ಮಥುರಾದಲ್ಲಿ ಮಾಂಸ, ಮದ್ಯ ನಿಷೇಧಿಸಿದ ಉತ್ತರ ಪ್ರದೇಶ ಸಿಎಂ ಆದಿತ್ಯನಾಥ

| Updated By: ರಶ್ಮಿ ಕಲ್ಲಕಟ್ಟ

Updated on: Aug 31, 2021 | 12:34 PM

ಬ್ರಿಜ್ ಭೂಮಿಯನ್ನು ಅಭಿವೃದ್ಧಿಪಡಿಸಲು ಎಲ್ಲ ಪ್ರಯತ್ನಗಳನ್ನು ಮಾಡಲಾಗುವುದು ಮತ್ತು ಇದಕ್ಕಾಗಿ ಯಾವುದೇ ಹಣದ ಕೊರತೆಯಿಲ್ಲ. ನಾವು ಆಧುನಿಕ ತಂತ್ರಜ್ಞಾನ ಮತ್ತು ಈ ಪ್ರದೇಶದ ಅಭಿವೃದ್ಧಿಗೆ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಪರಂಪರೆಯ ಮಿಶ್ರಣವನ್ನು ನೋಡುತ್ತಿದ್ದೇವೆ ಎಂದು ಆದಿತ್ಯನಾಥ ಹೇಳಿದ್ದಾರೆ.

ಮಥುರಾದಲ್ಲಿ ಮಾಂಸ, ಮದ್ಯ ನಿಷೇಧಿಸಿದ ಉತ್ತರ ಪ್ರದೇಶ ಸಿಎಂ ಆದಿತ್ಯನಾಥ
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ (ಸಾಂದರ್ಭಿಕ ಚಿತ್ರ)
Follow us on

ಲಖನೌ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಸೋಮವಾರ ಮಥುರಾದಲ್ಲಿ ಮದ್ಯ ಮತ್ತು ಮಾಂಸ ಮಾರಾಟವನ್ನು ಸಂಪೂರ್ಣ ನಿಷೇಧಿಸಿದ್ದಾರೆ. ನಿಷೇಧಕ್ಕೆ ಯೋಜನೆಗಳನ್ನು ರೂಪಿಸಲು ಹಾಗೂ ಇತರ ಕೆಲವು ವ್ಯಾಪಾರಗಳಲ್ಲಿ ಅಂತಹ ಚಟುವಟಿಕೆಗಳಲ್ಲಿ ತೊಡಗಿರುವ ಜನರನ್ನು ತೊಡಗಿಸಿಕೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ ಎಂದು ಅವರು ಹೇಳಿದರು. ಕೃಷ್ಣೋತ್ಸವ 2021 ಕಾರ್ಯಕ್ರಮದಲ್ಲಿ ಮಾತನಾಡಿದ ಆದಿತ್ಯನಾಥ ಮದ್ಯ ಮತ್ತು ಮಾಂಸ ವ್ಯಾಪಾರದಲ್ಲಿ ತೊಡಗಿರುವವರು ಮಥುರಾ ವೈಭವವನ್ನು ಪುನರುಜ್ಜೀವನಗೊಳಿಸುವ ಸಲುವಾಗಿ ಹಾಲಿನ ಮಾರಾಟವನ್ನು ಕೈಗೊಳ್ಳಬಹುದು ಎಂದು ಅವರು ಸಲಹೆ ನೀಡಿದರು.

ಕೊರೊನಾವೈರಸ್ ಸೋಂಕನ್ನು ತೊಡೆದುಹಾಕಲು ಶ್ರೀಕೃಷ್ಣನಲ್ಲಿ ಆದಿತ್ಯನಾಥ ಪ್ರಾರ್ಥಿಸಿದರು.
ಬ್ರಿಜ್ ಭೂಮಿಯನ್ನು ಅಭಿವೃದ್ಧಿಪಡಿಸಲು ಎಲ್ಲ ಪ್ರಯತ್ನಗಳನ್ನು ಮಾಡಲಾಗುವುದು ಮತ್ತು ಇದಕ್ಕಾಗಿ ಯಾವುದೇ ಹಣದ ಕೊರತೆಯಿಲ್ಲ. ನಾವು ಆಧುನಿಕ ತಂತ್ರಜ್ಞಾನ ಮತ್ತು ಈ ಪ್ರದೇಶದ ಅಭಿವೃದ್ಧಿಗೆ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಪರಂಪರೆಯ ಮಿಶ್ರಣವನ್ನು ನೋಡುತ್ತಿದ್ದೇವೆ ಎಂದು ಅವರು ಹೇಳಿದರು.

ದೇಶಕ್ಕೆ ಹೊಸ ನಿರ್ದೇಶನ ನೀಡಿದ್ದಕ್ಕಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಆದಿತ್ಯನಾಥ ಅಭಿನಂದಿಸಿದ್ದಾರೆ. ಬಹಳ ಹಿಂದಿನಿಂದಲೂ ನಿರ್ಲಕ್ಷಿಸಲ್ಪಟ್ಟ ನಂಬಿಕೆಯ ಸ್ಥಳಗಳು ಈಗ ಪುನರುಜ್ಜೀವನಗೊಳ್ಳುತ್ತಿವೆ ಎಂದು ಅವರು ಹೇಳಿದರು.  ಸಂಪುಟ ಸಚಿವರಾದ ಲಕ್ಷ್ಮಿ ನಾರಾಯಣ್ ಚೌಧರಿ ಮತ್ತು ಶ್ರೀಕಾಂತ್ ಶರ್ಮಾ ಕೂಡ ಈ ಸಂದರ್ಭದಲ್ಲಿ ಹಾಜರಿದ್ದರು.

ಇದನ್ನೂ ಓದಿ: ಸೆರೊ ಸಮೀಕ್ಷೆ, ಹೊಸ ಪರೀಕ್ಷಾ ತಂತ್ರ: ಹೆಚ್ಚುತ್ತಿರುವ ಕೊವಿಡ್ -19 ಪ್ರಕರಣಗಳ ವಿರುದ್ಧ ಕೇರಳ ಹೇಗೆ ಹೋರಾಡುತ್ತಿದೆ?

ಇದನ್ನೂ ಓದಿ:ಅಪಘಾತಕ್ಕೆ 2 ಗಂಟೆ ಮುನ್ನ ಆಡುಗೋಡಿ ಪೊಲೀಸರು ವಾರ್ನ್​ ಮಾಡಿದಾಗ, ತಾನು ಶಾಸಕನ ಪುತ್ರ ಎಂದಿದ್ದ ಕರುಣಾಸಾಗರ

(Uttar Pradesh CM Yogi Adityanath imposed a complete ban on meat liquor trade in Mathura )