Yogi Adityanath Oath Taking ಉತ್ತರಪ್ರದೇಶದ ಸಿಎಂ ಆಗಿ ಯೋಗಿ ಆದಿತ್ಯನಾಥ ; ಉಪ ಮುಖ್ಯಮಂತ್ರಿಯಾಗಿ ಕೇಶವ್ ಮೌರ್ಯ ಮತ್ತು ಬ್ರಿಜೇಶ್ ಪಾಠಕ್ ಪ್ರಮಾಣ ವಚನ
Yogi Adityanath Swearing in Ceremony | Up CM: ಯೋಗಿ ಆದಿತ್ಯನಾಥ ಅವರು ಅಟಲ್ ಬಿಹಾರಿ ವಾಜಪೇಯಿ ಏಕಾನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಸತತ 2ನೇ ಅವಧಿಗೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಲಖನೌದಲ್ಲಿ ನಡೆದ ಸಭೆಯಲ್ಲಿ ಉತ್ತರ ಪ್ರದೇಶ (Uttar Pradesh) ಬಿಜೆಪಿ (BJP)ಶಾಸಕಾಂಗ ಪಕ್ಷದ ನಾಯಕರಾಗಿ ಅವಿರೋಧವಾಗಿ ಆಯ್ಕೆಯಾದ ಯೋಗಿ ಆದಿತ್ಯನಾಥ (Yogi Adityanath) ಅವರು ಎರಡನೇ ಅವಧಿಗೆ ಯುಪಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಯೋಗಿ ಆದಿತ್ಯನಾಥ ಅವರು ಅಟಲ್ ಬಿಹಾರಿ ವಾಜಪೇಯಿ ಏಕಾನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಸತತ 2ನೇ ಅವಧಿಗೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಹರಿಯಾಣ ಸಿಎಂ ಎಂಎಲ್ ಖಟ್ಟರ್, ಹಿಮಾಚಲ ಪ್ರದೇಶ ಸಿಎಂ ಜೈರಾಮ್ ಠಾಕೂರ್ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿಯಾಗಿ ಕೇಶವ್ ಮೌರ್ಯ ಮತ್ತು ಬ್ರಿಜೇಶ್ ಪಾಠಕ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ.ವಿಧಾನಸಭೆ ಚುನಾವಣೆಯಲ್ಲಿ ಆದಿತ್ಯನಾಥ ದಾಖಲೆ ಬರೆದು ಐದು ವರ್ಷಗಳ ಅವಧಿಯನ್ನು ಪೂರ್ಣಗೊಳಿಸಿದ ನಂತರ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬಂದ ಮೊದಲ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಬಿಜೆಪಿಯು 1985 ರಿಂದ ಯುಪಿಯಲ್ಲಿ ಅಧಿಕಾರವನ್ನು ಉಳಿಸಿಕೊಂಡ ಮೊದಲ ಪಕ್ಷವಾಗಿದೆ. ಕೇಂದ್ರ ಸಚಿವರು, ಕೈಗಾರಿಕೋದ್ಯಮಿಗಳು ಮತ್ತು ಇತರ ರಾಜ್ಯಗಳ ಸಚಿವರೊಂದಿಗೆ ಬಿಜೆಪಿ ಆಡಳಿತವಿರುವ ರಾಜ್ಯಗಳ ಎಲ್ಲಾ ಮುಖ್ಯಮಂತ್ರಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ.
Lucknow | Keshav Prasad Maurya and Brajesh Pathak take oath as the Deputy Chief Ministers of Uttar Pradesh. pic.twitter.com/HsO83jWSUR
— ANI UP/Uttarakhand (@ANINewsUP) March 25, 2022
ಯೋಗಿ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಅಪ್ಡೇಟ್ಸ್
-
- ಕೇಂದ್ರ ಸಚಿವೆ ಅನುಪ್ರಿಯಾ ಪಟೇಲ್ ಅವರ ಪತಿ ಆಶಿಶ್ ಪಟೇಲ್ ಈ ಬಾರಿ ಯೋಗಿ ಸಂಪುಟದ ಭಾಗವಾಗಲಿದ್ದಾರೆ ಎಂದು ಅಪ್ನಾ ದಳದ ಮೂಲಗಳು ಖಚಿತಪಡಿಸಿವೆ. ವೃತ್ತಿಯಲ್ಲಿ ಇಂಜಿನಿಯರ್ ಆಗಿದ್ದ ಆಶಿಶ್ ಅವರು ಕೆಲಸ ತೊರೆದು ಸಕ್ರಿಯ ರಾಜಕೀಯಕ್ಕೆ ಕಾಲಿಟ್ಟಿದ್ದರು ಮತ್ತು 2018 ರಲ್ಲಿ ಬಿಜೆಪಿಯ ಸಹಾಯದಿಂದ ವಿಧಾನ ಪರಿಷತ್ತಿನ ಸದಸ್ಯರಾಗಿದ್ದರು
- ಭೂಪೇಂದ್ರ ಸಿಂಗ್ ಚೌಧರಿ, ಅನಿಲ್ ರಾಜ್‌ಭರ್, ಜಿತಿನ್ ಪ್ರಸಾದ, ರಾಕೇಶ್ ಸಚನ್,ಲಕ್ಷ್ಮಿ ನಾರಾಯಣ ಚೌಧರಿ, ಜೈವಿರ್ ಸಿಂಗ್, ಧರ್ಮಪಾಲ್ ಸಿಂಗ್, ನಂದ ಗೋಪಾಲ್ ಗುಪ್ತ ‘ನಂದಿ’ ಉತ್ತರ ಪ್ರದೇಶ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
- ಯೋಗಿ ಆದಿತ್ಯನಾಥ ಅವರು ಮೊದಲಿನಂತೆಯೇ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಹೊಂದಿದ್ದಾರೆ. ಚುನಾವಣೆಯಲ್ಲಿ ಸೋತಿದ್ದ ಕೇಶವ್ ಮೌರ್ಯ ಅವರನ್ನು ಉಳಿಸಿಕೊಂಡಿದ್ದು ಚುನಾವಣೆಗೆ ಸ್ಪರ್ಧಿಸದ ದಿನೇಶ್ ಶರ್ಮಾ ಬದಲಿಗೆ ಬ್ರಜೇಶ್ ಪಾಠಕ್ ಅವರನ್ನು ಆಯ್ಕೆ ಮಾಡಲಾಗಿದೆ. ಯೋಗಿ ಆದಿತ್ಯನಾಥ ಅವರ ಮೊದಲ ಸರ್ಕಾರದಲ್ಲಿ ಬ್ರಾಹ್ಮಣ ನಾಯಕ ಪಾಠಕ್ ಕಾನೂನು ಸಚಿವರಾಗಿದ್ದರು. ಮಾಜಿ ಲೋಕಸಭಾ ಸಂಸದರಾಗಿದ್ದ ಅವರು 2017ರಲ್ಲಿ ಮಾಯಾವತಿಯವರ ಬಿಎಸ್‌ಪಿಯಿಂದ ಬಿಜೆಪಿಗೆ ಬದಲಾದರು.
- ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಸತತ ಎರಡನೇ ಅವಧಿಗೆ ಯೋಗಿ ಆದಿತ್ಯನಾಥ ಅವರೊಂದಿಗೆ ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಿದ 52 ಸಚಿವರಲ್ಲಿ ಇಬ್ಬರು ಉಪ ಮುಖ್ಯಮಂತ್ರಿಗಳೂ ಸೇರಿದ್ದಾರೆ.
- ಉತ್ತರ ಪ್ರದೇಶದಲ್ಲಿ ಬಿಜೆಪಿ 403 ಕ್ಷೇತ್ರಗಳ ಪೈಕಿ 255 ಕ್ಷೇತ್ರಗಳನ್ನು ಗೆಲ್ಲುವ ಮೂಲಕ 41.29 ಶೇಕಡಾ ಮತಗಳನ್ನು ಪಡೆಯುವ ಮೂಲಕ ಅಧಿಕಾರವನ್ನು ಉಳಿಸಿಕೊಂಡಿದೆ.
ಇದನ್ನೂ ಓದಿ: ಬಂಗಾಳದಲ್ಲಿನ ಹತ್ಯೆಯ ಬಗ್ಗೆ ಹೇಳಿ ರಾಜ್ಯಸಭೆಯಲ್ಲಿ ಕಣ್ಣೀರಿಟ್ಟ ಬಿಜೆಪಿ ಸಂಸದೆ ರೂಪಾ ಗಂಗೂಲಿ
Published On - 4:24 pm, Fri, 25 March 22