ಉತ್ತರ ಪ್ರದೇಶ: ಕತ್ತು ಸೀಳಿದ ಸ್ಥಿತಿಯಲ್ಲಿ ಒಬಿಸಿ ನಾಯಕಿಯ ಶವ ಪತ್ತೆ

ಜಮೀನು ವಿವಾದದ ಹಿನ್ನೆಲೆಯಲ್ಲಿ ಓಂ ಪ್ರಕಾಶ್ ರಾಜ್‌ಭರ್ ಅವರ ಸುಹೇಲ್‌ದೇವ್ ಭಾರತೀಯ ಸಮಾಜ ಪಕ್ಷದ ನಾಯಕಿಯನ್ನು ಹತ್ಯೆ ಮಾಡಲಾಗಿದೆ.

ಉತ್ತರ ಪ್ರದೇಶ: ಕತ್ತು ಸೀಳಿದ ಸ್ಥಿತಿಯಲ್ಲಿ ಒಬಿಸಿ ನಾಯಕಿಯ ಶವ ಪತ್ತೆ
ಅಪರಾಧ
Follow us
ನಯನಾ ರಾಜೀವ್
|

Updated on: Mar 11, 2024 | 11:31 AM

ಓಂ ಪ್ರಕಾಶ್ ರಾಜ್‌ಭರ್ ಅವರ ಸುಹೇಲ್‌ದೇವ್ ಭಾರತೀಯ ಸಮಾಜ ಪಕ್ಷದ (ಎಸ್‌ಬಿಎಸ್‌ಪಿ) ಸ್ಥಳೀಯ ನಾಯಕಿ ನಂದಿನಿ ರಾಜ್‌ಭರ್ ಅವರನ್ನು ಉತ್ತರ ಪ್ರದೇಶದ ಸಂತ ಕಬೀರ್ ನಗರ ಜಿಲ್ಲೆಯಲ್ಲಿ ಜಮೀನು ವಿವಾದದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಕತ್ತು ಕೊಯ್ದು ಹತ್ಯೆ ಮಾಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಭಾನುವಾರ ಅವರ ಮನೆಯಲ್ಲೇ ಕೊಲೆ ನಡೆದಿದೆ. ಕೊಲೆ ಪ್ರಕರಣದಲ್ಲಿ ಪೊಲೀಸರು ಐವರನ್ನು ಆರೋಪಿಗಳೆಂದು ಹೆಸರಿಸಿದ್ದು, ಈ ಪೈಕಿ ಮೂವರು – ಆನಂದ್ ಯಾದವ್, ಧ್ರುವ ಚಂದ್ರ ಯಾದವ್ ಮತ್ತು ಒಬ್ಬ ಮಹಿಳೆಯನ್ನು ಬಂಧಿಸಲಾಗಿದೆ.

ಮಾಹಿತಿ ಪ್ರಕಾರ ನಂದಿನಿ ರಾಜ್‌ಭರ್ ಅವರ ಪತಿಯ ಚಿಕ್ಕಪ್ಪ ಬಾಲಕೃಷ್ಣ ಎಂಬುವರಿಗೆ ಸೇರಿದ ಜಾಗವನ್ನು ಸ್ಥಳೀಯ ಭೂಮಾಫಿಯಾ ಅಕ್ರಮವಾಗಿ ವಶಪಡಿಸಿಕೊಂಡಿದ್ದು, ಅದರ ಸಂಪೂರ್ಣ ಹಣವನ್ನು ಪಾವತಿಸದೆ ಅದನ್ನು ನೋಂದಾಯಿಸಿದ್ದರು. ಇದರಿಂದಾಗಿ ಫೆ.29ರಂದು ಬಾಲಕೃಷ್ಣ ಆತ್ಮಹತ್ಯೆ ಮಾಡಿಕೊಂಡಿದ್ದು, ರೈಲ್ವೆ ಹಳಿಯಲ್ಲಿ ಮೃತದೇಹ ಪತ್ತೆಯಾಗಿದೆ.

ಮತ್ತಷ್ಟು ಓದಿ: ಕೋಪದಲ್ಲಿ ಮಗನನ್ನು ಹುಚ್ಚ ಎಂದು ಕರೆದಿದ್ದಕ್ಕೆ ತಾಯಿಯನ್ನೇ ಹತ್ಯೆ ಮಾಡಿದ ಮಾನಸಿಕ ಅಸ್ವಸ್ಥ

ಮೂವರು ಭೂ ಮಾಫಿಯಾಗಳಾದ ಶ್ರವಣ್ ಯಾದವ್, ಧ್ರುವ ಚಂದ್ರ ಯಾದವ್ ಮತ್ತು ಪನ್ನೆ ಲಾಲ್ ಯಾದವ್ ಮಾಡಿರುವ ವಂಚನೆಯ ವಿರುದ್ಧ ನಂದಿನಿ ರಾಜ್‌ಭರ್ ಮತ್ತು ಬಾಲಕೃಷ್ಣ ಲಾಬಿ ನಡೆಸುತ್ತಿದ್ದರು. ಪನ್ನೆ ಲಾಲ್ ಯಾದವ್ ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಲಾಯಿತು. ಕೊಲೆಯಾಗುವ ಮುನ್ನ ನಂದಿನಿ ರಾಜ್‌ಭರ್‌ ಅವರು ಬಾಲಕೃಷ್ಣ ಅವರ ಜಮೀನನ್ನು ವಶಪಡಿಸಿಕೊಂಡಿರುವರನ್ನು ಬಂಧಿಸುವಂತೆ ಒತ್ತಾಯಿಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ