ಮಹಾಕುಂಭ ಅದ್ಭುತ ಎಂದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ

|

Updated on: Feb 18, 2025 | 7:33 PM

ಹಿಂದೂಗಳ ಪವಿತ್ರ ಆಚರಣೆಯಾದ ಉತ್ತರ ಪ್ರದೇಶದ ಪ್ರಯಾಗರಾಜ್​ನ ಮಹಾಕುಂಭದಲ್ಲಿ ಇಂದು ಕೇಂದ್ರ ಆಹಾರ ಸಚಿವ ಪ್ರಲ್ಹಾದ್ ಜೋಶಿ ತಮ್ಮ ಕುಟುಂಬಸ್ಥರೊಂದಿಗೆ ಪವಿತ್ರ ಸ್ನಾನ ಮಾಡಿದ್ದಾರೆ. ಈ ವೇಳೆ ಮಹಾಕುಂಭ ಬಹಳ ಅದ್ಭುತವಾದುದು ಎಂದು ಪ್ರಲ್ಹಾದ್ ಜೋಶಿ ಟ್ವೀಟ್ ಮಾಡಿದ್ದರು. ಅದನ್ನು ರೀಟ್ವೀಟ್ ಮಾಡಿರುವ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್, ಮಹಾಕುಂಭದಿಂದ ಜಗತ್ತೇ ಭಾರತದ ವೈವಿಧ್ಯತೆ-ದೈವತ್ವದ ಚೈತನ್ಯವನ್ನು ಅರಿಯುತ್ತಿದೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರಿಗೆ ಧನ್ಯವಾದ ಎಂದಿದ್ದಾರೆ.

ಮಹಾಕುಂಭ ಅದ್ಭುತ ಎಂದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
Yogi Adityanath
Follow us on

ಪ್ರಯಾಗರಾಜ್: “ಮಹಾಕುಂಭ ಮೇಳ ವಿಶ್ವದ ಒಂದು ದೊಡ್ಡ ಧಾರ್ಮಿಕ ಮಹೋತ್ಸವವಾಗಿ ಜರುಗುತ್ತಿದೆ” ಎಂದು ಸಾಮಾಜಿಕ ಜಾಲತಾಣ ಎಕ್ಸ್​ ಖಾತೆಯಲ್ಲಿ ಅನನ್ಯ ಅನುಭವ ಹಂಚಿಕೊಂಡ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರಿಗೆ ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ ಅರ್ಪಿಸಿದ್ದಾರೆ. ಕೇಂದ್ರ ಆಹಾರ, ಸಾರ್ವಜನಿಕ ವಿತರಣೆ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ತಮ್ಮ ಕುಟುಂಬಸ್ಥರೊಂದಿಗೆ ಇಂದು ಪ್ರಯಾಗರಾಜ್‌ನ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದರು. ಪ್ರಲ್ಹಾದ್ ಜೋಶಿ ಅವರೊಂದಿಗೆ ಅವರ ಪತ್ನಿ ಜ್ಯೋತಿ ಜೋಶಿ, ಪುತ್ರಿಯರಾದ ಅರ್ಪಿತಾ, ಅನನ್ಯ ಮತ್ತು ಅನುಷಾ ಜೋಶಿ, ಅವರ ಸಹೋದರ ಗೋವಿಂದ್ ಜೋಶಿ ಮತ್ತು ಅವರ ಪತ್ನಿ ಕಮಲಾ ಜೋಶಿ ಹಾಗೂ ಮಕ್ಕಳು, ಮೊಮ್ಮಕ್ಕಳು ಇದ್ದರು.

ಮಹಾಕುಂಭ ಒಂದು ಶ್ರೇಷ್ಠ ಆಧ್ಯಾತ್ಮಿಕ ಅನುಭವ ನೀಡುತ್ತದೆ. ಇಲ್ಲಿ ಪವಿತ್ರ ಸ್ನಾನ ಮಾಡುವುದು ಭವ್ಯವಾದ ಯಶಸ್ಸು, ನಂಬಿಕೆ ಮತ್ತು ಸಂಸ್ಕೃತಿಯ ಪ್ರತೀಕವಾಗಿದೆ. ಪ್ರಯಾಗರಾಜ್ ಮಹಾಕುಂಭದಲ್ಲಿ ಪ್ರಧಾನಿ ಮೋದಿಜಿ ಅವರ ನೇತೃತ್ವ, ಮಾರ್ಗದರ್ಶನದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅದ್ಭುತ ವ್ಯವಸ್ಥೆ ಕಲ್ಪಿಸಿದ್ದಾರೆ. ಸಾವಿರಾರು ವರ್ಷಗಳಿಂದ ವೇದ-ಪುರಾಣಕಾಲದಿಂದ ಮಹಾ ಕುಂಭಮೇಳ ಆಚರಣೆಯಲ್ಲಿದೆ. ದೇಶದೆಲ್ಲೆಡೆಯಿಂದ ಕೋಟ್ಯಂತರ ಸಂಖ್ಯೆಯಲ್ಲಿ ಸಾಧು-ಸಂತರು, ಭಕ್ತರು ಆಗಮಿಸುತ್ತಿದ್ದಾರೆ. ಅತ್ಯಂತ ಶಾಂತಿ, ಸಂಯಮದಿಂದ ಪಾಲ್ಗೊಂಡು ಅವರವರ ಪೂಜಾ ಪದ್ಧತಿಯಲ್ಲಿ ಧಾರ್ಮಿಕ ಉತ್ಸವ ಆಚರಿಸಿ ಅಭೂತಪೂರ್ವವಾಗಿ ಯಶಸ್ವಿಗೊಳಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮೆಚ್ಚುಗೆ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಮಹಾಕುಂಭದಲ್ಲಿ ಕುಟುಂಬಸ್ಥರೊಂದಿಗೆ ಪವಿತ್ರಸ್ನಾನ ಮಾಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಪ್ರಧಾನಿ ಮೋದಿಯವರ ನೇತೃತ್ವ, ಮಾರ್ಗದರ್ಶನದಲ್ಲಿ ಯೋಗಿ ಆದಿತ್ಯನಾಥ್ ಅದ್ಭುತ ವ್ಯವಸ್ಥೆ ಕಲ್ಪಿಸಿದ್ದಾರೆಂದು ಸಚಿವ ಪ್ರಲ್ಹಾದ್ ಜೋಶಿ ಅವರು ಉತ್ತರ ಪ್ರದೇಶದ ಸಿಎಂಗೆ ಶುಭಾಶಯ ಕೋರಿ ಟ್ವೀಟ್ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಉತ್ತರ ಪ್ರದೇಶದ ಸಿಎಂ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರಿಗೆ ಧನ್ಯವಾದ ಅರ್ಪಿಸಿ ಮರು ಟ್ವೀಟ್ ಮಾಡಿದ್ದಾರೆ.


ಸಿಎಂ ಯೋಗಿ ಆದಿತ್ಯನಾಥ್ ಎಕ್ಸ್​ ಖಾತೆಯಲ್ಲಿ ಪ್ರತಿಕ್ರಿಯಿಸಿದ್ದು, ಏಕತೆ, ನಂಬಿಕೆ ಮತ್ತು ಆಧ್ಯಾತ್ಮಿಕತೆ ಸನಾತನ ಧರ್ಮದ ಸಾಂಸ್ಕೃತಿಕ ಶಕ್ತಿಗಳಾಗಿವೆ. ಪ್ರಯಾಗರಾಜ್ ಮಹಾಕುಂಭದ ಮೂಲಕ ಇಂದು ಇಡೀ ಜಗತ್ತು ಭಾರತದ ವೈವಿಧ್ಯತೆ ಮತ್ತು ದೈವತ್ವದ ಚೈತನ್ಯವನ್ನು ಅರಿಯುತ್ತಿದೆ ಎಂದಿದ್ದಾರೆ.


ಇದನ್ನೂ ಓದಿ: ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿ ತಾವೇ ಕತಾರ್ ರಾಜನನ್ನು ಬರಮಾಡಿಕೊಂಡ ಪ್ರಧಾನಿ ಮೋದಿ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ, ತೀರ್ಥರಾಜ್ ಪ್ರಯಾಗವನ್ನು ತಲುಪುವ ಎಲ್ಲಾ ಭಕ್ತರು ಗಂಗಾ, ಮಾ ಯಮುನಾ ಮತ್ತು ಸರಸ್ವತಿ ಮಾತೆಯ ಪವಿತ್ರ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿ ಪುನೀತರಾಗುತ್ತಿದ್ದಾರೆ. ಧಾರ್ಮಿಕ, ಅಧ್ಯಾತ್ಮಿಕ ನಂಬಿಕೆಯಿಂದ ತುಂಬಿದ ಈ ಪವಿತ್ರ ಭೂಮಿಯು ಎಲ್ಲರಿಗೂ ಕಲ್ಯಾಣವನ್ನುಂಟು ಮಾಡಲಿ ಎಂದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ