ಪ್ರಯಾಗ್‌ರಾಜ್: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಗುರುವಾರ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಅವರನ್ನು ಭೇಟಿಯಾಗಿದ್ದಾರೆ. ಈ ಇಬ್ಬರು ನಾಯಕರು ಜನಸಂಖ್ಯೆ ಸಮಸ್ಯೆಯ ಬಗ್ಗೆ ಚರ್ಚಿಸಿದ್ದಾರೆ. ಮೋಹನ್ ಭಾಗವತ್ ಅವರನ್ನು ಭೇಟಿ ಮಾಡಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಲಕ್ನೋದಿಂದ ಪ್ರಯಾಣಿಸಿದ್ದರು. ಅವರಿಬ್ಬರೂ ಸುಮಾರು 1 ಗಂಟೆ ಒಟ್ಟಿಗೇ ಇದ್ದರು.
ಇಬ್ಬರೂ ಒಟ್ಟಿಗೆ ಊಟ ಮಾಡಿದ ನಂತರ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಿಂತಿರುಗಿದರು. ಇಬ್ಬರೂ ಜನಸಂಖ್ಯೆಯ ಸಮಸ್ಯೆಯನ್ನು ಚರ್ಚಿಸಿದರು. ಅಕ್ಟೋಬರ್ 23ರಂದು ಅಯೋಧ್ಯೆಯಲ್ಲಿ ನಡೆಯಲಿರುವ ದೀಪೋತ್ಸವಕ್ಕೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ಈ ಮೊದಲೇ ಯೋಗಿ ಆದಿತ್ಯನಾಥ್ ಆಹ್ವಾನಿಸಿದ್ದರು.
ಇದನ್ನೂ ಓದಿ: ಹಿಂದೂ-ಮುಸ್ಲಿಂ ಡಿಎನ್ಎ ಒಂದೇ ಎಂದಮೇಲೆ ಅಸಮತೋಲನ ಎಲ್ಲಿದೆ?; ಮೋಹನ್ ಭಾಗವತ್ಗೆ ಓವೈಸಿ ತಿರುಗೇಟು
ಆರ್‌ಎಸ್‌ಎಸ್ ಮುಖಂಡ ದತ್ತಾತ್ರೇಯ ಹೊಸಬಾಳೆ ಗುರುವಾರ ಬಾಂಗ್ಲಾದೇಶದಿಂದ ಧಾರ್ಮಿಕ ಮತಾಂತರ ಮತ್ತು ವಲಸೆಯು ಜನಸಂಖ್ಯೆಯ ಅಸಮತೋಲನಕ್ಕೆ ಕಾರಣವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮತಾಂತರ ವಿರೋಧಿ ಕಾನೂನುಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕೆಂದು ಕರೆ ನೀಡಿದ್ದರು.
ಮೋಹನ್ ಭಾಗವತ್ ಕಳೆದ ಅಕ್ಟೋಬರ್ 16ರಿಂದ 19ರವರೆಗೆ ಪ್ರಯಾಗ್‌ರಾಜ್‌ನಲ್ಲಿ ನಡೆದ ಆರ್‌ಎಸ್‌ಎಸ್ ಸಭೆಯಲ್ಲಿ ಭಾಗವಹಿಸಿದ್ದರು. ಇದರಲ್ಲಿ ಜನಸಂಖ್ಯೆಯ ಸಮಸ್ಯೆಯನ್ನು ಚರ್ಚಿಸಲಾಗಿತ್ತು. ಉತ್ತರ ಪ್ರದೇಶ ರಾಜ್ಯ ಕಾನೂನು ಆಯೋಗವು ಕಳೆದ ವರ್ಷ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗೆ ಕರಡು ಜನಸಂಖ್ಯಾ ನಿಯಂತ್ರಣ ಮಸೂದೆಯನ್ನು ಸಲ್ಲಿಸಿತ್ತು. ರಾಜ್ಯದಲ್ಲಿ ದಂಪತಿಗೆ ಒಂದೇ ಮಗು ನಿಯಮವನ್ನು ಅಳವಡಿಸಿಕೊಳ್ಳಲು ಪ್ರೋತ್ಸಾಹ ಮತ್ತು ಎರಡು ಮಕ್ಕಳ ನೀತಿಯನ್ನು ಉಲ್ಲಂಘಿಸುವವರನ್ನು ನಿಷೇಧಿಸುವುದು ಸೇರಿದಂತೆ ಹಲವಾರು ಶಿಫಾರಸುಗಳನ್ನು ಅದರಲ್ಲಿ ಮಾಡಲಾಗಿತ್ತು.