Uttar Pradesh: ಅತಿಯಾದ ತಾಪಮಾನದಿಂದಾಗಿ 72 ಗಂಟೆಗಳಲ್ಲಿ 54 ಮಂದಿ ಸಾವು, 400 ಮಂದಿ ಅಸ್ವಸ್ಥ

ಉತ್ತರ ಪ್ರದೇಶ(Uttar Pradesh)ದಲ್ಲಿ ಅತಿಯಾದ ಶಾಖದಿಂದಾಗಿ 54 ಮಂದಿ ಸಾವನ್ನಪ್ಪಿದ್ದಾರೆ. ಕಳೆದ ಮೂರು ದಿನಗಳಲ್ಲಿ 400 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

Uttar Pradesh: ಅತಿಯಾದ ತಾಪಮಾನದಿಂದಾಗಿ 72 ಗಂಟೆಗಳಲ್ಲಿ 54 ಮಂದಿ ಸಾವು, 400 ಮಂದಿ ಅಸ್ವಸ್ಥ
ಶಾಖImage Credit source: Business Standard
Follow us
ನಯನಾ ರಾಜೀವ್
|

Updated on: Jun 18, 2023 | 12:56 PM

ಉತ್ತರ ಪ್ರದೇಶ(Uttar Pradesh)ದಲ್ಲಿ ಅತಿಯಾದ ಶಾಖದಿಂದಾಗಿ 54 ಮಂದಿ ಸಾವನ್ನಪ್ಪಿದ್ದಾರೆ. ಕಳೆದ ಮೂರು ದಿನಗಳಲ್ಲಿ 400 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲಾ ಆಸ್ಪತ್ರೆಯಲ್ಲಿ ಕಳೆದ ಮೂರು ದಿನಗಳಲ್ಲಿ 54 ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 400 ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಾವಿಗೆ ಬೇರೆ ಬೇರೆ ಕಾರಣಗಳಿದ್ದರೂ, ತೀವ್ರ ಶಾಖವೂ ಒಂದು ಕಾರಣ ಎಂದು ವೈದ್ಯರು ತಿಳಿಸಿದ್ದಾರೆ.

ತೀವ್ರ ಶಾಖದಿಂದಾಗಿ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಹೆಚ್ಚುತ್ತಿದೆ ಎಂದು ಅವರು ಹೇಳಿದರು. ತೀವ್ರವಾದ ಶಾಖದ ಅಲೆಯು ಉತ್ತರ ಪ್ರದೇಶದವನ್ನು ಆವರಿಸಿದೆ, ಹೆಚ್ಚಿನ ಸ್ಥಳಗಳು ಗರಿಷ್ಠ ಉಷ್ಣಾಂಶ 40 ಡಿಗ್ರಿಗಳಿಗಿಂತ ಹೆಚ್ಚಿದೆ.

ಹಠಾತ್ ಸಾವುಗಳು ಮತ್ತು ಜ್ವರ, ಉಸಿರಾಟದ ತೊಂದರೆ ಮತ್ತು ಇತರ ಸಮಸ್ಯೆಗಳಿಂದ ಆಸ್ಪತ್ರೆಗಳಿಗೆ ದಾಖಲಾಗುತ್ತಿದ್ದಾರೆ. ಜೂನ್ 15 ರಂದು 23 ಮಂದಿ ಮೃತಪಟ್ಟಿದ್ದಾರೆ, ಮರುದಿನ 20 ಮಂದಿ, ನಿನ್ನೆ 11 ಮಂದಿ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾ ಆಸ್ಪತ್ರೆ ಬಲ್ಲಿಯಾ ಪ್ರಭಾರಿ ವೈದ್ಯಕೀಯ ಅಧೀಕ್ಷಕ ಎಸ್‌ಕೆ ಯಾದವ್ ತಿಳಿಸಿದ್ದಾರೆ.

ಮತ್ತಷ್ಟು ಓದಿ: ಬೆಂಗಳೂರಿನಲ್ಲಿ ದಾಖಲೆ ಮಟ್ಟದಲ್ಲಿ ತಾಪಮಾನ ಏರಿಕೆ; ಇದಕ್ಕೆ ಸಂಶೋಧಕರು ನೀಡಿದ ಕಾರಣ ಇದು

ಅಜಂಗಢ ಸರ್ಕಲ್‌ನ ಹೆಚ್ಚುವರಿ ಆರೋಗ್ಯ ನಿರ್ದೇಶಕ ಡಾ.ಬಿ.ಪಿ.ತಿವಾರಿ ಮಾತನಾಡಿ, ಲಕ್ನೋದಿಂದ ತಂಡವೊಂದು ಬರುತ್ತಿದ್ದು, ಕಾರಣವನ್ನು ಪತ್ತೆ ಹಚ್ಚುತ್ತಿದೆ. ವಿಪರೀತ ಸೆಕೆಯು ಉಸಿರಾಟದ ರೋಗಿಗಳು, ಮಧುಮೇಹ ರೋಗಿಗಳು ಮತ್ತು ರಕ್ತದೊತ್ತಡ ರೋಗಿಗಳಿಗೆ ಹೆಚ್ಚಿನ ಅಪಾಯವಾಗುತ್ತದೆ.

ಜಿಲ್ಲಾಸ್ಪತ್ರೆಯಲ್ಲಿ ನೂಕು ನುಗ್ಗಲು ಉಂಟಾಗಿದ್ದು, ರೋಗಿಗಳು ಸ್ಟ್ರೆಚರ್‌ಗಳನ್ನು ಪಡೆಯಲು ಸಾಧ್ಯವಾಗುತ್ತಿಲ್ಲ ಮತ್ತು ಅನೇಕ ಅಟೆಂಡರ್‌ಗಳು ತಮ್ಮ ರೋಗಿಗಳನ್ನು ತುರ್ತು ವಿಭಾಗಕ್ಕೆ ತಮ್ಮ ಹೆಗಲ ಮೇಲೆ ಹೊತ್ತುಕೊಂಡು ಹೋಗುತ್ತಿದ್ದಾರೆ. ಹೆಚ್ಚುವರಿ ಆರೋಗ್ಯ ನಿರ್ದೇಶಕರು, ಹತ್ತು ರೋಗಿಗಳು ಒಂದೇ ಸಮಯದಲ್ಲಿ ಬಂದರೆ ಕಷ್ಟವಾಗುತ್ತದೆ ಎಂದು ಹೇಳಿಕೊಂಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್