ಪ್ರಧಾನಿ ರ‍್ಯಾಲಿ ನಡೆಯಲಿರುವ ಅಯೋಧ್ಯೆಯ ಮೈದಾನ ಪರಿಶೀಲಿಸಿ ಸೆಲ್ಫಿ ಕ್ಲಿಕ್ ಮಾಡಿದ ಯೋಗಿ ಆದಿತ್ಯನಾಥ್

ನವೀಕರಣಗೊಂಡ ಅಯೋಧ್ಯೆ ರೈಲು ನಿಲ್ದಾಣ ಮತ್ತು ಹೊಸ ವಿಮಾನ ನಿಲ್ದಾಣವನ್ನು ಉದ್ಘಾಟಿಸಲು ಪ್ರಧಾನಿ ಮೋದಿ ಶನಿವಾರ ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ. ವಿಮಾನ ನಿಲ್ದಾಣದ ಬಳಿ ಸಾರ್ವಜನಿಕ ರ‍್ಯಾಲಿಯನ್ನು ಉದ್ದೇಶಿಸಿ ಅವರು ಮಾತನಾಡಲಿದ್ದಾರೆ. ಪ್ರಧಾನಿಯವರು ಬೆಳಗ್ಗೆ 10:45 ರ ಸುಮಾರಿಗೆ ಅಯೋಧ್ಯೆ ವಿಮಾನ ನಿಲ್ದಾಣವನ್ನು ತಲುಪುವ ನಿರೀಕ್ಷೆಯಿದೆ

ಪ್ರಧಾನಿ ರ‍್ಯಾಲಿ ನಡೆಯಲಿರುವ ಅಯೋಧ್ಯೆಯ ಮೈದಾನ ಪರಿಶೀಲಿಸಿ ಸೆಲ್ಫಿ ಕ್ಲಿಕ್ ಮಾಡಿದ ಯೋಗಿ ಆದಿತ್ಯನಾಥ್
ಯೋಗಿ ಆದಿತ್ಯನಾಥ್ ಸೆಲ್ಫಿ
Follow us
|

Updated on: Dec 29, 2023 | 6:29 PM

ದೆಹಲಿ ಡಿಸೆಂಬರ್ 29: ಉತ್ತರ ಪ್ರದೇಶ (Uttar Pradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಸಾರ್ವಜನಿಕ ರ‍್ಯಾಲಿ ನಡೆಸುವ ಅಯೋಧ್ಯೆಯ ಮೈದಾನವನ್ನು ಪರಿಶೀಲಿಸಿದ್ದಾರೆ. ಅಲ್ಲಿ ಮುಖ್ಯಮಂತ್ರಿಯೂ ಸೆಲ್ಫಿ ತೆಗೆದುಕೊಳ್ಳುತ್ತಿರುವುದು ಕಂಡು ಬಂತು. ನಾಳೆ (ಶನಿವಾರ) ಪ್ರಧಾನಿಯವರ ಭೇಟಿಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಇಂದು ರಾತ್ರಿ ಅಯೋಧ್ಯೆಯಲ್ಲಿ ತಂಗಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನವೀಕರಣಗೊಂಡ ಅಯೋಧ್ಯೆ ರೈಲು ನಿಲ್ದಾಣ ಮತ್ತು ಹೊಸ ವಿಮಾನ ನಿಲ್ದಾಣವನ್ನು ಉದ್ಘಾಟಿಸಲು ಪ್ರಧಾನಿ ಮೋದಿ ಶನಿವಾರ ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ. ವಿಮಾನ ನಿಲ್ದಾಣದ ಬಳಿ ಸಾರ್ವಜನಿಕ ರ‍್ಯಾಲಿಯನ್ನು ಉದ್ದೇಶಿಸಿ ಅವರು ಮಾತನಾಡಲಿದ್ದಾರೆ. ಪ್ರಧಾನಿಯವರು ಬೆಳಗ್ಗೆ 10:45 ರ ಸುಮಾರಿಗೆ ಅಯೋಧ್ಯೆ ವಿಮಾನ ನಿಲ್ದಾಣವನ್ನು ತಲುಪುವ ನಿರೀಕ್ಷೆಯಿದೆ. ವಿಮಾನ ನಿಲ್ದಾಣದಲ್ಲಿ ಬಂದಿಳಿದ ನಂತರ ನೇರವಾಗಿ ಅಯೋಧ್ಯೆ ರೈಲು ನಿಲ್ದಾಣಕ್ಕೆ ತೆರಳಿ ಅಲ್ಲಿ ನವೀಕರಣಗೊಂಡ ರೈಲು ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ. ನಂತರ ಅವರು ಹೊಸದಾಗಿ ನಿರ್ಮಿಸಲಾದ ವಿಮಾನ ನಿಲ್ದಾಣವನ್ನು ಉದ್ಘಾಟಿಸುತ್ತಾರೆ. ಇದಾದ ಬಳಿಕ ‘ಜನಸಭೆ’ (ಸಾರ್ವಜನಿಕ ರ್ಯಾಲಿ) ಅನ್ನು ಉದ್ದೇಶಿಸಿ ಮಾತನಾಡುತ್ತಾರೆ ಎಂದು ಅಯೋಧ್ಯೆಯ ವಿಭಾಗೀಯ ಆಯುಕ್ತ ಗೌರವ್ ದಯಾಳ್ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದರು.

ಸುಮಾರು ಒಂದು ಗಂಟೆ ನಡೆಯುವ ರ‍್ಯಾಲಿಗೆ ಸುಮಾರು 1.5 ಲಕ್ಷ ಜನರು ಸೇರುವ ನಿರೀಕ್ಷೆಯಿದೆ ಎಂದು ಅವರು ಹೇಳಿದರು.

ವಿಮಾನ ನಿಲ್ದಾಣ ಮತ್ತು ರೈಲು ನಿಲ್ದಾಣದ ನಡುವೆ ಪ್ರಧಾನಿ ಮೋದಿ ರೋಡ್‌ಶೋ ನಡೆಸಲಿದ್ದು, ಅಯೋಧ್ಯೆಯ ಜನರನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪಿಐಟಿ ವರದಿ ಮಾಡಿದೆ.

ತಮ್ಮ ಅಯೋಧ್ಯೆ ಭೇಟಿಯ ಸಂದರ್ಭದಲ್ಲಿ, ಪ್ರಧಾನಿ ಮೋದಿ ಅವರು ಎರಡು ಹೊಸ ಅಮೃತ್ ಭಾರತ್ ಮತ್ತು ಆರು ಹೊಸ ವಂದೇ ಭಾರತ್ ರೈಲುಗಳನ್ನು ಸಹ ಫ್ಲ್ಯಾಗ್ ಆಫ್ ಮಾಡಲಿದ್ದಾರೆ ಎಂದು ಪ್ರಧಾನಿ ಕಚೇರಿ ಗುರುವಾರ ತಿಳಿಸಿದೆ.

ಇದನ್ನೂ ಓದಿ: ಪ್ರಧಾನಿ ನರೇಂದ್ರ ಮೋದಿಯವರ ಯೂಟ್ಯೂಬ್ ಚಾನೆಲ್​​ಗೆ 2 ಕೋಟಿ ಚಂದಾದಾರರು

ಪ್ರಧಾನಿ ಮೋದಿ ಅವರು ಅಯೋಧ್ಯೆಯಲ್ಲಿ ನಾಗರಿಕ ಸೌಲಭ್ಯಗಳನ್ನು ನವೀಕರಿಸಲು ಮತ್ತು ವಿಶ್ವದರ್ಜೆಯ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ₹ 11,100 ಕೋಟಿಗೂ ಹೆಚ್ಚು ಮೌಲ್ಯದ ಯೋಜನೆಗಳನ್ನು ಮತ್ತು ಉತ್ತರ ಪ್ರದೇಶದ ಇತರ ಭಾಗಗಳಿಗೆ ₹ 4,600 ಕೋಟಿಗೂ ಹೆಚ್ಚು ಮೌಲ್ಯದ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಮುಂಬರುವ ರಾಮಮಂದಿರದ ‘ಪ್ರಾಣ ಪ್ರತಿಷ್ಠಾ’ (ಪ್ರತಿಷ್ಠಾಪನೆ)ಗೆ ಒಂದು ತಿಂಗಳ ಮುಂಚೆಯೇ ಪ್ರಧಾನಿ ಮೋದಿಯವರು ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ.

ಅಯೋಧ್ಯೆಯಲ್ಲಿ ಪ್ರಸ್ತುತ ಭವ್ಯವಾದ ರಾಮ ಮಂದಿರ ನಿರ್ಮಾಣ ಹಂತದಲ್ಲಿದ್ದು, ಜನವರಿ 22 ರಂದು ಉದ್ಘಾಟನಾ ಸಮಾರಂಭನಡೆಯಲಿದ್ದು, ಇದರಲ್ಲಿ ಪ್ರಧಾನಿ ಭಾಗವಹಿಸಲಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ