ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಯೋಗಿ ಆದಿತ್ಯನಾಥ್; ಯಾರಿಗೂ ಅನ್ಯಾಯವಾಗಬಾರದು, ಸಮಸ್ಯೆ ಪರಿಹರಿಸಲು ಅಧಿಕಾರಿಗಳಿಗೆ ಸೂಚನೆ
ಸಿಎಂ ಯೋಗಿ ಆದಿತ್ಯನಾಥ ಅವರು ಸೋಮವಾರ ಬೆಳಗ್ಗೆ ಜನತಾ ದರ್ಶನ ಮೂಲಕ ಗೋರಖನಾಥ ದೇವಸ್ಥಾನದಲ್ಲಿ ಜನರ ಸಮಸ್ಯೆ ಆಲಿಸಿದರು. ಈ ವೇಳೆ ಅವರು ಸುಮಾರು 400 ಜನರನ್ನು ಭೇಟಿ ಮಾಡಿದ್ದು, ತಮ್ಮ ಅಧಿಕಾರಾವಧಿಯಲ್ಲಿ ಯಾರಿಗೂ ಅನ್ಯಾಯವಾಗುವುದಿಲ್ಲ ಎಂದು ಎಲ್ಲರಿಗೂ ಭರವಸೆ ನೀಡಿದ್ದಾರೆ.
ಗೋರಖ್ಪುರ್ ಆಗಸ್ಟ್ 1: ಯಾರದ್ದೋ ಭೂಮಿ ಒತ್ತುವರಿ ಮಾಡುವವರನ್ನು, ದುರ್ಬಲರ ಮೇಲೆ ದೌರ್ಜನ್ಯವೆಸಗುವವರನ್ನು ಯಾವುದೇ ಕಾರಣಕ್ಕೂ ಸುಮ್ಮನೆ ಬಿಡಬಾರದು. ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಸರ್ಕಾರ ಯಾರಿಗೂ ಅನ್ಯಾಯ ಮಾಡಬಾರದು, ಪ್ರತಿಯೊಬ್ಬರ ಬದುಕಿನಲ್ಲಿಯೂ ಸಮಾಧಾನ ತರಲು ಬದ್ಧವಾಗಿರಬೇಕು ಎಂದು ಉತ್ತರ ಪ್ರದೇಶ (Uttar Pradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath )ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಸಿಎಂ ಯೋಗಿ ಆದಿತ್ಯನಾಥ್ ಅವರು ಸೋಮವಾರ ಬೆಳಗ್ಗೆ ಜನತಾ ದರ್ಶನ ಮೂಲಕ ಗೋರಖನಾಥ ದೇವಸ್ಥಾನದಲ್ಲಿ ಜನರ ಸಮಸ್ಯೆ ಆಲಿಸಿದರು. ಈ ವೇಳೆ ಅವರು ಸುಮಾರು 400 ಜನರನ್ನು ಭೇಟಿ ಮಾಡಿದ್ದು, ತಮ್ಮ ಅಧಿಕಾರಾವಧಿಯಲ್ಲಿ ಯಾರಿಗೂ ಅನ್ಯಾಯವಾಗುವುದಿಲ್ಲ ಎಂದು ಎಲ್ಲರಿಗೂ ಭರವಸೆ ನೀಡಿದರು. ಪ್ರತಿಯೊಬ್ಬ ಸಂತ್ರಸ್ತರ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ಸಂಕಲ್ಪ ಮಾಡಿದೆ ಎಂದು ಅವರು ಹೇಳಿದ್ದಾರೆ.
#WATCH | Uttar Pradesh CM Yogi Adityanath holds ‘Janata Darshan’ in Gorakhpur. pic.twitter.com/7mLWrKEIhb
— ANI UP/Uttarakhand (@ANINewsUP) July 31, 2023
ಈ ವೇಳೆ ಚಿಕಿತ್ಸೆಗೆ ಆರ್ಥಿಕ ನೆರವು ಕೋರಿ ಹಲವರು ಸಿಎಂ ಯೋಗಿ ಆದಿತ್ಯನಾಥರನ್ನು ಭೇಟಿ ಆಗಿದ್ದು ಚಿಕಿತ್ಸೆಗೆ ಸರ್ಕಾರ ಸಂಪೂರ್ಣ ನೆರವು ನೀಡಲಿದೆ ಎಂದು ಭರವಸೆ ನೀಡಿದ್ದಾರೆ. ಚಿಕಿತ್ಸೆಗೆ ಸಂಬಂಧಿಸಿದ ಅಂದಾಜು ಪ್ರಕ್ರಿಯೆ ಪೂರ್ಣಗೊಳಿಸಿ ಶೀಘ್ರವೇ ಸರ್ಕಾರಕ್ಕೆ ಲಭ್ಯವಾಗುವಂತೆ ಮಾಡಿ ಎಂದು ಆದಿತ್ಯನಾಥ್ ಅಧಿಕಾರಿಗಳಿಗೆ ಹೇಳಿದ್ದಾರೆ.
ಇದನ್ನೂ ಓದಿ: ಜ್ಞಾನವಾಪಿ ಮಸೀದಿಯಲ್ಲಿ ತ್ರಿಶೂಲ ಏನು ಮಾಡುತ್ತಿದೆ? ತಪ್ಪಾಗಿದೆ ಎಂದು ಮುಸ್ಲಿಂ ಸಮುದಾಯ ಒಪ್ಪಿಕೊಳ್ಳಬೇಕು: ಯೋಗಿ ಆದಿತ್ಯನಾಥ್
ಕಂದಾಯ ಮತ್ತು ಪೊಲೀಸರಿಗೆ ಸಂಬಂಧಿಸಿದ ವಿಷಯಗಳನ್ನು ಸಂಪೂರ್ಣ ಪಾರದರ್ಶಕತೆ ಮತ್ತು ನಿಷ್ಪಕ್ಷಪಾತದಿಂದ ವಿಲೇವಾರಿ ಮಾಡಿ. ಯಾರಿಗೂ ಅನ್ಯಾಯವಾಗಬಾರದು.ಪ್ರತೀ ಸಂತ್ರಸ್ತರನ್ನು ಸೂಕ್ಷ್ಮವಾಗಿ ಪರಿಗಣಿಸಬೇಕು.ಉದ್ಯೋಗ ಸಂಬಂಧಿತ ಸಮಸ್ಯೆಗಳ ಬಗ್ಗೆಯೂ ಸಿಎಂ ಸಕಾರಾತ್ಮಕ ಭರವಸೆ ನೀಡಿದರು ಎಂದು ರಾಜ್ಯ ಸರ್ಕಾರದ ಪ್ರಕಟಣೆಯಲ್ಲಿ ಹೇಳಿದೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 3:13 pm, Tue, 1 August 23