ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್​​ಗೆ ಜೀವ ಬೆದರಿಕೆ; ಬಾಂಬ್ ಹಾಕುವುದಾಗಿ ವಾಟ್ಸಾಪ್ ಸಂದೇಶ

| Updated By: ಸುಷ್ಮಾ ಚಕ್ರೆ

Updated on: Aug 09, 2022 | 9:34 AM

ಇನ್ನು ಮೂರು ದಿನಗಳೊಳಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಬಾಂಬ್ ಹಾಕುವುದಾಗಿ ಆಗಸ್ಟ್ 2ರಂದು ಪೊಲೀಸ್ ನಿಯಂತ್ರಣ ಕೊಠಡಿಯ ಸಹಾಯವಾಣಿಗೆ ವಾಟ್ಸಾಪ್ ಸಂದೇಶದ ಮೂಲಕ ಬೆದರಿಕೆ ಹಾಕಲಾಗಿತ್ತು.

ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್​​ಗೆ ಜೀವ ಬೆದರಿಕೆ; ಬಾಂಬ್ ಹಾಕುವುದಾಗಿ ವಾಟ್ಸಾಪ್ ಸಂದೇಶ
ಯೋಗಿ ಆದಿತ್ಯನಾಥ್
Follow us on

ನವದೆಹಲಿ: ಉತ್ತರ ಪ್ರದೇಶದ (Uttar Pradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಅವರಿಗೆ ಬಾಂಬ್ ಬೆದರಿಕೆ ಬಂದಿದೆ. ಅಪರಿಚಿತರು ಆಗಸ್ಟ್ 2ರಂದು ಪೊಲೀಸ್ ನಿಯಂತ್ರಣ ಕೊಠಡಿಯ ವಾಟ್ಸಾಪ್ ಸಹಾಯವಾಣಿಗೆ (WhatsApp Helpline) ಜೀವ ಬೆದರಿಕೆ ಇರುವ ಸಂದೇಶವನ್ನು ಕಳುಹಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಜೀವ ಬೆದರಿಕೆ ಬಂದಿರುವುದರಿಂದ ಅವರ ನಿವಾಸ, ಕಚೇರಿಯ ಸುತ್ತಮುತ್ತ ಕಟ್ಟೆಚ್ಚರ ವಹಿಸಲಾಗಿದೆ.

ಇನ್ನು ಮೂರು ದಿನಗಳೊಳಗೆ ಮುಖ್ಯಮಂತ್ರಿಗೆ ಬಾಂಬ್ ಹಾಕುವುದಾಗಿ ಆಗಸ್ಟ್ 2ರಂದು ಪೊಲೀಸ್ ನಿಯಂತ್ರಣ ಕೊಠಡಿಯ ಸಹಾಯವಾಣಿಗೆ ವಾಟ್ಸಾಪ್ ಸಂದೇಶದ ಮೂಲಕ ಬೆದರಿಕೆ ಹಾಕಲಾಗಿತ್ತು. ಸಹಾಯವಾಣಿಯ ಕಾರ್ಯ ನಿರ್ವಾಹಕರು ಈ ವಿಷಯವನ್ನು ಪೊಲೀಸರಿಗೆ ತಿಳಿಸಿದ್ದಾರೆ. ಸಂದೇಶ ಕಳುಹಿಸುವವರನ್ನು ಪತ್ತೆಹಚ್ಚಲು ಮತ್ತು ಬಂಧಿಸಲು ಹುಡುಕಾಟ ನಡೆಸಲಾಗುತ್ತಿದೆ. ಸುಶಾಂತ್ ಗಾಲ್ಫ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬಿಜೆಪಿ ನಾಯಕ ಯಶ್ಪಾಲ್ ಸುವರ್ಣ ಮತ್ತು ಪ್ರಮೋದ್ ಮುತಾಲಿಕ್​​ ಅವರಿಗೆ ಜೀವ ಬೆದರಿಕೆ; ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ವೈರಲ್​​

ಯಾರು, ಯಾವ ಕಾರಣಕ್ಕಾಗಿ ಈ ಸಂದೇಶ ಕಳುಹಿಸಿದ್ದಾರೆ ಎಂಬುದು ಇನ್ನೂ ಪತ್ತೆಯಾಗಿಲ್ಲ. ಈ ಘಟನೆಯಿಂದ ಪೊಲೀಸರು ಹೈ ಅಲರ್ಟ್​ ಆಗಿದ್ದಾರೆ. ವಾಟ್ಸಾಪ್ ಸಂದೇಶ ಬಂದ ಕೂಡಲೇ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಹೆಚ್ಚಿನ ತನಿಖೆಗಳು ನಡೆಯುತ್ತಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ