AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಡ ಮಕ್ಕಳ ಶಿಕ್ಷಣಕ್ಕಾಗಿ ಉತ್ತಮ ಸೌಲಭ್ಯಗಳಿರುವ ಅಟಲ್ ವಸತಿ ಶಾಲೆ; ಯೋಗಿ ಆದಿತ್ಯನಾಥ್ ಸರ್ಕಾರದ ಮಹತ್ತರ ಯೋಜನೆ

ಅಟಲ್ ವಸತಿ ಶಾಲೆಗಳಿಗೆ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ನೇಮಕ ಪ್ರಕ್ರಿಯೆಯೂ ಬಹುತೇಕ ಪೂರ್ಣಗೊಂಡಿದೆ. ಇವುಗಳಲ್ಲಿ ಏಪ್ರಿಲ್ 5ಕ್ಕೆ ಪ್ರಾಂಶುಪಾಲರ ನೇಮಕಾತಿ ಪೂರ್ಣಗೊಂಡಿದ್ದು, ಜೂನ್ 22ಕ್ಕೆ ಆಡಳಿತಾಧಿಕಾರಿಗಳ ನೇಮಕ ಪ್ರಕ್ರಿಯೆ ಪೂರ್ಣಗೊಂಡಿದೆ.

ಬಡ ಮಕ್ಕಳ ಶಿಕ್ಷಣಕ್ಕಾಗಿ ಉತ್ತಮ ಸೌಲಭ್ಯಗಳಿರುವ ಅಟಲ್ ವಸತಿ ಶಾಲೆ; ಯೋಗಿ ಆದಿತ್ಯನಾಥ್ ಸರ್ಕಾರದ ಮಹತ್ತರ ಯೋಜನೆ
ಯೋಗಿ ಆದಿತ್ಯನಾಥ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Aug 02, 2023 | 6:24 PM

Share

ಲಕ್ನೋ ಆಗಸ್ಟ್ 2: ಉತ್ತರ ಪ್ರದೇಶ ಸರ್ಕಾರ(Uttar Pradesh) ಬಡವರು, ಅನಾಥರು ಮತ್ತು ಕಾರ್ಮಿಕರ ಭರವಸೆಯ ಮಕ್ಕಳಿಗೆ ಉತ್ತಮ ಸೌಲಭ್ಯಗಳೊಂದಿಗೆ ವಸತಿ ಶಾಲೆಗಳಲ್ಲಿ ಕಲಿಸುವ ಸಿದ್ಧತೆ ಮಾಡುತ್ತಿದೆ. ರಾಜ್ಯದ 18 ಜಿಲ್ಲೆಗಳಲ್ಲಿ ಅಟಲ್ ವಸತಿ ಶಾಲೆಗಳನ್ನು (Atal residential schools) ನಡೆಸಲು ಉದ್ದೇಶಿಸಿದ್ದು 16 ಜಿಲ್ಲೆಗಳಲ್ಲಿ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ.ಇವುಗಳಲ್ಲಿ ಆಗಸ್ಟ್ ತಿಂಗಳ ಕೊನೆವರೆಗೆ 6ನೇ ತರಗತಿ ನಡೆಸಲು ಸಿದ್ಧತೆ ನಡೆಸಲಾಗಿದೆ. ಉಳಿದ 2 ಶಾಲೆಗಳನ್ನು ಈ ವರ್ಷದ ಅಂತ್ಯದೊಳಗೆ ಕಾರ್ಯಗತಗೊಳಿಸಬಹುದು. 1189.88 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಈ 18 ವಸತಿ ಶಾಲೆಗಳಲ್ಲಿ ಎಲ್ಲ ಉನ್ನತ ಮಟ್ಟದ ಸೌಲಭ್ಯಗಳು ಲಭ್ಯವಾಗಲಿವೆ. ಈ ಶಾಲೆಗಳಲ್ಲಿ 6 ರಿಂದ 12 ನೇ ತರಗತಿಯವರಿಗೆ ಕಲಿಸಲಾಗುತ್ತದೆ.

ಅಟಲ್ ವಸತಿ ಶಾಲೆಗಳನ್ನು ಎಲ್ಲೆಲ್ಲಿ ನಿರ್ಮಿಸಲಾಗಿದೆ?

ಅಜಂಗಢ, ಬಸ್ತಿ, ಲಕ್ನೋ, ಅಯೋಧ್ಯೆ, ಬುಲಂದ್‌ಶಹರ್ (ಮೀರತ್), ಗೊಂಡಾ, ಗೋರಖ್‌ಪುರ, ಲಲಿತ್‌ಪುರ (ಝಾನ್ಸಿ), ಪ್ರಯಾಗ್‌ರಾಜ್, ಸೋನ್‌ಭದ್ರ (ಮಿರ್ಜಾಪುರ), ಮುಜಾಫರ್‌ನಗರ (ಸಹಾರನ್‌ಪುರ), ಬಂಡಾ, ಅಲಿಗಢ್, ಆಗ್ರಾ, ವಾರಣಾಸಿ, ಮೊರಾದ್‌ಬಾದ್‌ನಲ್ಲಿ ಅಟಲ್ ವಸತಿ ಶಾಲೆ ನಿರ್ಮಿಸಲಾಗುತ್ತದೆ

ನೇಮಕಾತಿ ಪ್ರಕ್ರಿಯೆ ಬಹುತೇಕ ಪೂರ್ಣ

ಅಟಲ್ ವಸತಿ ಶಾಲೆಗಳಿಗೆ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ನೇಮಕ ಪ್ರಕ್ರಿಯೆಯೂ ಬಹುತೇಕ ಪೂರ್ಣಗೊಂಡಿದೆ. ಇವುಗಳಲ್ಲಿ ಏಪ್ರಿಲ್ 5ಕ್ಕೆ ಪ್ರಾಂಶುಪಾಲರ ನೇಮಕಾತಿ ಪೂರ್ಣಗೊಂಡಿದ್ದು, ಜೂನ್ 22ಕ್ಕೆ ಆಡಳಿತಾಧಿಕಾರಿಗಳ ನೇಮಕ ಪ್ರಕ್ರಿಯೆ ಪೂರ್ಣಗೊಂಡಿದೆ. ಜೂನ್ 26ರಂದು ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿದೆ. ಇನ್ನೊಂದೆಡೆ ಬೋಧಕೇತರ ಸಿಬ್ಬಂದಿಯ ಸಂದರ್ಶನ ಪ್ರಕ್ರಿಯೆ ನಡೆಯುತ್ತಿದ್ದು, ಅಂತಿಮ ಹಂತದಲ್ಲಿದೆ. ಇದರೊಂದಿಗೆ, ಎಲ್ಲಾ ಶಾಲೆಗಳಿಗೆ ಪೀಠೋಪಕರಣಗಳು, ಮೆಸ್ ಸೇವೆ, ಅಧ್ಯಾಪಕರ ನಿರ್ವಹಣೆ, ಸಮವಸ್ತ್ರ ಮತ್ತು ಇತರ ಪರಿಕರಗಳ ಲಭ್ಯತೆಯನ್ನು ಸಹ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು. ಈ ಕಾಮಗಾರಿಯೂ ಅಂತಿಮ ಹಂತದಲ್ಲಿದೆ ಎಂದು ಟಿವಿ9 ಭಾರತ್ ವರ್ಷ್ ವರದಿ ಮಾಡಿದೆ.

ಇದನ್ನೂ ಓದಿ: ತಮಿಳುನಾಡು: ದಿ ಎಲಿಫೆಂಟ್ ವಿಸ್ಪರರ್ಸ್ ಖ್ಯಾತಿಯ ಬೆಳ್ಳಿ ಮೊದಲ ಮಹಿಳಾ ಕಾವಾಡಿ ಆಗಿ ನೇಮಕ

ಏನೆಲ್ಲ ಸೌಲಭ್ಯವಿದೆ?

ಈ ಶಾಲೆಗಳಿಗೆ ಉಚಿತ ಹಾಸ್ಟೆಲ್ ಸೌಲಭ್ಯವಿರುತ್ತದೆ. ಮಕ್ಕಳಿಗಾಗಿ ವಿಶಿಷ್ಟವಾದ ಶೈಕ್ಷಣಿಕ ಪಠ್ಯಕ್ರಮವನ್ನು ಸಹ ವಿನ್ಯಾಸಗೊಳಿಸಲಾಗಿದೆ. ಇದರೊಂದಿಗೆ ಕಂಪ್ಯೂಟರ್ ಲ್ಯಾಬ್, ಸೈನ್ಸ್ ಲ್ಯಾಬ್, ಗಣಿತ ಲ್ಯಾಬ್, ಸಮಾಜ ವಿಜ್ಞಾನ ಪ್ರಯೋಗಾಲಯ, ಅಟಲ್ ಥಿಂಕಿಂಗ್ ಲ್ಯಾಬ್, ಎಕ್ಸ್‌ಪರಿಮೆಂಟಲ್ ಲ್ಯಾಬ್ ಸೌಲಭ್ಯವೂ ಇಲ್ಲಿ ಇರಲಿದೆ. ಮಕ್ಕಳ ಪ್ರವೇಶ ಪ್ರಕ್ರಿಯೆ ಪೂರ್ಣಗೊಂಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!