- TV9 Kannada National News Uttar Pradesh: Fierce fire in electronic showroom, four including women died, loss of crores
Uttar Pradesh: ಎಲೆಕ್ಟ್ರಾನಿಕ್ಸ್ ಶೋರೂಂನಲ್ಲಿ ಅಗ್ನಿ ಅವಘಡ, ನಾಲ್ವರು ಸಜೀವ ದಹನ
ಉತ್ತರ ಪ್ರದೇಶದ ಝಾನ್ಸಿಯ ಎಲೆಕ್ಟ್ರಾನಿಕ್ಸ್ ಶೋ ರೂಂನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ನಾಲ್ವರು ಸಜೀವ ದಹನವಾಗಿದ್ದಾರೆ. ಎಲೆಕ್ಟ್ರಾನಿಕ್ಸ್ ಶೋರೂಂನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮಹಿಳೆ ಸೇರಿದಂತೆ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ.

Updated on: Jul 04, 2023 | 7:18 AM
ಉತ್ತರ ಪ್ರದೇಶದ ಝಾನ್ಸಿಯ ಎಲೆಕ್ಟ್ರಾನಿಕ್ಸ್ ಶೋ ರೂಂನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ನಾಲ್ವರು ಸಜೀವ ದಹನವಾಗಿದ್ದಾರೆ. ಎಲೆಕ್ಟ್ರಾನಿಕ್ಸ್ ಶೋರೂಂನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮಹಿಳೆ ಸೇರಿದಂತೆ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ. ಸಿಪ್ರಿ ಬಜಾರ್ ಪ್ರದೇಶದಲ್ಲಿರುವ ಮೂರು ಅಂತಸ್ತಿನ ಎಲೆಕ್ಟ್ರಾನಿಕ್ಸ್ ಶೋರೂಂ ಮತ್ತು ಕ್ರೀಡಾ ಅಂಗಡಿಗೆ ಬೆಂಕಿ ಆವರಿಸಿದೆ. ಪೊಲೀಸರು ಅಗ್ನಿಶಾಮಕ ದಳದೊಂದಿಗೆ ಸುಮಾರು 10 ಗಂಟೆಗಳ ಕಾಲ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಮೂವರು ಸಜೀವ ದಹನವಾಗಿದ್ದು, ಮತ್ತೊಬ್ಬ ಮಹಿಳೆ ತೀರಾ ಸುಟ್ಟಗಾಯಗಳಿಂದ ಬಳಲುತ್ತಿದ್ದು ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್ ಇಂಡಿಯಾ ಕನ್ನಡ ವೆಬ್ಸೈಟ್ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್ನಲ್ಲಿ ಸೀನಿಯರ್ ಸಬ್ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.
Read More