧ ವಾಗ್ದಾಳಿ ನಡೆಸಿದ್ರಾ ವರುಣ್ ಗಾಂಧಿ

ಯೋಜನೆ ತನ್ನಂತಹ ಬಡ ಹೆಣ್ಣುಮಕ್ಕಳ ಜೀವನದಲ್ಲಿ ದೊಡ್ಡ ಬದಲಾವಣೆ ತಂದಿದೆ. ಈ ಮೂಲಕ ತಾನು ಓದಲು ಮತ್ತು ಇತರ ಮಕ್ಕಳೊಂದಿಗೆ ಹೆಜ್ಜೆ ಹಾಕಲು ಸಾಧ್ಯವಾಗಿದೆ. ಇದಕ್ಕಾಗಿ ಸಿಎಂ ಯೋಗಿ ಅವರಿಗೆ ಧನ್ಯವಾದಗಳು ಎಂದು 10ನೇ ತರಗತಿ ವಿದ್ಯಾರ್ಥಿನಿ ಅಕ್ಷರಾ ಕುಶ್ವಾಹ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:08 pm, Wed, 30 August 23

ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ