ತುರ್ತು ಪರಿಸ್ಥಿತಿಯನ್ನು ಖಂಡಿಸುವ ನಿರ್ಣಯ; ಲೋಕಸಭಾ ಸ್ಪೀಕರ್​​ ನಡೆ ಶ್ಲಾಘಿಸಿದ ಯೋಗಿ ಆದಿತ್ಯನಾಥ್

ಕಾಂಗ್ರೆಸ್ ನ ಈ ಕರಾಳ ಕೃತ್ಯಗಳ ಬಗ್ಗೆ ಸಾರ್ವಜನಿಕರಿಗೆ ಹೇಳುವುದು ಮುಖ್ಯ. ಇಂದು ಸಂವಿಧಾನದ ಹೆಸರಿನಲ್ಲಿ ಕಾಂಗ್ರೆಸ್ ನಾಯಕರು ದೇಶವನ್ನು ದಾರಿ ತಪ್ಪಿಸುವ ಮತ್ತು ಮೀಸಲಾತಿಯನ್ನು ಕೊನೆಗಾಣಿಸುತ್ತಿರುವ ಪ್ರಯತ್ನ ಮಾಡುತ್ತಿದೆ. ಕಾಂಗ್ರೆಸ್‌ನ ಮುಖಗಳು ಬದಲಾಗಿರಬಹುದು ಆದರೆ ಅದರ ಸ್ವರೂಪ ಇನ್ನೂ ಸರ್ವಾಧಿಕಾರಿಯಾಗಿದೆ ಎಂದು ಮಾಧ್ಯಮಗಳೊಂದಿಗೆ ಮಾತನಾಡಿದ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ತುರ್ತು ಪರಿಸ್ಥಿತಿಯನ್ನು ಖಂಡಿಸುವ ನಿರ್ಣಯ; ಲೋಕಸಭಾ ಸ್ಪೀಕರ್​​ ನಡೆ ಶ್ಲಾಘಿಸಿದ ಯೋಗಿ ಆದಿತ್ಯನಾಥ್
ಯೋಗಿ ಆದಿತ್ಯನಾಥ್
Follow us
|

Updated on:Jun 26, 2024 | 7:34 PM

ದೆಹಲಿ ಜೂನ್ 26: ಸಂಸತ್ತಿನಲ್ಲಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ತುರ್ತು ಪರಿಸ್ಥಿತಿಯನ್ನು ಖಂಡಿಸುವ ನಿರ್ಣಯವನ್ನು ಅಂಗೀಕರಿಸಿದ್ದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈ ನಡೆಯನ್ನು ಶ್ಲಾಘಿಸಿದ್ದಾರೆ. ಬುಧವಾರ ಸಂಜೆ ತಮ್ಮ ಅಧಿಕೃತ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಆದಿತ್ಯನಾಥ್, ಅದೊಂದು ಐತಿಹಾಸಿಕ ದಿನ. ತುರ್ತು ಪರಿಸ್ಥಿತಿಯ 50 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಇಂದು ಸದನದಲ್ಲಿ ತುರ್ತು ಪರಿಸ್ಥಿತಿಯನ್ನು ಖಂಡಿಸುವ ನಿರ್ಣಯವನ್ನು ಅಂಗೀಕರಿಸಿದರು. ಈ ನಿರ್ಣಯವನ್ನು ತಂದಿದ್ದಕ್ಕಾಗಿ ನಾನು ಅವರಿಗೆ ಧನ್ಯವಾದ ಅರ್ಪಿಸುತ್ತೇನೆ. 25 ಜೂನ್ 1975 ರಂದು ಇಂದಿರಾ ಗಾಂಧಿ ಅವರು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಅದೇ ಸಂವಿಧಾನದ ಕತ್ತು ಹಿಸುಕಿದರು.

ಕಾಂಗ್ರೆಸ್ ನ ಈ ಕರಾಳ ಕೃತ್ಯಗಳ ಬಗ್ಗೆ ಸಾರ್ವಜನಿಕರಿಗೆ ಹೇಳುವುದು ಮುಖ್ಯ. ಇಂದು ಸಂವಿಧಾನದ ಹೆಸರಿನಲ್ಲಿ ಕಾಂಗ್ರೆಸ್ ನಾಯಕರು ದೇಶವನ್ನು ದಾರಿ ತಪ್ಪಿಸುವ ಮತ್ತು ಮೀಸಲಾತಿಯನ್ನು ಕೊನೆಗಾಣಿಸುತ್ತಿರುವ ಪ್ರಯತ್ನ ಮಾಡುತ್ತಿದೆ. ಕಾಂಗ್ರೆಸ್‌ನ ಮುಖಗಳು ಬದಲಾಗಿರಬಹುದು ಆದರೆ ಅದರ ಸ್ವರೂಪ ಇನ್ನೂ ಸರ್ವಾಧಿಕಾರಿಯಾಗಿದೆ. ಇಂದಿಗೂ ಅವರಿಗೆ ಸಾಂವಿಧಾನಿಕ ಸಂಸ್ಥೆಗಳ ಮೇಲೆ ನಂಬಿಕೆಯಿಲ್ಲ.ಕಳೆದ 75 ವರ್ಷಗಳಲ್ಲಿ ಕಾಂಗ್ರೆಸ್ ಸಂವಿಧಾನಕ್ಕೆ 75 ತಿದ್ದುಪಡಿಗಳನ್ನು ಮಾಡಿದೆ ಎಂದು ಹೇಳಿದ್ದಾರೆ.

ಯೋಗಿ ಆದಿತ್ಯನಾಥ್ ಹೇಳಿಕೆ

ಲೋಕಸಭಾ ಸ್ಪೀಕರ್ ಆಗಿ ಎರಡನೇ ಬಾರಿ ಆಯ್ಕೆಯಾದ ಓಂ ಬಿರ್ಲಾ ಅವರು ತುರ್ತು ಪರಿಸ್ಥಿತಿಯನ್ನು ಖಂಡಿಸುವ ನಿರ್ಣಯವನ್ನು ಇಂದು (ಬುಧವಾರ) ಅಂಗೀಕರಿಸಿದ್ದು ಆಗಿನ ಪ್ರಧಾನಿ ಇಂದಿರಾ ಗಾಂಧಿಯವರ ಸರ್ಕಾರವನ್ನು ಟೀಕಿಸಿದ್ದಾರೆ. ಸದನದಲ್ಲಿ ಕಾಂಗ್ರೆಸ್ ಮತ್ತು ವಿಪಕ್ಷಗಳ ಪ್ರತಿಭಟನೆಗಳ ನಡುವೆಯೇ ಆಡಳಿತಾರೂಢ ಪಕ್ಷಗಳು 2 ನಿಮಿಷ ಮೌನಾಚರಣೆಯನ್ನೂ ಮಾಡಿವೆ.

ಇದನ್ನೂ ಓದಿ: PM Narendra Modi: ಲೋಕಸಭೆಯಲ್ಲಿ ತುರ್ತು ಪರಿಸ್ಥಿತಿ ವಿರುದ್ಧ ಧ್ವನಿಯೆತ್ತಿದ ಸ್ಪೀಕರ್​ಗೆ ಪ್ರಧಾನಿ ಮೋದಿ ಮೆಚ್ಚುಗೆ

ತುರ್ತು ಪರಿಸ್ಥಿತಿಯನ್ನು ಖಂಡಿಸುವ ನಿರ್ಣಯ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಗೌರವಾನ್ವಿತ ಸ್ಪೀಕರ್ ಅವರು ತುರ್ತು ಪರಿಸ್ಥಿತಿಯನ್ನು ಖಂಡಿಸಿದ್ದು ಖುಷಿಕೊಟ್ಟಿದೆ. ಆ ಸಂದರ್ಭದ ಅತಿರೇಖದ ನಿರ್ಧಾರವನ್ನು ಎತ್ತಿ ತೋರಿಸಿದ ಸ್ಪೀಕರ್, ಅದರಿಂದ ಪ್ರಜಾಪ್ರಭುತ್ವದ ಕತ್ತು ಹಿಸುಕಿದಂಥಾ ಸ್ಥಿತಿ ನಿರ್ಮಾಣವಾಗಿತ್ತು ಎಂದು ಉಲ್ಲೇಖಿಸಿದ್ದಾರೆ. 50 ವರ್ಷಗಳ ಹಿಂದೆ ತುರ್ತು ಪರಿಸ್ಥಿತಿ ಹೇರಲಾಗಿತ್ತು.ಆದರೂ ಅದರ ಬಗ್ಗೆ ಈಗಿನ ಯುವ ಜನರು ತಿಳಿಯುವುದು ಮುಖ್ಯ. ಯಾಕೆಂದರೆ ಸಂವಿಧಾನವನ್ನು ತುಳಿದುಹಾಕಿದಾಗ, ಜನರ ಅಭಿಪ್ರಾಯಗಳನ್ನು ಹತ್ತಿಕ್ಕಿದಾಗ ಮತ್ತು ಸ್ವಾಯತ್ತ ಸಂಸ್ಥೆಗಳನ್ನು ನಾಶಪಡಿಸಿದಾಗ ಏನಾಗುತ್ತದೆ ಎಂಬುದಕ್ಕೆ ಅದೊಂದು ಸೂಕ್ತ ಉದಾಹರಣೆಯಾಗಿ ಉಳಿದಿದೆ. ತುರ್ತು ಪರಿಸ್ಥಿತಿಯ ಸಂದರ್ಭವು ಸರ್ವಾಧಿಕಾರ ಹೇಗಿರುತ್ತದೆ ಎಂಬುದಕ್ಕೆ ನಿದರ್ಶನವಾಗಿದೆ ಎಂದು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:33 pm, Wed, 26 June 24

ತಾಜಾ ಸುದ್ದಿ
ಸೋಲಿಗೆ ಮಾಧ್ಯಮಗಳ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ ಡಿಕೆ ಸುರೇಶ್
ಸೋಲಿಗೆ ಮಾಧ್ಯಮಗಳ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ ಡಿಕೆ ಸುರೇಶ್
ಹಣವನ್ನು ಗಾಳಿಯಲ್ಲಿ ತೂರಿ ಹುಟ್ಟುಹಬ್ಬ ಆಚರಿಸಿಕೊಂಡ ಹುಬ್ಬಳ್ಳಿಯ ಯುವಕ
ಹಣವನ್ನು ಗಾಳಿಯಲ್ಲಿ ತೂರಿ ಹುಟ್ಟುಹಬ್ಬ ಆಚರಿಸಿಕೊಂಡ ಹುಬ್ಬಳ್ಳಿಯ ಯುವಕ
ಯುವಕರ ನೆಚ್ಚಿನ ಸ್ಟೈಲಿಶ್ ಕ್ಯಾಸಿಯೋ G Shock ಸ್ಮಾರ್ಟ್​ವಾಚ್ ಬಿಡುಗಡೆ
ಯುವಕರ ನೆಚ್ಚಿನ ಸ್ಟೈಲಿಶ್ ಕ್ಯಾಸಿಯೋ G Shock ಸ್ಮಾರ್ಟ್​ವಾಚ್ ಬಿಡುಗಡೆ
‘ಎಲ್ಲರಿಗೂ ನೋವಿದೆ’; ದರ್ಶನ್ ಪ್ರಕರಣದಲ್ಲಿ ಸುಮಲತಾ, ರಾಕ್​ಲೈನ್ ಮೌನ ಏಕೆ?
‘ಎಲ್ಲರಿಗೂ ನೋವಿದೆ’; ದರ್ಶನ್ ಪ್ರಕರಣದಲ್ಲಿ ಸುಮಲತಾ, ರಾಕ್​ಲೈನ್ ಮೌನ ಏಕೆ?
ಮನೆಯಲ್ಲಿ ಚಪ್ಪಲಿ ಹಾಕಿಕೊಂಡು ಓಡಾಡಬಾರದು, ಈ ಬಗ್ಗೆ ಆಧ್ಯಾತ್ಮದಲ್ಲೇನಿದೆ?
ಮನೆಯಲ್ಲಿ ಚಪ್ಪಲಿ ಹಾಕಿಕೊಂಡು ಓಡಾಡಬಾರದು, ಈ ಬಗ್ಗೆ ಆಧ್ಯಾತ್ಮದಲ್ಲೇನಿದೆ?
Horoscope:ಈ ರಾಶಿಯವರಿಗೆ ಪ್ರಸಿದ್ಧ ವ್ಯಕ್ತಿಗಳು ಅನಿರೀಕ್ಷಿತವಾಗಿ ಸಿಗುವರು
Horoscope:ಈ ರಾಶಿಯವರಿಗೆ ಪ್ರಸಿದ್ಧ ವ್ಯಕ್ತಿಗಳು ಅನಿರೀಕ್ಷಿತವಾಗಿ ಸಿಗುವರು
‘ನಾನು ದರ್ಶನ್ ಅವರ ಸಂಬಂಧಿ’: ಭೇಟಿ ಮಾಡಲು ಪರಪ್ಪನ ಅಗ್ರಹಾರಕ್ಕೆ ಬಂದ ಯುವತಿ
‘ನಾನು ದರ್ಶನ್ ಅವರ ಸಂಬಂಧಿ’: ಭೇಟಿ ಮಾಡಲು ಪರಪ್ಪನ ಅಗ್ರಹಾರಕ್ಕೆ ಬಂದ ಯುವತಿ
ದರ್ಶನ್​ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಹಿರಿಯ ನಿರ್ಮಾಪಕ ಸಾ.ರಾ. ಗೋವಿಂದು
ದರ್ಶನ್​ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಹಿರಿಯ ನಿರ್ಮಾಪಕ ಸಾ.ರಾ. ಗೋವಿಂದು
ಸಿಎಂ ವಿವಾದ ಸಿದ್ದರಾಮಯ್ಯ ಕಾರ್ಯವೈಖರಿ ಮೇಲೆ ಪ್ರಭಾವ ಬೀರಿದೆ: ಶೆಟ್ಟರ್
ಸಿಎಂ ವಿವಾದ ಸಿದ್ದರಾಮಯ್ಯ ಕಾರ್ಯವೈಖರಿ ಮೇಲೆ ಪ್ರಭಾವ ಬೀರಿದೆ: ಶೆಟ್ಟರ್
ಹೋರಿ ಬೆದರಿಸುವುದನ್ನು ನೋಡಲು ವಿದ್ಯುತ್​ ಟಿಸಿ ಏರಿ ಕೂತರು: ಜನರ ಹುಚ್ಚಾಟ
ಹೋರಿ ಬೆದರಿಸುವುದನ್ನು ನೋಡಲು ವಿದ್ಯುತ್​ ಟಿಸಿ ಏರಿ ಕೂತರು: ಜನರ ಹುಚ್ಚಾಟ