ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಮಾಜಿ ಮುಖ್ಯಮಂತ್ರಿ ಅಖಿಲೇಶ್​ ಯಾದವ್​ಗೆ ಕೊರೊನಾ ಸೋಂಕು ದೃಢ

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಮಾಜಿ ಮುಖ್ಯಮಂತ್ರಿ ಅಖಿಲೇಶ್​ ಯಾದವ್​ಗೆ ಕೊರೊನಾ ಸೋಂಕು ದೃಢ
ಯೋಗಿ ಆದಿತ್ಯನಾಥ್​ ಮತ್ತು ಅಖಿಲೇಶ್​ ಯಾದವ್​

ಕಳೆದ ಎರಡು ದಿನಗಳಿಂದ ಹೋಂ ಐಸೋಲೇಶನ್​ನಲ್ಲಿ ಇದ್ದು ಆರೋಗ್ಯದ ಬಗ್ಗೆ ನಿಗಾ ವಹಿಸುತ್ತಿದ್ದ ಯೋಗಿ ಆದಿತ್ಯನಾಥ್​ ಅವರಿಗೆ ಇದೀಗ ಕೊರೊನಾ ಪಾಸಿಟಿವ್​ ಕಾಣಿಸಿಕೊಂಡಿದೆ.

Skanda

|

Apr 14, 2021 | 1:48 PM

ಲಕ್ನೋ: ದೇಶದೆಲ್ಲೆಡೆ ಕೊರೊನಾ ಸೋಂಕಿನ ಎರಡನೇ ಅಲೆ ಭೀತಿ ಹೆಚ್ಚಾಗುತ್ತಿದ್ದು, ಹಲವು ಗಣ್ಯರು ಸೋಂಕಿಗೆ ತುತ್ತಾಗಿದ್ದಾರೆ. ಇದೀಗ ಉತ್ತರ ಪ್ರದೇಶ ರಾಜ್ಯದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕಳೆದ ಕೆಲ ದಿನಗಳಿಂದ ಹೋಂ ಐಸೋಲೇಶನ್​ನಲ್ಲಿ ಇದ್ದು ಆರೋಗ್ಯದ ಬಗ್ಗೆ ನಿಗಾ ವಹಿಸುತ್ತಿದ್ದ ಯೋಗಿ ಆದಿತ್ಯನಾಥ್​ ಅವರಿಗೆ ಇದೀಗ ಕೊರೊನಾ ಪಾಸಿಟಿವ್​ ಕಾಣಿಸಿಕೊಂಡಿದೆ. ಈ ಬಗ್ಗೆ ಸ್ವತಃ ಯೋಗಿ ಆದಿತ್ಯನಾಥ್ ಅವರು ತಮ್ಮ ಅಧಿಕೃತ ಟ್ವಿಟರ್​ ಖಾತೆ ಮೂಲಕ ಕೊರೊನಾ ಪಾಸಿಟಿವ್​ ಬಂದಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

ನನಗೆ ಕೊರೊನಾ ಪಾಸಿಟಿವ್​ ಕಾಣಿಸಿಕೊಂಡಿದೆ. ಕೊವಿಡ್​ ಪರೀಕ್ಷೆಯ ರಿಪೋರ್ಟ್​ ಬಂದಿದ್ದು ಸೋಂಕು ದೃಢಪಟ್ಟಿದೆ. ನಾನು ಹೋಂ ಐಸೋಲೇಶನ್​ನಲ್ಲಿ ಇದ್ದು ಸೂಕ್ತ ಚಿಕಿತ್ಸೆ ಪಡೆಯುತ್ತಿದ್ದೇನೆ. ಜೊತೆಗೆ, ಆಡಳಿತಕ್ಕೆ ಸಂಬಂಧಿಸಿದ ಎಲ್ಲಾ ಕೆಲಸ ಕಾರ್ಯಗಳನ್ನು ವರ್ಚುಯಲ್​ ಆಗಿ ನಡೆಸಲಾಗುತ್ತಿದೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ದಯಮಾಡಿ ತಕ್ಷಣವೇ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.

ಅಖಿಲೇಶ್​ ಯಾದವ್​ಗೂ ಕೊರೊನಾ ಪಾಸಿಟಿವ್​ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಸಮಾಜವಾದಿ ಮುಖ್ಯಸ್ಥ ಅಖಿಲೇಶ್​ ಯಾದವ್​ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಟ್ವೀಟ್​ ಮಾಡಿರುವ ಅಖಿಲೇಶ್​ ಯಾದವ್​, ತಮಗೆ ಕೊರೊನಾ ಪಾಸಿಟಿವ್​ ಬಂದಿರುವುದಾಗಿ ಹೇಳಿಕೊಂಡಿದ್ದಾರೆ. ಜೊತೆಗೆ, ತಮ್ಮ ಸಂಪರ್ಕಕ್ಕೆ ಬಂದವರಿಗೆ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಕುಂಭ ಮೇಳದಲ್ಲಿ ಮೂರನೇ ಶಾಹಿ ಸ್ನಾನ ಇಂದು, ಕೊವಿಡ್ ಮಾರ್ಗಸೂಚಿ ಪಾಲಿಸಿ: ಉತ್ತರಾಖಂಡ ಸಿಎಂ ತೀರತ್ ಸಿಂಗ್ ರಾವತ್ ಮನವಿ

Follow us on

Related Stories

Most Read Stories

Click on your DTH Provider to Add TV9 Kannada