ಮಗಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದು 2 ತಿಂಗಳಾದರೂ ಎಫ್​ಐಆರ್​ ದಾಖಲಾಗಿಲ್ಲ, ನೋವಿನಲ್ಲಿ ತಂದೆ ಆತ್ಮಹತ್ಯೆ

ಒಂದೆಡೆ ಮಗಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎನ್ನುವ ನೋವು ಇನ್ನೊಂದೆಡೆ ಪೊಲೀಸರು ಎಫ್​ಐಆರ್​ ದಾಖಲಿಸಲು ವಿಳಂಬ ಮಾಡಿದ ಪರಿಣಾಮ ತಂದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಮಗಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದು 2 ತಿಂಗಳಾದರೂ ಎಫ್​ಐಆರ್​ ದಾಖಲಾಗಿಲ್ಲ, ನೋವಿನಲ್ಲಿ ತಂದೆ ಆತ್ಮಹತ್ಯೆ
Crime Scene
Follow us
ನಯನಾ ರಾಜೀವ್
|

Updated on: Jun 06, 2023 | 9:16 AM

ಒಂದೆಡೆ ಮಗಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎನ್ನುವ ನೋವು ಇನ್ನೊಂದೆಡೆ ಪೊಲೀಸರು ಎಫ್​ಐಆರ್​ ದಾಖಲಿಸಲು ವಿಳಂಬ ಮಾಡಿದ ಪರಿಣಾಮ ತಂದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಜಲೌನ್‌ನಲ್ಲಿ ಈ ಘಟನೆ ನಡೆದಿದ್ದು, ನ್ನ ಮಗಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದು ಎರಡು ತಿಂಗಳು ಕಳೆದರೂ ಇನ್ನೂ ಎಫ್​ಐಆರ್​ ದಾಖಲಿಸದ ಕಾರಣ ನೊಂದು ತಂದೆ ಆತ್ಮಹತ್ಯೆಗೆ ಶರಣಾಗಿದ್ದಾರೆ.

ವಿವರಗಳ ಪ್ರಕಾರ, ಅದೇ ಗ್ರಾಮದ ಪುರುಷರ ಗುಂಪೊಂದು ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದೆ. ಇದಲ್ಲದೆ, ಪೊಲೀಸರಿಗೆ ದೂರು ನೀಡಿದರೆ ಕೊಲೆ ಮಾಡುವುದಾಗಿ ಆರೋಪಿಗಳು ಬಾಲಕಿಗೆ ಬೆದರಿಕೆ ಹಾಕಿದ್ದರು. ಪಂಜಾಬ್‌ನಲ್ಲಿ ಕೆಲಸ ಮಾಡುತ್ತಿದ್ದ ಆಕೆಯ ತಂದೆ, ಬಾಲಕಿಯು ತನಗಾಗಿರುವ ಸಂಕಟವನ್ನು ವಿವರಿಸಿದ ನಂತರ ತನ್ನ ಊರಿಗೆ ಬಂದನು.

ದೂರು ದಾಖಲಿಸಿಕೊಳ್ಳಲು ತಂದೆ ಮತ್ತು ಮಗಳು ಇಬ್ಬರೂ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದರು. ಆದರೆ, ಆ ವ್ಯಕ್ತಿಯನ್ನು ಬೇರೊಂದು ಪ್ರಕರಣದಲ್ಲಿ ಸಿಲುಕಿಸುವುದಾಗಿ ಹೇಳಿ ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿ ಅವರಿಗೆ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

ಮತ್ತಷ್ಟು ಓದಿ: ಮದ್ವೆಗೆ 5 ದಿನ ಮೊದಲೇ ಯುವಕನ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಮಹಿಳೆಯೊಂದಿಗಿನ ಲವ್ವಿಡವ್ವಿಯೇ ಕಾರಣ

ಆರೋಪಿಗಳ ವಿರುದ್ಧ ಯಾವುದೇ ದೂರು ದಾಖಲಾಗದ ತಿಂಗಳ ನಂತರ ಸಾಮೂಹಿಕ ಅತ್ಯಾಚಾರ ಸಂತ್ರಸ್ತೆಯ ತಂದೆ ತನ್ನ ಜೀವನವನ್ನು ಅಂತ್ಯಗೊಳಿಸಿದ್ದಾರೆ. ಇದೇ ವೇಳೆ ಮೃತನ ಸಂಬಂಧಿಕರು ಹಾಗೂ ನೆರೆಹೊರೆಯವರು ಪ್ರತಿಭಟನೆ ನಡೆಸಿ, ಪ್ರಕರಣದ ಬಗ್ಗೆ ಪೊಲೀಸರ ನಿರ್ಲಕ್ಷ್ಯದ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದರು.

ಘಟನೆಯ ನಂತರ ಸ್ಥಳಕ್ಕೆ ಆಗಮಿಸಿದ ಜಲೌನ್ ಎಎಸ್ಪಿ ಅಸೀಮ್ ಚೌಧರಿ ಆರೋಪಿ ಪೊಲೀಸ್ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಗ್ರಾಮಸ್ಥರಿಗೆ ಭರವಸೆ ನೀಡಿದರು. ಎರಡು ತಿಂಗಳ ಹಿಂದೆ ಅಕೋಧಿ ಗ್ರಾಮದಲ್ಲಿ ಅಪ್ರಾಪ್ತ ಮಹಿಳೆಯ ಮೇಲೆ ಅತ್ಯಾಚಾರ ನಡೆದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ