ಉತ್ತರ ಪ್ರದೇಶ: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಐವರು ಸಾವು, ಹಲವು ಕಾರ್ಮಿಕರಿಗೆ ಗಾಯ

ಉತ್ತರ ಪ್ರದೇಶದ ಕೌಶಂಬಿಯಲ್ಲಿ ಭಾರೀ ಅಪಘಾತ ಸಂಭವಿಸಿದೆ. ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, 4 ಮಂದಿ ಸಾವನ್ನಪ್ಪಿದ್ದಾರೆ. ಈ ಅಪಘಾತದ ಬಗ್ಗೆ ಸಿಎಂ ಯೋಗಿ ಆದಿತ್ಯನಾಥ್ ಮಾಹಿತಿ ಪಡೆದಿದ್ದಾರೆ.

ಉತ್ತರ ಪ್ರದೇಶ: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಐವರು ಸಾವು, ಹಲವು ಕಾರ್ಮಿಕರಿಗೆ ಗಾಯ
ಸ್ಫೋಟ
Follow us
ನಯನಾ ರಾಜೀವ್
|

Updated on: Feb 25, 2024 | 2:08 PM

ಉತ್ತರ ಪ್ರದೇಶ(Uttar Pradesh)ದ ಕೌಶಂಬಿಯಲ್ಲಿರುವ ಪಟಾಕಿ ಕಾರ್ಖಾನೆ(Firecracker Factory) ಯಲ್ಲಿ ಭಾನುವಾರ ಸ್ಫೋಟ ಸಂಭವಿಸಿದೆ. ಜಿಲ್ಲೆಯ ಕೊಖ್ರಾಜ್ ಪೊಲೀಸ್ ಠಾಣೆ ವ್ಯಾಪ್ತಿಯ ಭಾರ್ವಾರಿ ಪಟ್ಟಣದ ಶರಾಫತ್ ಅಲಿಯಲ್ಲಿ ಈ ಘಟನೆ ನಡೆದಿದೆ. ಸ್ಥಳೀಯರಿಂದ ಬಂದ ಮಾಹಿತಿ ಪ್ರಕಾರ ಇಲ್ಲಿ ಮದುವೆಗೆ ಪಟಾಕಿ ತಯಾರಿಸಲಾಗುತ್ತಿತ್ತು. ಈ ಘಟನೆಯಲ್ಲಿ ಐವರು ಸಾವನ್ನಪ್ಪಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ಪಡೆದ ತಕ್ಷಣ ಎಸ್ಪಿ ಮತ್ತು ಅನೇಕ ಪೊಲೀಸ್ ಠಾಣೆಗಳ ಪೊಲೀಸರು ಅಲ್ಲಿಗೆ ತಲುಪಿದ್ದಾರೆ.

ಎಸ್ಪಿ ಬ್ರಿಜೇಶ್ ಶ್ರೀವಾಸ್ತವ ಸೇರಿದಂತೆ ಹಲವು ಪೊಲೀಸ್ ಠಾಣೆಗಳ ಪಡೆಗಳು ಘಟನಾ ಸ್ಥಳದಲ್ಲಿದ್ದಾರೆ. ಈ ಘಟನೆ ಬಗ್ಗೆ ಸಿಎಂ ಯೋಗಿ ಆದಿತ್ಯನಾಥ್ ಕೂಡ ಮಾಹಿತಿ ಪಡೆದಿದ್ದಾರೆ. ಈ ಘಟನೆ ಕುರಿತು ಮುಖ್ಯಮಂತ್ರಿಗಳಿಗೆ ವಿವರವಾದ ಮಾಹಿತಿ ನೀಡಲಾಗಿದೆ. ಮೃತರ ಕುಟುಂಬಕ್ಕೆ ಸಿಎಂ ಯೋಗಿ ಸಂತಾಪ ಸೂಚಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿ ಪರಿಹಾರ ಕಾರ್ಯ ಚುರುಕುಗೊಳಿಸುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಗಾಯಾಳುಗಳು ಆಸ್ಪತ್ರೆಗೆ ದಾಖಲು  ಈ ಘಟನೆಯಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆಗೆ ಎಸ್ಪಿ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಸ್ಥಳೀಯ ಜನರ ಪ್ರಕಾರ, ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟವು ಎಷ್ಟು ಭೀಕರವಾಗಿದೆ ಎಂದರೆ ಪಟಾಕಿಗಳ ತುಂಡುಗಳು ಹಲವಾರು ಕಿಲೋಮೀಟರ್ ದೂರ ಹಾರಿಹೋಗಿವೆ. ಘಟನೆಗೆ ಸಂಬಂಧಿಸಿದಂತೆ ಮಾಹಿತಿ ನೀಡಿದ ಎಸ್ಪಿ ಬ್ರಿಜೇಶ್ ಕುಮಾರ್ ಶ್ರೀವಾಸ್ತವ ಮಾತನಾಡಿ, ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಪಘಾತದಲ್ಲಿ 5 ಜನರು ಸಾವನ್ನಪ್ಪಿದ್ದಾರೆ, ಕೆಲವರು ಗಾಯಗೊಂಡಿದ್ದಾರೆ, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಮತ್ತಷ್ಟು ಓದಿ: West Bengal: ಪಶ್ಚಿಮ ಬಂಗಾಳದ ಪಟಾಕಿ ಕಾರ್ಖಾನೆ ಸ್ಫೋಟ, ಸಾವಿನ ಸಂಖ್ಯೆ 9ಕ್ಕೆ ಏರಿಕೆ

ಈ ಘಟನೆಯಲ್ಲಿ ಇನ್ನೂ ಹಲವು ಮಂದಿ ಸಿಲುಕಿದ್ದು, ರಕ್ಷಿಸಲಾಗುತ್ತಿದೆ. ಪೊಲೀಸರು ಮತ್ತು ಸ್ಥಳೀಯ ರಕ್ಷಕರು ಕಾರ್ಯಾಚರಣೆಯಲ್ಲಿ ಸಹಾಯ ಮಾಡುತ್ತಿದ್ದಾರೆ. ಈ ಕಾರ್ಖಾನೆಯು ಪ್ರಯಾಗರಾಜ್ ಕಾನ್ಪುರ ಹೆದ್ದಾರಿಯ ಸಮೀಪದಲ್ಲಿದೆ. ಈ ಸ್ಫೋಟದ ಸದ್ದು ದೂರಕ್ಕೆ ಕೇಳಿಸಿತ್ತು ಎಂದು ಸ್ಥಳೀಯರು ಹೇಳುತ್ತಾರೆ. ಘಟನೆಯಿಂದ ಸಿಟ್ಟಿಗೆದ್ದ ಜನರು ಅಲ್ಲಿನ ಆಡಳಿತದ ವಿರುದ್ಧವೂ ಪ್ರತಿಭಟನೆ ನಡೆಸಿದ್ದಾರೆ. ಈ ಕಾರ್ಖಾನೆಯು ಕೌಶಲ್ ಅಲಿ ಎಂಬ ವ್ಯಕ್ತಿಯ ಒಡೆತನದಲ್ಲಿದೆ ಎಂದು ಹೇಳಲಾಗುತ್ತದೆ.

ಸ್ಥಳದ ವಿಡಿಯೋ

ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳದಲ್ಲಿದ್ದ ಅಗ್ನಿಶಾಮಕ ದಳದವರು ಬೆಂಕಿಯನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿದ್ದು, ಕಾರ್ಖಾನೆಯೊಳಗೆ ಸಿಲುಕಿರುವ ಕಾರ್ಮಿಕರನ್ನು ರಕ್ಷಿಸುವ ಪ್ರಯತ್ನಗಳು ನಡೆಯುತ್ತಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬ್ರ್ಯಾಂಡ್ ಬೆಂಗಳೂರು ಅಂದರೇನು ಅಂತ ಜನಕ್ಕೆ ಈಗ ಅರ್ಥವಾಗುತ್ತಿದೆ!
ಬ್ರ್ಯಾಂಡ್ ಬೆಂಗಳೂರು ಅಂದರೇನು ಅಂತ ಜನಕ್ಕೆ ಈಗ ಅರ್ಥವಾಗುತ್ತಿದೆ!
ಮಾಜಿ ಪ್ರಧಾನಿ ಒಬ್ಬ ಡಿಸಿಎಂ ಬಗ್ಗೆ ರೌಡಿ ಅಂತೆಲ್ಲ ಮಾತಾಡೋದು ಸರಿಯಲ್ಲ:ಶಾಸಕ
ಮಾಜಿ ಪ್ರಧಾನಿ ಒಬ್ಬ ಡಿಸಿಎಂ ಬಗ್ಗೆ ರೌಡಿ ಅಂತೆಲ್ಲ ಮಾತಾಡೋದು ಸರಿಯಲ್ಲ:ಶಾಸಕ
ದೇವರ ವಿಗ್ರಹ ವಿರೂಪಗೊಳಿಸಿ ವಿಕೃತಿ: ದೃಶ್ಯ ಸಿಸಿಟಿವಿಯಲ್ಲಿ ಸೆರೆ
ದೇವರ ವಿಗ್ರಹ ವಿರೂಪಗೊಳಿಸಿ ವಿಕೃತಿ: ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಒಬ್ಬ ಬೌಲರ್ ಮುಂದೆ ಶರಣಾದ ಇಡೀ ಕೇರಳ ತಂಡ
ಒಬ್ಬ ಬೌಲರ್ ಮುಂದೆ ಶರಣಾದ ಇಡೀ ಕೇರಳ ತಂಡ
ಆಯತಪ್ಪಿ ರೈಲಿಗೆ ಬೀಳ್ತಿದ್ದ ಪ್ರಯಾಣಿಕನ ಪಾಲಿಗೆ ದೇವರಾಗಿ ಬಂದ ಹೋಮ್​'ಗಾರ್ಡ
ಆಯತಪ್ಪಿ ರೈಲಿಗೆ ಬೀಳ್ತಿದ್ದ ಪ್ರಯಾಣಿಕನ ಪಾಲಿಗೆ ದೇವರಾಗಿ ಬಂದ ಹೋಮ್​'ಗಾರ್ಡ
ಕೇಂದ್ರದ ವಿಶೇಷ ವಿಮಾನ ಚೀನಾ ಕಳಿಸಿ ಪಿಪಿಈ ಕಿಟ್ ತರಿಸಲಾಗಿತ್ತು: ಸುಧಾಕರ್
ಕೇಂದ್ರದ ವಿಶೇಷ ವಿಮಾನ ಚೀನಾ ಕಳಿಸಿ ಪಿಪಿಈ ಕಿಟ್ ತರಿಸಲಾಗಿತ್ತು: ಸುಧಾಕರ್
ಮುಸ್ಲಿಮರ ಕೊಲ್ಲುವಂತಹ ದಿನ ಬರುತ್ತದೆ ಎಂದ ಈಶ್ವರಪ್ಪ ವಿರುದ್ಧ ಕೇಸ್ ಬುಕ್​!
ಮುಸ್ಲಿಮರ ಕೊಲ್ಲುವಂತಹ ದಿನ ಬರುತ್ತದೆ ಎಂದ ಈಶ್ವರಪ್ಪ ವಿರುದ್ಧ ಕೇಸ್ ಬುಕ್​!
ಚನ್ನಪಟ್ಟಣದಲ್ಲಿ ಯೋಗೇಶ್ವರ್​​ರನ್ನು ಎದುರಿಸುವವರಿಲ್ಲ: ಬಂಡಿಸಿದ್ದೇಗೌಡ
ಚನ್ನಪಟ್ಟಣದಲ್ಲಿ ಯೋಗೇಶ್ವರ್​​ರನ್ನು ಎದುರಿಸುವವರಿಲ್ಲ: ಬಂಡಿಸಿದ್ದೇಗೌಡ
ಸಿಎಂ ಹೀಗೆಲ್ಲ ಮಾತಾಡುತಿದ್ದರೆ ಜನ ತಲೆ ಕೆಟ್ಟಿದೆ ಅಂತಾರೆ: ಕುಮಾರಸ್ವಾಮಿ
ಸಿಎಂ ಹೀಗೆಲ್ಲ ಮಾತಾಡುತಿದ್ದರೆ ಜನ ತಲೆ ಕೆಟ್ಟಿದೆ ಅಂತಾರೆ: ಕುಮಾರಸ್ವಾಮಿ
ಟಿವಿ9 ಸ್ವೀಟ್ ಹೋಂ ರಿಯಲ್ ಎಸ್ಟೇಟ್ ಎಕ್ಸ್​ಪೋಗೆ ಚಾಲನೆ
ಟಿವಿ9 ಸ್ವೀಟ್ ಹೋಂ ರಿಯಲ್ ಎಸ್ಟೇಟ್ ಎಕ್ಸ್​ಪೋಗೆ ಚಾಲನೆ