ಉತ್ತರ ಪ್ರದೇಶ: ಮದ್ಯದ ಅಮಲಿನಲ್ಲಿ ವಿದ್ಯುತ್ ಕಂಬ ಹತ್ತಿ ಹೈವೋಲ್ಟೇಜ್ ತಂತಿ ಸ್ಪರ್ಶಿಸಿದ ವ್ಯಕ್ತಿ, ಮುಂದೇನಾಯ್ತು?

ಮದ್ಯದ ಅಮಲಿನಲ್ಲಿ ವ್ಯಕ್ತಿಯೊಬ್ಬ ವಿದ್ಯುತ್ ಕಂಬ ಹತ್ತಿ ಹೈವೋಲ್ಟೇಜ್ ತಂತಿ ಸ್ಪರ್ಶಿಸಿದ ಪರಿಣಾಮ ವಿದ್ಯುತ್ ಪ್ರವಹಿಸಿ ಸಾವು ಬದುಕಿನ ನಡುವೆ ಹೋರಾಡುತ್ತಿರುವ ಘಟನೆ ಉತ್ತರ ಪ್ರದೇಶದ ಗೌತಮ್​ ಬುದ್ಧ ನಗರದಲ್ಲಿ ನಡೆದಿದೆ.

ಉತ್ತರ ಪ್ರದೇಶ: ಮದ್ಯದ ಅಮಲಿನಲ್ಲಿ ವಿದ್ಯುತ್ ಕಂಬ ಹತ್ತಿ ಹೈವೋಲ್ಟೇಜ್ ತಂತಿ ಸ್ಪರ್ಶಿಸಿದ ವ್ಯಕ್ತಿ, ಮುಂದೇನಾಯ್ತು?
ವಿದ್ಯುತ್
Image Credit source: India Today

Updated on: Jan 09, 2024 | 2:04 PM

ಮದ್ಯದ ಅಮಲಿನಲ್ಲಿ ವ್ಯಕ್ತಿಯೊಬ್ಬ ವಿದ್ಯುತ್ ಕಂಬ ಹತ್ತಿ ಹೈವೋಲ್ಟೇಜ್ ತಂತಿ ಸ್ಪರ್ಶಿಸಿದ ಪರಿಣಾಮ ವಿದ್ಯುತ್ ಪ್ರವಹಿಸಿ ಸಾವು ಬದುಕಿನ ನಡುವೆ ಹೋರಾಡುತ್ತಿರುವ ಘಟನೆ ಉತ್ತರ ಪ್ರದೇಶದ ಗೌತಮ್​ ಬುದ್ಧ ನಗರದಲ್ಲಿ ನಡೆದಿದೆ. ವ್ಯಕ್ತಿ ಕುಡಿದ ಅಮಲಿನಲ್ಲಿದ್ದ ಎಂಬುದು ತಿಳಿದುಬಂದಿದೆ,  ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ವೈರಲ್ ವೀಡಿಯೊದಲ್ಲಿ, ಹಲವಾರು ಜನರು ಕಂಬದಿಂದ ಕೆಳಗಿಳಿಯುವಂತೆ ಒತ್ತಾಯಿಸುವುದನ್ನು ಕಾಣಬಹುದು.

ನಂತರ ಅವರನ್ನು ಟ್ರಾಮಾ ಸೆಂಟರ್‌ಗೆ ದಾಖಲಿಸಲಾಯಿತು. ವಿದ್ಯುತ್ ಸ್ಪರ್ಶಿಸಿದ ಬಳಿಕ ಕೆಳಗೆ ಬಿದ್ದಿದ್ದಾರೆ. ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಪಕ್ಕದ ಬುಲಂದ್‌ಶಹರ್ ಜಿಲ್ಲೆಯ ನಿವಾಸಿಯಾದ ನೋಶಾದ್, ಜೆವಾರ್‌ನ ದೌಜಿ ಮಂದಿರದ ಬಳಿ ಮದ್ಯದ ಅಮಲಿನಲ್ಲಿ ವಿದ್ಯುತ್ ಕಂಬವನ್ನು ಹತ್ತಿ ವಿದ್ಯುತ್ ತಂತಿಯನ್ನು ಹಿಡಿದಿದ್ದಾರೆ, ಇದರಿಂದಾಗಿ ವಿದ್ಯುತ್ ಆತನ ದೇಹದಲ್ಲಿ ಪ್ರವಹಿಸಿತ್ತು.

ಮತ್ತಷ್ಟು ಓದಿ: ಚಿಕ್ಕೋಡಿ‌: ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಕಂಬದ ಮೇಲೆ ವ್ಯಕ್ತಿ ಸಾವು, ಕುಟುಂಬಸ್ಥರ ಆಕ್ರಂದನ

ಟ್ರಾನ್ಸ್‌ಫಾರ್ಮರ್‌ನ ಪಕ್ಕದಲ್ಲಿ ಸುಮಾರು 25 ಅಡಿ ಎತ್ತರದಿಂದ ಕಂಬದಿಂದ ವ್ಯಕ್ತಿ ಬೀಳುತ್ತಿರುವ ವಿಡಿಯೋ ವೈರಲ್ ಆಗಿದೆ.
ಗಾಯಗೊಂಡ ಸ್ಥಿತಿಯಲ್ಲಿದ್ದ ಅವರನ್ನು ಕೈಲಾಶ್ ಆಸ್ಪತ್ರೆಗೆ ದಾಖಲಿಸಿದ ಪೊಲೀಸರು ಅಲ್ಲಿಂದ ಟ್ರಾಮಾ ಸೆಂಟರ್‌ಗೆ ಕಳುಹಿಸಿದ್ದಾರೆ.  ಸದ್ಯ ಅವರ ಸ್ಥಿತಿ ಸ್ಥಿರವಾಗಿದೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ. ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದರು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ