AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹತ್ಯೆಗೀಡಾದ ಗ್ಯಾಂಗ್​​ಸ್ಟರ್ ಅತೀಕ್ ಅಹ್ಮದ್‌ನಿಂದ ವಶಪಡಿಸಿಕೊಂಡ ಜಮೀನಿನಲ್ಲಿ ನಿರ್ಮಿಸಲಾಗಿದ್ದ 76 ಫ್ಲ್ಯಾಟ್‌ಗಳನ್ನು ಹಸ್ತಾಂತರಿಸಿದ ಯೋಗಿ ಆದಿತ್ಯನಾಥ

2017 ರ ಮೊದಲು ಈ ರಾಜ್ಯದಲ್ಲಿ ಯಾವುದೇ ಮಾಫಿಯಾದವರು ಬಡವರು, ಉದ್ಯಮಿಗಳು ಅಥವಾ ಸರ್ಕಾರಿ ಸಂಸ್ಥೆಗಳ ಭೂಮಿಯನ್ನು ಕಸಿದುಕೊಳ್ಳುತ್ತಿದ್ದರು. ಆಗ ಬಡವರು ಅಸಹಾಯಕರಾಗಿ ನೋಡುತ್ತಿದ್ದರು. ಈಗ ಅದೇ ಮಾಫಿಯಾಗಳಿಂದ ವಶಪಡಿಸಿಕೊಂಡ ಭೂಮಿಯಲ್ಲಿಯೇ ಬಡವರಿಗೆ ಮನೆ ನಿರ್ಮಿಸಿಕೊಡುತ್ತಿರುವುದು ದೊಡ್ಡ ಸಾಧನೆಯಾಗಿದೆ ಎಂದ ಯೋಗಿ ಆದಿತ್ಯನಾಥ

ಹತ್ಯೆಗೀಡಾದ ಗ್ಯಾಂಗ್​​ಸ್ಟರ್ ಅತೀಕ್ ಅಹ್ಮದ್‌ನಿಂದ ವಶಪಡಿಸಿಕೊಂಡ ಜಮೀನಿನಲ್ಲಿ ನಿರ್ಮಿಸಲಾಗಿದ್ದ 76 ಫ್ಲ್ಯಾಟ್‌ಗಳನ್ನು ಹಸ್ತಾಂತರಿಸಿದ ಯೋಗಿ ಆದಿತ್ಯನಾಥ
ಫ್ಲಾಟ್ ಹಸ್ತಾಂತರಿಸಿದ ಯೋಗಿ ಆದಿತ್ಯನಾಥ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Jun 30, 2023 | 6:50 PM

Share

ದೆಹಲಿ: ಪ್ರಯಾಗ್‌ರಾಜ್‌ನಲ್ಲಿ ಹತ್ಯೆಗೀಡಾದ ಗ್ಯಾಂಗ್​​ಸ್ಟರ್ ಮತ್ತು ರಾಜಕಾರಣಿ ಅತೀಕ್ ಅಹ್ಮದ್‌ನಿಂದ (Atiq Ahmed) ವಶಪಡಿಸಿಕೊಂಡ ಭೂಮಿಯಲ್ಲಿ ಬಡವರಿಗಾಗಿ ನಿರ್ಮಿಸಲಾದ 76 ಫ್ಲ್ಯಾಟ್‌ಗಳ ಕೀಲಿಯನ್ನು ಉತ್ತರ ಪ್ರದೇಶದ (Uttar Pradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ (Yogi Adityanath) ಇಂದು (ಶುಕ್ರವಾರ) ಹಸ್ತಾಂತರಿಸಿದ್ದಾರೆ. ಪ್ರಧಾನ ಮಂತ್ರಿ ಆವಾಸ್ ಯೋಜನೆ (ನಗರ) ಅಡಿಯಲ್ಲಿ ಫ್ಲ್ಯಾಟ್‌ಗಳನ್ನು ನಿರ್ಮಿಸಲಾಗಿದ್ದು ಈ ತಿಂಗಳ ಆರಂಭದಲ್ಲಿ ಲಾಟರಿ ಮೂಲಕ ಹಂಚಿಕೆ ಮಾಡಲಾಗಿದೆ. ಮೊದಲು ಫ್ಲ್ಯಾಟ್‌ ಗಳನ್ನು ಪರಿಶೀಲಿಸಿದ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಕೇಶವ್ ಮೌರ್ಯ ನಂತರ ನಡೆದ ಸಮಾರಂಭದಲ್ಲಿ ಫಲಾನುಭವಿಗಳಿಗೆ ಹಂಚಿಕೆ ಪತ್ರ ವಿತರಿಸಿದರು.

ಅಧಿಕಾರಿಗಳ ಪ್ರಕಾರ, ಪ್ರತಿ ಫ್ಲ್ಯಾಟ್‌ 41 ಚದರ ಮೀಟರ್ ವಿಸ್ತೀರ್ಣವನ್ನು ಹೊಂದಿದೆ. ಇದು ಎರಡು ಕೋಣೆ, ಅಡುಗೆಮನೆ ಮತ್ತು ಶೌಚಾಲಯವನ್ನು ಹೊಂದಿದೆ. ಫ್ಲ್ಯಾಟ್‌ಗಳಿಗಾಗಿ 6,000 ಕ್ಕೂ ಹೆಚ್ಚು ಜನರು ಪ್ರಯಾಗ್‌ರಾಜ್ ಅಭಿವೃದ್ಧಿ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಿದ್ದರು. 1,590 ಜನರು ಲಾಟರಿ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅರ್ಹರಾಗಿದ್ದಾರೆ.

2017 ರ ಮೊದಲು ಈ ರಾಜ್ಯದಲ್ಲಿ ಯಾವುದೇ ಮಾಫಿಯಾದವರು ಬಡವರು, ಉದ್ಯಮಿಗಳು ಅಥವಾ ಸರ್ಕಾರಿ ಸಂಸ್ಥೆಗಳ ಭೂಮಿಯನ್ನು ಕಸಿದುಕೊಳ್ಳುತ್ತಿದ್ದರು. ಆಗ ಬಡವರು ಅಸಹಾಯಕರಾಗಿ ನೋಡುತ್ತಿದ್ದರು. ಈಗ ಅದೇ ಮಾಫಿಯಾಗಳಿಂದ ವಶಪಡಿಸಿಕೊಂಡ ಭೂಮಿಯಲ್ಲಿಯೇ ಬಡವರಿಗೆ ಮನೆ ನಿರ್ಮಿಸಿಕೊಡುತ್ತಿರುವುದು ದೊಡ್ಡ ಸಾಧನೆಯಾಗಿದೆ ಎಂದು ಸಮಾರಂಭದಲ್ಲಿ ಮುಖ್ಯಮಂತ್ರಿ ಹೇಳಿದರು.

ಇದನ್ನೂ ಓದಿ: ದಿ ಕೇರಳ ಸ್ಟೋರಿ ಚಿತ್ರತಂಡಕ್ಕೆ ಉಡುಗೊರೆ ನೀಡಿದ ಯುಪಿ ಸಿಎಂ ಯೋಗಿ ಆದಿತ್ಯನಾಥ

ಈ ವರ್ಷದ ಏಪ್ರಿಲ್‌ನಲ್ಲಿ, ಕನಿಷ್ಠ 100 ಕ್ರಿಮಿನಲ್ ಪ್ರಕರಣಗಳನ್ನು ಎದುರಿಸಿದ ಅತೀಕ್ ಮತ್ತು ಅವರ ಸಹೋದರ ಅಶ್ರಫ್ ಅಹ್ಮದ್ ಅವರನ್ನು ವೈದ್ಯಕೀಯ ತಪಾಸಣೆಗಾಗಿ ಪ್ರಯಾಗ್‌ರಾಜ್‌ಗೆ ಕರೆದೊಯ್ಯುತ್ತಿದ್ದಾಗ ಪತ್ರಕರ್ತರ ಸೋಗಿನಲ್ಲಿ ಬಂದ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಈ ವೇಳೆ ಅವರು ಉತ್ತರ ಪ್ರದೇಶ ಪೊಲೀಸರ ವಶದಲ್ಲಿದ್ದರು. ಘಟನೆಯ ಕೆಲವು ದಿನಗಳ ಮೊದಲು, ಅತಿಕ್​​ನ್ನು ಅಪಹರಣ ಪ್ರಕರಣದಲ್ಲಿ ಅಪರಾಧಿ ಎಂದು ಘೋಷಿಸಿದ ನ್ಯಾಯಾಲಯ, ಜೀವಾವಧಿ ಶಿಕ್ಷೆ ವಿಧಿಸಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:48 pm, Fri, 30 June 23

Follow Us
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್