ಇನ್ನೇನು ಅಂತ್ಯಕ್ರಿಯೆ ನಡೆಸಬೇಕು ಅನ್ನುವಷ್ಟರಲ್ಲಿ ಕಣ್ಣು ತೆರೆದ ಬಿಜೆಪಿ ಮುಖಂಡ

ಉತ್ತರ ಪ್ರದೇಶದ ಆಗ್ರಾದಲ್ಲಿ ಬಿಜೆಪಿಯ ಮಾಜಿ ಜಿಲ್ಲಾಧ್ಯಕ್ಷ ಮಹೇಶ್ ಬಾಘೇಲ್ ಅವರ ಆರೋಗ್ಯ ತೀವ್ರ ಹದಗೆಟ್ಟಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸ್ವಲ್ಪ ಸಮಯದ ನಂತರ ವೈದ್ಯರು ಬಾಘೇಲ್ ಅವರು ಮೃತಪಟ್ಟಿದ್ದಾರೆ, ಶವವನ್ನು ಮನೆಗೆ ತೆಗೆದುಕೊಂಡು ಹೋಗಿ ಎಂದು ಹೇಳಿಬಿಟ್ಟರು.

ಇನ್ನೇನು ಅಂತ್ಯಕ್ರಿಯೆ ನಡೆಸಬೇಕು ಅನ್ನುವಷ್ಟರಲ್ಲಿ ಕಣ್ಣು ತೆರೆದ ಬಿಜೆಪಿ ಮುಖಂಡ
ಮಹೇಶ್​ ಬಾಘೇಲ್
Follow us
|

Updated on:Aug 08, 2023 | 10:58 AM

ಉತ್ತರ ಪ್ರದೇಶದ ಆಗ್ರಾದಲ್ಲಿ ಬಿಜೆಪಿಯ ಮಾಜಿ ಜಿಲ್ಲಾಧ್ಯಕ್ಷ ಮಹೇಶ್ ಬಾಘೇಲ್ ಅವರ ಆರೋಗ್ಯ ತೀವ್ರ ಹದಗೆಟ್ಟಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸ್ವಲ್ಪ ಸಮಯದ ನಂತರ ವೈದ್ಯರು ಬಾಘೇಲ್ ಅವರು ಮೃತಪಟ್ಟಿದ್ದಾರೆ, ಶವವನ್ನು ಮನೆಗೆ ತೆಗೆದುಕೊಂಡು ಹೋಗಿ ಎಂದು ಹೇಳಿಬಿಟ್ಟರು. ಮನೆಯವರೆಲ್ಲರೂ ದುಃಖವನ್ನು ಕಣ್ಣಲ್ಲಿ ತುಂಬಿಕೊಂಡು ಮನೆಗೆ ಹೊರಟರು, ಮನೆಯಲ್ಲಿ ಅಂತ್ಯಕ್ರಿಯೆಗೆ ತಯಾರಿ ನಡೆಯುತ್ತಿತ್ತು, ಆ ಸಮಯದಲ್ಲಿ ಬಾಘೇಲ್ ಅವರ ದೇಹದಲ್ಲಿ ಚಲನವಲಗಳು ಕಾಣಿಸಿತ್ತು. ಈಗ ಮತ್ತೆ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಆರೋಗ್ಯ ಸ್ಥಿರವಾಗಿದೆ.

ಬಾಘೇಲ್ ಕಣ್ಣು ತೆರೆದಾಗ ಸಂಬಂಧಿಕರು ರೋದಿಸುತ್ತಿದ್ದರು ಮತ್ತು ಅವರ ದೇಹದಲ್ಲಿ ಚಲನೆ ಕಂಡುಬಂದಿತ್ತು. ಇದನ್ನು ಕಂಡು ಖುಷಿ ಪಟ್ಟ ಸಂಬಂಧಿಕರು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡುತ್ತಿದ್ದಾರೆ. ಸಹೋದರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಬಾಘೆಲ್ ಅವರ ಕಿರಿಯ ಸಹೋದರ ಲಖನ್ ಸಿಂಗ್ ಬಾಘೇಲ್ ತಿಳಿಸಿದ್ದಾರೆ. ಬಿಪಿ ಸಹಜ ಸ್ಥಿತಿಯೊಲ್ಲಿದೆ ಎಂದರು. ಉತ್ತಮ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಗ್ಯವಾಗಿದ್ದಾರೆ ಎಂದು ತಿಳಿಸಿದರು.

ಮಹೇಶ್ ಬಾಘೇಲ್ ಅವರನ್ನು ಪುಷ್ಪಾಂಜಲಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಅವರು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ ಎಂದು ಸಂಬಂಧಿಕರು ತಿಳಿಸಿದ್ದಾರೆ.

ಮತ್ತಷ್ಟು ಓದಿ: Mysore News: ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು; ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ

ಇದರ ನಂತರ, ಅವರನ್ನು ಸರಾಯ್ ಖ್ವಾಜಾ ಅವರ ನಿವಾಸಕ್ಕೆ ಕರೆದೊಯ್ಯಲಾಯಿತು. ಮನೆ ತಲುಪಿದ ನಂತರ ಪ್ರಜ್ಞೆ ಬಂದು ಕಣ್ಣು ತೆರೆದರು ಎಂದು ಅವರ ಮಕ್ಕಳಾದ ಅಭಿಷೇಕ್ ಮತ್ತು ಅಂಕಿತ್ ಹೇಳಿದ್ದಾರೆ.

ಇದನ್ನು ಕಂಡ ಕುಟುಂಬಸ್ಥರಲ್ಲಿ ಸಂತಸದ aಅಲೆಯೇ ಹರಿದಿತ್ತು,  ಬಾಘೇಲ್ ಅವರ ನಿಧನದ ಸುಳ್ಳು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿ ಎಲ್ಲರೂ ಶ್ರದ್ಧಾಂಜಲಿ ಸಲ್ಲಿಸಲು ಪ್ರಾರಂಭಿಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:49 am, Tue, 8 August 23

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!